ಮುಂಬೈ, ಫೆಬ್ರವರಿ 18: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಕ್ಕೆ ವರ್ಲ್ಡ್ ಮ್ಯಾನುಫ್ಯಾಕ್ಚರಿಂಗ್ ಕಾಂಗ್ರೆಸ್ (World Manufacturing Congress) ಹಾಗೂ ವರ್ಲ್ಡ್ ಮಾರ್ಕೆಟಿಂಗ್ ಕಾಂಗ್ರೆಸ್ (World Marketing Congress) 5 ಪ್ರಶಸ್ತಿಗಳು ಹಾಗೂ ನಿಗಮ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯವರಿಗೆ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ ಲಭಿಸಿರುತ್ತದೆ. ಇಂದು ಮುಂಬೈನಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುನೈಟೆಡ್ ಸ್ಟೇಟ್ಸ್ನ ನಿನಾ ಇ ಉಡರ್ಡ ಅಸೋಸಿಯೇಟ್ಸ್ ಅಧ್ಯಕ್ಷರು ಹಾಗೂ ಮುಖ್ಯಸ್ಥರು ಮಿಸ್. ನಿನಾ ಇ ಉಡರ್ಡ ಹಾಗೂ ದುಬೈನ ಓಝೋನ್ ಗ್ರೂಪ್ ಮಾಲೀಕರು ಮತ್ತು ಸಂಸ್ಥಾಪಕರಾದ ಡಾ. ಓವಿಲಿಯಾ ಫೆರ್ನಾಂಡಿಸ್ ಅವರು ನಿಗಮಕ್ಕೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ.
ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ.ಎಸ್ ಅವರಿಗೆ ವಿಶ್ವ ಮಾರ್ಕೆಟಿಂಗ್ ಉತ್ಕೃಷ್ಟತೆಗಾಗಿ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಇದನ್ನೂ ಓದಿ: ಕೆಎಸ್ಆರ್ಟಿಸಿಯ ಶಕ್ತಿ ಯೋಜನೆಗೆ ಒಲಿದು ಬಂದ SKOCH ರಾಷ್ಟ್ರೀಯ ಪ್ರಶಸ್ತಿ; ಕಾರ್ಮಿಕ ಕಲ್ಯಾಣಕ್ಕೂ ಪ್ರಶಸ್ತಿ
ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ.ಎಸ್, ವಿಭಾಗೀಯ ತಾಂತ್ರಿಕ ಅಭಿಯಂತರರು ಹೆಚ್ಎಸ್ ಸತೀಶ್, ವಿಭಾಗೀಯ ತಾಂತ್ರಿಕ ಶಿಲ್ಪಿ ಸೌಮ್ಯ ಸಿ ಹಾಗೂ ಸಹಾಯಕ ಆಡಳಿತಾಧಿಕಾರಿ ಶಿಬಾ.ಎಸ್ ಅವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:34 pm, Sun, 18 February 24