ಬೆಂಗಳೂರು: ಕೊವಿಡ್ 19 ಕರ್ತವ್ಯದಲ್ಲಿರುವ ಶಿಕ್ಷಕರಿಗೆ ಲಸಿಕೆ ನೀಡಿ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸರ್ಕಾರಕ್ಕೆ ಮನವಿ ಮಾಡಿದೆ. ಶಿಕ್ಷಕರಿಗೆ ಪ್ರಥಮ ಆದ್ಯತೆ ನೀಡಿ ಆದೇಶ ಹೊರಡಿಸುವಂತೆ ಸಚಿವ ಸುರೇಶ್ಕುಮಾರ್ಗೆ ಶಿಕ್ಷಕರ ಸಂಘ ಪತ್ರ ಬರೆದಿದೆ. ಬಸ್, ರೈಲ್ವೆ ನಿಲ್ದಾಣ, ಡಾಟಾ ಎಂಟ್ರಿ, ಕ್ವಾರೆಂಟೈನ್, ಸೂಪರ್ ವೈಸರ್, ಚೆಕ್ ಪೋಸ್ಟ್ಗಳಲ್ಲಿ ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಶಿಕ್ಷಕರಿಗೂ ಕೊರೊನಾ ಹರಡುವ ಸಾಧ್ಯತೆ ಇದೆ. ಹೀಗಾಗಿ ಲಸಿಕೆ ನೀಡುವಂತೆ ಆದೇಶ ಹೊರಡಿಸಬೇಕೆಂದು ಮನವಿ ಮಾಡಿದೆ.
ಕೊವಿಡ್ ಕರ್ತವ್ಯಕ್ಕೆ ನಿಯೋಜಿಸಿದ ಶಿಕ್ಷಕರಿಗೆ ಕೊರೊನಾ ಲಸಿಕೆ ದೊರೆಯದೆ ಇರುವುದು ವಿಷಾದನೀಯ ಸಂಗತಿ. ಹೀಗಾಗಿ ಶಿಕ್ಷಣ ಸಚಿವರು ಕೊವಿಡ್ ಕರ್ತವ್ಯಕ್ಕೆ ನಿಯೋಜಿಸಿರುವ ಶಿಕ್ಷಕರಿಗೆ ಪ್ರಥಮ ಆದ್ಯತೆಯಲ್ಲಿ ಕೊವಿಡ್ ಲಸಿಕೆಯನ್ನು ನೀಡುವಂತೆ ಸಂಬಂಧಿಸಿದ ಎಲ್ಲಾ ಇಲಾಖೆಗಳಿಗೆ ನಿರ್ದೇಶನವನ್ನು ನೀಡಿ ಆದೇಶವನ್ನು ಹೊರಡಿಸಬೇಕು. ಜೊತೆಗೆ ಕೊವಿಡ್ ಕೆಲಸದಲ್ಲಿ ನಿರತರಾದ ಶಿಕ್ಷಕರಿಗೆ ಸೋಂಕು ತಗುಲಿದರೆ ಅವರಿಗೆ ಆಸ್ಪತ್ರೆಗಳಲ್ಲಿ ಮತ್ತು ಅವರ ಕುಟುಂಬದವರಿಗೆ ಬೆಡ್ ವ್ಯವಸ್ಥೆ ಕಲ್ಪಿಸಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪತ್ರದಲ್ಲಿ ಒತ್ತಾಯಿಸಿದೆ.
ಇದನ್ನೂ ಓದಿ
ಗರ್ಭಿಣಿ ಮಹಿಳೆಗೆ ಚಿಕಿತ್ಸೆ ನೀಡಲು ವೈದ್ಯರ ಹಿಂದೇಟು; ವಿಜಯಪುರ ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆರೋಪ
(Karnataka State Primary School Teachers Association wrote letter to Suresh Kumar on vaccination of teachers on covid duty)