ಖಾಸಗಿ ಶಾಲೆಗಳ ಬೋಧನಾ ಶುಲ್ಕ ನಿಗದಿಗೆ ಸಮಿತಿ ರಚನೆ ಪ್ರಸ್ತಾಪ; ರಾಜ್ಯ ಸರ್ಕಾರದಿಂದ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಕೆ

ಶೇಕಡಾ 70ರಷ್ಟು ಶುಲ್ಕ ಪಡೆಯುವಂತೆ ಸರ್ಕಾರ ಆದೇಶಿಸಿತ್ತು. ಶೇಕಡಾ 30ರಷ್ಟು ಶುಲ್ಕ ರಿಯಾಯಿತಿ ನೀಡುವಂತೆ ಸೂಚಿಸಿತ್ತು. ಆದರೆ, ಇದರ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ರಿಟ್ ಅರ್ಜಿ ಸಲ್ಲಿಸಿತ್ತು.

ಖಾಸಗಿ ಶಾಲೆಗಳ ಬೋಧನಾ ಶುಲ್ಕ ನಿಗದಿಗೆ ಸಮಿತಿ ರಚನೆ ಪ್ರಸ್ತಾಪ; ರಾಜ್ಯ ಸರ್ಕಾರದಿಂದ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಕೆ
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: ganapathi bhat

Updated on:Jun 15, 2021 | 5:15 PM

ಬೆಂಗಳೂರು: ಖಾಸಗಿ ಶಾಲೆಗಳಲ್ಲಿನ ಬೋಧನಾ ಶುಲ್ಕ ವಿಚಾರವಾಗಿ ಕರ್ನಾಟಕ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದೆ. ರಾಜ್ಯದ ಅಡ್ವೋಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ಈ ಬಗ್ಗೆ ಇಂದು (ಜೂನ್ 15) ಹೇಳಿಕೆ ನೀಡಿದ್ದಾರೆ. ಖಾಸಗಿ ಶಾಲೆಗಳಲ್ಲಿನ ಶುಲ್ಕ ನಿಗದಿ ಬಗ್ಗೆ ಸಮಿತಿ ರಚನೆ ಮಾಡುವಂತೆ ಪ್ರಸ್ತಾಪ ಮಾಡಲಾಗಿದೆ. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಸಮಿತಿ ರಚನೆ ಮಾಡಬೇಕು. ಬಳಿಕ, ಸಮಿತಿ ಸೂಚನೆಯಂತೆ ಶುಲ್ಕ ನಿಗದಿ ಮಾಡಲು ಪರಿಶೀಲನೆ ನಡೆಸಬೇಕು ಎಂದು ಹೇಳಲಾಗಿದೆ. ಈ ಬಗ್ಗೆ ವಿಚಾರಣೆಯನ್ನು ಜೂನ್ 21ಕ್ಕೆ ಹೈಕೋರ್ಟ್ ನಿಗದಿಪಡಿಸಿದೆ.

ಶೇಕಡಾ 70ರಷ್ಟು ಶುಲ್ಕ ಪಡೆಯುವಂತೆ ಸರ್ಕಾರ ಆದೇಶಿಸಿತ್ತು. ಶೇಕಡಾ 30ರಷ್ಟು ಶುಲ್ಕ ರಿಯಾಯಿತಿ ನೀಡುವಂತೆ ಸೂಚಿಸಿತ್ತು. ಆದರೆ, ಇದರ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ರಿಟ್ ಅರ್ಜಿ ಸಲ್ಲಿಸಿತ್ತು. ಕೊವಿಡ್​ನಿಂದ ಪೂರ್ಣ ಶುಲ್ಕ ಭರಿಸಲು ಪೋಷಕರಿಗೆ ಕಷ್ಟವಾಗಬಹುದು. ಕೊರೊನಾ ಹಾಗೂ ಲಾಕ್​ಡೌನ್​ನಿಂದ ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಹೀಗಾಗಿ ಶುಲ್ಕದ ವಿಚಾರದಲ್ಲಿ ಸರ್ಕಾರ ಆದೇಶ ನೀಡಿತ್ತು.

ಇದೀಗ ಕರ್ನಾಟಕ ರಾಜ್ಯ ಸರ್ಕಾರದಿಂದ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಕೆಯಾಗಿದೆ. ಹೈಕೋರ್ಟ್​ಗೆ ಎಜಿ ಪ್ರಭುಲಿಂಗ್ ನಾವದಗಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಜೂನ್ 21ಕ್ಕೆ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ನಿಗದಿಪಡಿಸಿದೆ.

ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸಂಘರ್ಷ ನಿವಾರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಪತ್ರ ಬರೆದ ಸಿದ್ದರಾಮಯ್ಯ

School Fees: 2021-22ನೇ ಸಾಲಿನ ಬೋಧನಾ ಶುಲ್ಕ ಹೆಚ್ಚಳ ಇಲ್ಲ; ಸಭೆಯಲ್ಲಿ ಹಲವು ನಿರ್ಧಾರ

Published On - 4:54 pm, Tue, 15 June 21