ಜ 17 ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ-2025: ಲಾಂಛನ ಬಿಡುಗಡೆ‌ ಮಾಡಿದ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಕ್ರೀಡಾಕೂಟ-2025 ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಜನವರಿ 17 ರಿಂದ 23 ರವರೆಗೆ ನಡೆಯಲಿದೆ. ಮುಖ್ಯಮಂತ್ರಿಗಳು ಲೋಗೋ ಬಿಡುಗಡೆ ಮಾಡಿದ್ದು, ಸುಮಾರು 4500 ಜನರು ಭಾಗವಹಿಸುವ ನಿರೀಕ್ಷೆಯಿದೆ. 25 ಕ್ರೀಡಾ ವಿಭಾಗಗಳನ್ನು ಒಳಗೊಂಡ ಈ ಕ್ರೀಡಾಕೂಟದ ಯಶಸ್ವಿ ಆಯೋಜನೆಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಮಂಗಳೂರು ಮತ್ತು ಉಡುಪಿ ಜಿಲ್ಲಾಡಳಿತಗಳು ಅಗತ್ಯ ವ್ಯವಸ್ಥೆಗೆ ಸೂಚಿಸಲಾಗಿದೆ.

ಜ 17 ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ-2025: ಲಾಂಛನ ಬಿಡುಗಡೆ‌ ಮಾಡಿದ ಸಿಎಂ ಸಿದ್ದರಾಮಯ್ಯ
ಜ 17 ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ-2025: ಲಾಂಛನ ಬಿಡುಗಡೆ‌ ಮಾಡಿದ ಸಿಎಂ ಸಿದ್ದರಾಮಯ್ಯ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 23, 2024 | 9:41 PM

ಬೆಂಗಳೂರು, ಡಿಸೆಂಬರ್​ 23: ಜನವರಿ 17ರಿಂದ  23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಕರ್ನಾಟಕ ಕ್ರೀಡಾಕೂಟ-2025 (Karnataka State Games 2025) ಆಯೋಜಿಸಲಾಗಿದೆ. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ- ಉಡುಪಿ ಜಿಲ್ಲಾಡಳಿತ ಸಹಯೋಗದಲ್ಲಿ ಕ್ರೀಡಾಕೂಟ  ನಡೆಯಲಿದೆ. ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಆಯಾ ಜಿಲ್ಲಾಡಳಿತಕ್ಕೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದು, ಲಾಂಛನ ಬಿಡುಗಡೆ‌ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ಕ್ರೀಡಾಕೂಟದ ಲೋಗೋದಲ್ಲಿನ ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು, ತಿಳಿನೀಲಿ ಬಣ್ಣವು ಕಡಲಿನ ಅಗಾಧತೆಯನ್ನು, ಜತೆಗೆ ಸೋಲು- ಗೆಲುವುಗಳಲ್ಲಿ ಕ್ರೀಡಾಪಟುಗಳ ಶಾಂತತೆ ಮತ್ತು ಶ್ರಮವನ್ನು ಪ್ರತಿನಿಧಿಸುವ ಈ ಲೋಗೋ ಅರ್ಥಪೂರ್ಣವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಕೈಗಾರಿಕಾ ವಲಯದ 9,823 ಕೋಟಿ ರೂ. ಮೊತ್ತದ ಪ್ರಸ್ತಾವನೆಗಳಿಗೆ ಸಿಎಂ ನೇತೃತ್ವದ ಸಭೆ ಅನುಮೋದನೆ

ಕರ್ನಾಟಕ ಕ್ರೀಡಾಕೂಟ-2025 ಅನ್ನು ಜನವರಿ 17ರಿಂದ 23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಲಾಗುತ್ತಿದ್ದು, ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತವು ಕ್ರೀಡಾಕೂಟದ ವ್ಯವಸ್ಥಿತ ಆಯೋಜನೆ ಸಂಬಂಧ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಜನವರಿ 17ರಂದು ಮಂಗಳೂರಿನಲ್ಲಿ, ಸಮಾರೋಪ ಸಮಾರಂಭ ಉಡುಪಿ ಜಿಲ್ಲೆಯಲ್ಲಿ ನಡೆಯಲಿದೆ. ಸುಮಾರು 25 ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸುತ್ತಿದ್ದು, ಕ್ರೀಡಾಕೂಟದ ಯಶಸ್ವಿ ಆಯೋಜನೆಗಾಗಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಕ್ರೀಡಾಕೂಟದಲ್ಲಿ 3,750 ಕ್ರೀಡಾಪಟುಗಳು ಹಾಗೂ 750 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರು ಸೇರಿದಂತೆ ಅಂದಾಜು 4,500 ಜನರು ಭಾಗವಹಿಸಲಿದ್ದು, ಊಟ, ತಿಂಡಿ, ವಸತಿ, ಸಾರಿಗೆ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಂಗಳೂರಿನಲ್ಲಿ 12 ಕ್ರೀಡೆಗಳು ಹಾಗೂ ಉಡುಪಿ ಮತ್ತು ಮಣಿಪಾಲಗಳಲ್ಲಿ 11 ಕ್ರೀಡೆಗಳು ಆಯೋಜನೆಗೊಳ್ಳಲ್ಲಿದ್ದು, ಶೂಟಿಂಗ್ ಮತ್ತು ಜಿಮ್ನಾಸ್ಟಿಕ್ ಕ್ರೀಡೆಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು.

ಇದನ್ನೂ ಓದಿ: ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಹೆಚ್​ಡಿ ಕುಮಾರಸ್ವಾಮಿ ಗುಡ್ ನ್ಯೂಸ್

ಸಭೆಯಲ್ಲಿ ಗೃಹ ಸಚಿವ ಡಾ. ಪರಮೇಶ್ವರ್, ಇಂಧನ ಸಚಿವ ಕೆ.ಜೆ ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ. ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಹಾಗೂ ಇಲಾಖೆಯ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಈರಣ್ಣ ಬಸವ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:37 pm, Mon, 23 December 24

ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ