AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಶಾಲೆಗಳ ಬೇಸಿಗೆ ರಜಾ ಅವಧಿ ಪರಿಷ್ಕರಣೆ: ಸಚಿವ ಸುರೇಶ್​ ಕುಮಾರ್

ಕೊವಿಡ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ ಎಂದು ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ.

ರಾಜ್ಯದ ಶಾಲೆಗಳ ಬೇಸಿಗೆ ರಜಾ ಅವಧಿ ಪರಿಷ್ಕರಣೆ: ಸಚಿವ ಸುರೇಶ್​ ಕುಮಾರ್
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
shruti hegde
|

Updated on:May 05, 2021 | 3:20 PM

Share

ಬೆಂಗಳೂರು: ಕೊರೊನಾ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಶಾಲೆಗಳಿಗೆ ಬೇಸಿಗೆ ರಜೆ ಅವಧಿ ವಿಸ್ತರಿಸಲಾಗಿದೆ. ಈ ಕುರಿತಂತೆ ಮಾತನಾಡಿದ ಸಚಿವ ಸುರೇಶ್​ ಕುಮಾರ್​, ಕೊವಿಡ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ ಎಂದು ಹೇಳಿದ್ದಾರೆ.

ಬೇಸಿಗೆ ರಜೆಯ ಕುರಿತಾಗಿ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ  ಬಗ್ಗೆ ಮಾತನಾಡಿದ ಸಚಿವ ಸುರೇಶ್​ ಕುಮಾರ್​,  ಪ್ರಾಥಮಿಕ ಶಾಲೆಗಳಿಗೆ ಜೂನ್ 14ರವರೆಗೂ ಹಾಗೂ ಪ್ರೌಢ ಶಾಲೆಗಳಿಗೆ ಮೇ 31ರವರೆಗೂ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರೌಢ ಶಾಲೆಯ ಶಿಕ್ಷಕರು ರಜೆಯ ಅವಧಿಯಲ್ಲಿ ಎಸ್​ಎಸ್​ಎಲ್​ಸಿ ಮಕ್ಕಳ ಪರೀಕ್ಷಾ ಸಿದ್ಧತೆ ಬಗ್ಗೆ ಗಮನ ಹರಿಸಬೇಕು. ವಿದ್ಯಾರ್ಥಿಗಳ ಜತೆ ದೂರವಾಣಿ ಸಂಪರ್ಕದಲ್ಲಿರಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಕಲಿಕೆ ಬಗ್ಗೆ ಪ್ರೇರೇಪಿಸಬೇಕು. ಜೂನ್ 1ರಿಂದ 14ರವರೆಗೆ SSLC ವಿದ್ಯಾರ್ಥಿಗಳಿಗೆ ಪುನರ್​ಮನನ ತರಗತಿ ಆರಂಭವಾಗುತ್ತದೆ. ಇನ್ನು ಜೂನ್ 15ರಿಂದ 8 ಮತ್ತು 9ನೇ ತರಗತಿಗಳು ಪ್ರಾರಂಭವಾಗುತ್ತದೆ. ಈ ಕುರಿತಂತೆ ರಾಜ್ಯ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಪಾಯಕಾರಿ ಮಟ್ಟಕ್ಕೆ ವಾಯುಮಾಲಿನ್ಯ; ನೇಪಾಳದಲ್ಲಿ ಶಾಲೆಗಳಿಗೆ ರಜೆ ಘೋಷಣೆ

Published On - 2:45 pm, Wed, 5 May 21

Follow Us
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ