1 ಕೋಟಿ ಡೋಸ್ ಕೊರೊನಾ ಲಸಿಕೆ ಖರೀದಿಗೆ ರಾಜ್ಯ ಸರ್ಕಾರ ಆದೇಶ; 400 ಕೋಟಿ ವೆಚ್ಚ

ಕರ್ನಾಟಕ ರಾಜ್ಯ ಸರ್ಕಾರ 1 ಕೋಟಿ ಡೋಸ್ ಕೊರೊನಾ ಲಸಿಕೆ ಖರೀದಿಗೆ ಆದೇಶ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

1 ಕೋಟಿ ಡೋಸ್ ಕೊರೊನಾ ಲಸಿಕೆ ಖರೀದಿಗೆ ರಾಜ್ಯ ಸರ್ಕಾರ ಆದೇಶ; 400 ಕೋಟಿ ವೆಚ್ಚ
ಬಿ.ಎಸ್​. ಯಡಿಯೂರಪ್ಪ (ಸಂಗ್ರಹ ಚಿತ್ರ)
Follow us
guruganesh bhat
|

Updated on:Apr 27, 2021 | 3:08 PM

ಬೆಂಗಳೂರು: ಮೇ 1ರಿಂದ18 ವರ್ಷ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಸೂಚಿಸಿರುವ ಕಾರಣ 1 ಕೋಟಿ ಡೋಸ್​ ಲಸಿಕೆ ಖರೀದಿಗೆ ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದೆ. 400 ಕೋಟಿ ವೆಚ್ಚದಲ್ಲಿ ಹೊಸದಾಗಿ 1 ಕೋಟಿ ಡೋಸ್ ಲಸಿಕೆ ಖರೀದಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 

ಕರ್ನಾಟಕ ರಾಜ್ಯದಲ್ಲಿ ಗುರುವಾರ (ಏಪ್ರಿಲ್ 22) ಒಂದೇ ದಿನ 25,795 ಜನರಿಗೆ ಕೊರೊನಾ ದೃಢಪಟ್ಟಿದ್ದು, 123 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಅತಿಹೆಚ್ಚು ಅಂದರೆ, 15,244 ಜನರಲ್ಲಿ ಸೋಂಕು ದೃಢಪಟ್ಟಿದೆ. ನಗರದಲ್ಲಿ ಒಂದೇ ದಿನ ಕೊರೊನಾ ಸೋಂಕಿಗೆ 68 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 12,47,997ಕ್ಕೆ (12.47 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 13,885ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 10,37,857 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,96,236 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 5,98,919ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 5,450 ಜನರು ಸಾವನ್ನಪ್ಪಿದ್ದಾರೆ. 5,98,919 ಸೋಂಕಿತರ ಪೈಕಿ 4,55,655 ಜನರು ಗುಣಮುಖರಾಗಿದ್ದಾರೆ. 13,7813 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸಾವು? ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 123 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಬೆಂಗಳೂರು ನಗರದಲ್ಲಿ ಅತಿಹೆಚ್ಚು ಅಂದರೆ, 68 ಮಂದಿ ಸಾವನ್ನಪ್ಪಿದ್ದಾರೆ. ಉಳಿದಂತೆ ಕಲಬುರಗಿ 11, ಬಳ್ಳಾರಿ, ಧಾರವಾಡ, ತುಮಕೂರು ಜಿಲ್ಲೆಗಳಲ್ಲಿ ತಲಾ ಐವರು, ಬೆಂಗಳೂರು ಗ್ರಾಮಾಂತರ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ತಲಾ ನಾಲ್ವರು, ಮೈಸೂರು, ಬೀದರ್​​ ಜಿಲ್ಲೆಗಳಲ್ಲಿ ತಲಾ ಮೂವರು, ಬಾಗಲಕೋಟೆ, ಚಿಕ್ಕಬಳ್ಳಾಪುರ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಇಬ್ಬರು, ಬೆಳಗಾವಿ, ವಿಜಯಪುರ, ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

ಕೊವಿಡ್ ಸೋಂಕಿತರಿಗೆ ಚಿಕಿತ್ಸೆ; ಕೇಂದ್ರಕ್ಕೆ ನೊಟೀಸ್ ನೀಡಿದ ಸುಪ್ರೀಂಕೋರ್ಟ್

(Karnataka state govt orders 1 lakh dose covid vaccine purchase)

Published On - 8:01 pm, Thu, 22 April 21

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್