ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಸ್ಆರ್​​​ಟಿಸಿ

ಈ ಮೊದಲು ನಷ್ಟದಲ್ಲಿ ಓಡುತ್ತಿದ್ದ ಕೆಎಸ್ಆರ್​ಟಿಸಿ ಬಸ್​​ಗಳ ಸ್ಥಿತಿ ಈಗೀಗ ಸುಧಾರಿಸಿದ್ದು, ಮಾನವ ಅಭಿವೃದ್ಧಿ ಸಂಬಂಧಿಸಿದ ಹಲವು ಕಾರ್ಯಗಳನ್ನು ನಿಗಮವು ಕೈಗೊಳ್ಳುತ್ತಿವೆ. ಇದರ ಫಲವಾಗಿ 2023 ಫೆಬ್ರವರಿಯಲ್ಲಿ ರಾಷ್ಟ್ರ ಮಟ್ಟದ ಪಿಎಸ್​​ಯು (PSU) ಪ್ರಶಸ್ತಿ ಕೂಡ ಸಂಸ್ಥೆಗೆ ದೊರೆತಿತ್ತು.

ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಸ್ಆರ್​​​ಟಿಸಿ
Follow us
TV9 Web
| Updated By: Digi Tech Desk

Updated on:Aug 18, 2023 | 11:52 AM

ಬೆಂಗಳೂರು, ಆಗಸ್ಟ್ 17: 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಪಡೆದುಕೊಂಡಿದೆ. ವರ್ಲ್ಡ್ ಸಟ್ಟೈನಬಿಲಿಟಿ ಕಾಂಗ್ರೆಸ್ (World Suatainability Congress) ನೀಡುವ 14ನೇ ಆವೃತ್ತಿಯ 18ನೇ ಪ್ರಶಸ್ತಿಯನ್ನು ಕೆಎಸ್ಆರ್​​ಟಿಸಿ ಸ್ವೀಕರಿಸಿದೆ. ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಪ್ರಶಸ್ತಿ ಲಭಿಸಿದ್ದು, ವರ್ಲ್ಡ್ ಸಟ್ಟೈನಬಿಲಿಟಿ ಕಾಂಗ್ರೆಸ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಗುರುವಾರ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ನಿಗಮದ ಪರವಾಗಿ ಮುಖ್ಯ ಲೆಕ್ಕಾಧಿಕಾರಿ ಡಾ. ಲತಾ ಟಿ.ಎಸ್​​ ಅವರು ಪ್ರಶಸ್ತಿ ಸ್ವೀಕರಿಸಿದರು. ಹಳೆ ಬಸ್ಸುಗಳ ನವೀಕರಣ, ಹೊಸ ಬಸ್​ಗಳ ಖರೀದಿ, 13 ಸಾವಿರ ಸಿಬ್ಬಂದಿ ನೇಮಕದಂತಹ ನಿರ್ಧಾರದಿಂದ ಇದು ಸಾಧ್ಯವಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಗುಣಮಟ್ಟದ ಸೇವೆಯನ್ನು ನೀಡಲು ಸಹಕಾರಿಯಾಗಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಈ ಮೊದಲು ನಷ್ಟದಲ್ಲಿ ಓಡುತ್ತಿದ್ದ ಕೆಎಸ್ಆರ್​ಟಿಸಿ ಬಸ್​​ಗಳ ಸ್ಥಿತಿ ಈಗೀಗ ಸುಧಾರಿಸಿದ್ದು, ಮಾನವ ಅಭಿವೃದ್ಧಿ ಸಂಬಂಧಿಸಿದ ಹಲವು ಕಾರ್ಯಗಳನ್ನು ನಿಗಮವು ಕೈಗೊಳ್ಳುತ್ತಿವೆ. ಇದರ ಫಲವಾಗಿ 2023 ಫೆಬ್ರವರಿಯಲ್ಲಿ ರಾಷ್ಟ್ರ ಮಟ್ಟದ ಪಿಎಸ್​​ಯು (PSU) ಪ್ರಶಸ್ತಿ ಸಂಸ್ಥೆಗೆ ದೊರೆತಿತ್ತು.

ಹೊಸ ರೂಪ ಪಡೆದುಕೊಂಡ ಹಳೆ ಬಸ್​ಗಳು

ಕೋವಿಡ್ ಸಾಂಕ್ರಾಮಿಕದ ನಂತರ ನಷ್ಟದಲ್ಲಿ ಸಾಗುತ್ತಿದ್ದ ಕೆಎಸ್ಆರ್​ಟಿಸಿಯು ಹಳೆ ಬಸ್​​ಗಳನ್ನು ನವೀಕರಿಸಿ ರಸ್ತೆಗಿಳಿಸುವ ಯೋಜನೆಯನ್ನು ಕೈಗೊಂಡಿದೆ. ಹೊಸ ಬಸ್ ಕೊಳ್ಳುವುದರ ಜತೆಗೆ ಬದಲಾಗಿ ಹಳೆ ಬಸ್​​ಗಳನ್ನೇ ನವೀಕರಿಸಿ ಓಡಿಸುವುದರಿಂದ ಹಣ ಉಳಿತಾಯವಾಗಲಿದೆ ಎಂಬ ಯೋಚನೆಯೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ 10 ಲಕ್ಷ ಕಿಲೋ ಮೀಟರ್ ಸಂಚರಿಸಿದ 8,100 ಬಸ್​​​ಗಳಿದ್ದು, 1000 ಬಸ್​ಗಳನ್ನು ನವೀಕರಿಸಲಾಗುತ್ತಿದೆ. ಬಸ್​​ನಲ್ಲಿ ತುಕ್ಕು ಹಿಡಿದ ಭಾಗಗಳನ್ನು ತೆಗೆದು ಹೊಸ ಭಾಗಗಳನ್ನು ಜೋಡಿಸಿ ಬಸ್​ಗೆ ಹೊಸ ಟಚ್ ನೀಡಲಾಗುತ್ತಿದೆ.

ಇದನ್ನೂ ಓದಿ: ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆಯಂದು KSRTC ಬಸ್​​ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ಶಕ್ತಿ ಯೋಜನೆಯಿಂದ ಹೆಚ್ಚಿದ ಜನಸಂಚಾರ

ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಹಿನ್ನಲೆಯಲ್ಲಿ ಸರ್ಕಾರಿ ಬಸ್​​ಗಳ ಬಳಕೆಯು ಹೆಚ್ಚಾಗಿದ್ದು, ಮಹಿಳೆಯರಿಗೆ ಉಚಿತ ಸೇವೆಯನ್ನು ನೀಡುವಲ್ಲಿ ಮುಂಚೂಣಿಯಲ್ಲಿದೆ. ಕೇವಲ ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೇ ಹಲವಾರು ತೀರ್ಥ ಕ್ಷೇತ್ರಗಳಿಗೆ ತೆರಳುವ ಬಸ್​​​ಗಳಲ್ಲಿ ಸಂಚರಿಸುವ ಮಹಿಳೆಯರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ.

ಪರಿಸರಸ್ನೇಹಿ ಬಸ್​ಗಳು

ಕರ್ನಾಟಕ ಸಾರಿಗೆ ಸಂಸ್ಥೆಯು ಪರಿಸರಸ್ನೇಹಿ ಬಸ್​ಗಳಿಗೂ ಸಾಕಷ್ಟು ಒತ್ತು ನೀಡಿದೆ. ಈಗಾಗಲೇ ರಾಜ್ಯದ ಹಲವೆಡೆ ಬಯೋ-ಡೀಸೆಲ್ ಆಧಾರಿತ ಬಸ್​ಗಳು ಸಂಚರಿಸುತ್ತಿವೆ. ಬೆಂಗಳೂರು ಮೈಸೂರು ರಸ್ತೆಯಲ್ಲಿ ಇಲೆಕ್ಟ್ರಿಕ್ ಬಸ್​​ಗಳು ಸಂಚರಿಸುತ್ತಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Thu, 17 August 23

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ