ಮೈಸೂರು, ಸೆ.25: ಕರ್ನಾಟಕ ರಾಜ್ಯಾದ್ಯಂತ ಕಾವೇರಿ ನೀರಿಗಾಗಿ ಹೋರಾಟ (Cauvery Protest) ಮುಂದುವರಿದಿದ್ದು, ನಾಳೆ ಬೆಂಗಳೂರು ಬಂದ್ಗೆ ಕರೆ ನೀಡಲಾಗಿದೆ. ಅಷ್ಟೇ ಅಲ್ಲದೆ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಷ್ಕರಗಳು ನಡೆಯಲಿವೆ. ಹೀಗಾಗಿ ಪದವಿ, ಸ್ನಾತಕೋತ್ತರ ಪರೀಕ್ಷೆಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (KSOU) ಮುಂದೂಡಿಕೆ ಮಾಡಿದೆ.
ಕಾವೇರಿ ನೀರಿನ ವಿಚಾರವಾಗಿ ರಾಜ್ಯಾದ್ಯಂತ ಮುಷ್ಕರ ಹಿನ್ನೆಲೆ ಸೆ.26, 28, 29ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಕೆಎಸ್ಒಯು ಕುಲಸಚಿವ ಕೆ.ಬಿ.ಪ್ರವೀಣ್ ಆದೇಶ ಹೊರಡಿಸಿದ್ದಾರೆ.
ಸೈಕಾಲಜಿ, ಹಿಂದಿ, ಎಂಎ ಪತ್ರಿಕೋದ್ಯಮ, ರಾಜಕೀಯ ಶಾಸ್ತ್ರ, ವಾಣಿಜ್ಯ ಶಾಸ್ತ್ರ, ಇತಿಹಾಸ ವಿಷಯ ಸೇರಿದಂತೆ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಆದೇಶಿಸಲಾಗಿದೆ.
ಇದನ್ನೂ ಓದಿ: ರಾಜ್ಯದ ಹಲವೆಡೆ ಧಗಧಗಿಸಿದ ಕಾವೇರಿ ಕಿಚ್ಚು; ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ವಿವರ
ಬೆಂಗಳೂರು ಬಂದ್ ಹಿನ್ನೆಲೆ ನಾಳೆ ನಡೆಯಬೇಕಿದ್ದ ಕಾನೂನು ವಿಶ್ವವಿದ್ಯಾನಿಲಯದ ಪರೀಕ್ಷೆಗಳು ಕೂಡ ಮುಂದೂಡಿಕೆಯಾಗಿವೆ. ನಾಳಿನ ಎಲ್ಲಾ ಪರೀಕ್ಷೆಗಳನ್ನು ಅಕ್ಟೋಬರ್ 8ಕ್ಕೆ ಮುಂದೂಡಿಕೆ ಮಾಡಿ ವಿವಿ ಮೌಲ್ಯಮಾಪನ ಕುಲಸಚಿವರು ಆದೇಶ ಹೊರಡಿಸಿದ್ದಾರೆ. ಉಳಿದ ಪರೀಕ್ಷೆಗಳು ಯಥಾ ರೀತಿ ನಡೆಯಲಿವೆ.
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರಕ್ಕೂ ಅಡಚಣೆ ಉಂಟಾಗಲಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಲಿದೆ. ಇದನ್ನು ತಪ್ಪಿಸಲು ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಕಾನೂನು ವಿಶ್ವವಿದ್ಯಾಲಯ ಕುಲಪತಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪರೀಕ್ಷೆ ಮುಂದೂಡಿಕೆಗೆ ನಿರ್ಧಾರ ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ