ತಪ್ಪು ಮಾಡಿದ್ರೆ ಬಿಡುವ ಪ್ರಶ್ನೆಯೇ ಇಲ್ಲ: ಬಿಎಸ್​ವೈ ಪೋಕ್ಸೋ ಕೇಸ್​​ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಖಡಕ್ ಮಾತು

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರೆ ಅನುಮಾಸ್ಪದ ಸಾವಿನ ಬಗ್ಗೆ ಸಮಗ್ರ ತನಿಖೆಗೆ ಒಳಪಡಿಸುವಂತೆ ಕೋರಿ ರಾಜ್ಯ ಮಹಿಳಾ ಆಯೋಗ, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ. ಅಲ್ಲದೇ ತಪ್ಪು ಮಾಡಿದ್ದರೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಖಡಕ್ ಆಗಿ ಹೇಳಿದ್ದಾರೆ.

ತಪ್ಪು ಮಾಡಿದ್ರೆ ಬಿಡುವ ಪ್ರಶ್ನೆಯೇ ಇಲ್ಲ: ಬಿಎಸ್​ವೈ ಪೋಕ್ಸೋ ಕೇಸ್​​ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಖಡಕ್ ಮಾತು
ಬಿಎಸ್ ಯಡಿಯೂರಪ್ಪ
Follow us
ರಮೇಶ್ ಬಿ. ಜವಳಗೇರಾ
|

Updated on: Sep 02, 2024 | 2:58 PM

ಬೆಂಗಳೂರು, (ಸೆಪ್ಟೆಂಬರ್ 02): ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆರೋಪ ಕೇಳಿಬಂದಿದ್ದು, ಈ ಪೋಕ್ಸೋ ಪ್ರಕರಣ ವಿಚಾರಣೆ ಹೈಕೋರ್ಟ್​​ನಲ್ಲಿದೆ. ಇದರ ಮಧ್ಯ ದೂರುದಾರೆ ಸಂತ್ರಸ್ತೆ ತಾಯಿ ಸಾವಿನ ಬಗ್ಗೆ ಅನುಮಾನಮಾನಗಳು ವ್ಯಕ್ತವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ.

ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಆರೋಪ ಮಾಡಿದ್ದ ಮಹಿಳೆಯ ಸಾವಿನ ಪ್ರಕರಣದ ಕುರಿತು ಪೊಲೀಸ್ ತನಿಖೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಒತ್ತಾಯಿಸಿದೆ. ಅಲ್ಲದೆ, ಮಹಿಳೆಯ ಅನುಮಾನಾಸ್ಪದ ಸಾವು ಹಾಗೂ ಅಂತ್ಯಸಂಸ್ಕಾರದ ಕುರಿತು ವರದಿ ಸಲ್ಲಿಸುವಂತೆ ಬೆಂಗಳೂರು ಪೊಲೀಸರಿಗೆ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಆಯೋಗ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬಿಎಸ್ ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ದೂರುದಾರೆ ಸಾವು

ತಪ್ಪು ಮಾಡಿದ್ದರೆ ಬಿಡುವ ಪ್ರಶ್ನೆಯೇ ಇಲ್ಲ

ಇನ್ನು ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ, ಪ್ರಕರಣದ ತನಿಖೆಯ ಮಾಹಿತಿ ನೀಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದೇನೆ. ಪತ್ರ ಬರೆದಿದ್ದೇನೆ. ಪ್ರಕರಣದಲ್ಲಿ ಮಾಜಿ ಸಿಎಂ ಆಗಿರಲಿ ಜನ ಸಾಮಾನ್ಯರೇ ಇರಲಿ. ತಪ್ಪು ಮಾಡಿದ್ದರೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಖಡಕ್ ಆಗಿ ಹೇಳಿದರು.

ಸಂತ್ರಸ್ತೆಯ ತಾಯಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮಹಿಳೆ ಸಾವಿನ ಬಗ್ಗೆ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದಷ್ಟೆ ಮಹಿಳೆಯ ಪುತ್ರಿ ಭೇಟಿಯಾಗಿದ್ದರು. ಕ್ಯಾನ್ಸರ್​​​ನಿಂದ ದಿಢೀರ್​​ ಸಾವು ಹೇಗೆ ಉಂಟಾಗುತ್ತೆ ಎಂಬುವುದೇ ಪ್ರಶ್ನೆ? ಮಹಿಳೆ ಶವ ಹಸ್ತಾಂತರ ವೇಳೆಯೂ ಹಲವು ಲೋಪಗಳು ಉಂಟಾಗಿವೆ. ಇದೆಲ್ಲಾ ವಿಚಾರಗಳು ಸಾಕಷ್ಟು ಅನುಮಾನಕ್ಕೆ ಕಾರಣವಾಗಿವೆ. ಮಹಿಳೆ ಸಾವಿನ ಬಗ್ಗೆ ಸಂತ್ರಸ್ತೆ ಕುಟುಂಬದವರು ಹುಳಿಮಾವು​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿಸಿದರು.

ಪ್ರಕರಣದ ಹಿನ್ನೆಲೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ, ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ದೂರಿನಲ್ಲಿ ಉಲ್ಲೇಖಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಉದ್ಯಮಿಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ಸದಾಶಿವನಗರ ಠಾಣೆಗೆ ದೂರು ನೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ