6 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ: 8 ತಿಂಗಳಲ್ಲಿ 51 ಪ್ರಶಸ್ತಿಗಳ ಗರಿಮೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ವರ್ಲ್ಡ್ ಮ್ಯಾನುಫ್ಯಾಕ್ಚರಿಂಗ್ ಕಾಂಗ್ರೆಸ್ ಹಾಗೂ ವರ್ಲ್ಡ್ ಮಾರ್ಕೆಟಿಂಗ್ ಕಾಂಗ್ರೆಸ್ 5 ಪ್ರಶಸ್ತಿಗಳು ಹಾಗೂ ನಿಗಮ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅವರಿಗೆ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ ಲಭಿಸಿರುತ್ತದೆ. ಇಂದು ಮುಂಬೈನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

6 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ: 8 ತಿಂಗಳಲ್ಲಿ 51 ಪ್ರಶಸ್ತಿಗಳ ಗರಿಮೆ
ಪ್ರಶಸ್ತಿ ಸ್ವೀಕರಿಸಿದ ಗಣ್ಯರು
Follow us
ಗಂಗಾಧರ​ ಬ. ಸಾಬೋಜಿ
|

Updated on:Feb 18, 2024 | 6:38 PM

ಮುಂಬೈ, ಫೆಬ್ರವರಿ 18: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಕ್ಕೆ ವರ್ಲ್ಡ್ ಮ್ಯಾನುಫ್ಯಾಕ್ಚರಿಂಗ್ ಕಾಂಗ್ರೆಸ್ (World Manufacturing Congress) ಹಾಗೂ ವರ್ಲ್ಡ್ ಮಾರ್ಕೆಟಿಂಗ್ ಕಾಂಗ್ರೆಸ್ (World Marketing Congress) 5 ಪ್ರಶಸ್ತಿಗಳು ಹಾಗೂ ನಿಗಮ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯವರಿಗೆ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ ಲಭಿಸಿರುತ್ತದೆ. ಇಂದು ಮುಂಬೈನಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುನೈಟೆಡ್ ಸ್ಟೇಟ್ಸ್​​ನ ನಿನಾ ಇ ಉಡರ್ಡ ಅಸೋಸಿಯೇಟ್ಸ್​ ಅಧ್ಯಕ್ಷರು ಹಾಗೂ ಮುಖ್ಯಸ್ಥರು ಮಿಸ್. ನಿನಾ ಇ ಉಡರ್ಡ ಹಾಗೂ ದುಬೈನ ಓಝೋನ್ ಗ್ರೂಪ್​ ಮಾಲೀಕರು ಮತ್ತು ಸಂಸ್ಥಾಪಕರಾದ ಡಾ. ಓವಿಲಿಯಾ ಫೆರ್ನಾಂಡಿಸ್​ ಅವರು ನಿಗಮಕ್ಕೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ.

ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ.ಎಸ್ ಅವರಿಗೆ ವಿಶ್ವ ಮಾರ್ಕೆಟಿಂಗ್ ಉತ್ಕೃಷ್ಟತೆಗಾಗಿ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿಯ ಶಕ್ತಿ ಯೋಜನೆಗೆ ಒಲಿದು ಬಂದ SKOCH ರಾಷ್ಟ್ರೀಯ ಪ್ರಶಸ್ತಿ; ಕಾರ್ಮಿಕ ಕಲ್ಯಾಣಕ್ಕೂ ಪ್ರಶಸ್ತಿ

ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ.ಎಸ್, ವಿಭಾಗೀಯ ತಾಂತ್ರಿಕ ಅಭಿಯಂತರರು ಹೆಚ್​​ಎಸ್​ ಸತೀಶ್, ವಿಭಾಗೀಯ ತಾಂತ್ರಿಕ ಶಿಲ್ಪಿ ಸೌಮ್ಯ ಸಿ ಹಾಗೂ ಸಹಾಯಕ ಆಡಳಿತಾಧಿಕಾರಿ ಶಿಬಾ.ಎಸ್​ ಅವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ನಿಗಮಕ್ಕೆ ಈ ಕೆಳಕಂಡ ವರ್ಗಗಳಲ್ಲಿ ಪ್ರಶಸ್ತಿ ಲಭಿಸಿದೆ

  1. ವಿದ್ಯುತ್ ವಾಹನಗಳ ಕೈಗಾರಿಕಾ ನಾಯಕತ್ವ ಪ್ರಶಸ್ತಿ. ಇ.ವಿ.ಪವರ್ ಪ್ಲಸ್​​
  2. ಜಾಗತಿಕ ಬ್ರಾಂಡ್ ಉತ್ಕೃಷ್ಟತೆ ಪ್ರಶಸ್ತಿ: ಅತ್ಯುತ್ತಮ ಬ್ರಾಂಡಿಂಗ್ ಮತ್ತು ಮಾರ್ಕೆಟಿಂಗ್ ಉಪಕ್ರಮ
  3. ವರ್ಷದ ವ್ಯಾವಹಾರಿಕ ನಾಯಕತ್ವ ಪ್ರಶಸ್ತಿ: ಅತ್ಯುತ್ತಮ ವಿನೂತನ ಉಪಕ್ರಮಸಂಸ್ಥೆ
  4. ಜಾಗತಿಕ ಮಾನವ ಸಂಪನ್ಮೂಲ ಉತ್ಕೃಷ್ಟತೆ ಪ್ರಶಸ್ತಿ: ಕಾರ್ಮಿಕರೊಂದಿಗೆ ಉತ್ತಮ ಭಾಂದವ್ಯ ಹೊಂದಿರುವ ಸಂಸ್ಥೆ
  5. ಜಾಗತಿಕ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ: ಜಾಗತಿಕ ಮಾನವ ಸಂಪನ್ಮೂಲ ಉಪಕ್ರಮ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:34 pm, Sun, 18 February 24

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ