AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಬ್ ರಿಜಿಸ್ಟರ್ ಕಚೇರಿ ಕೆಲಸದಲ್ಲಿ ಬದಲಾವಣೆ: ಭಾನುವಾರವೂ ಕಾರ್ಯನಿರ್ವಹಿಸಲು ಆದೇಶ

ಕರ್ನಾಟಕದಲ್ಲಿ ಸಬ್ ರಿಜಿಸ್ಟರ್ ಕಚೇರಿಗಳ ಕಾರ್ಯನಿರ್ವಹಣೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರವು ಜಿಲ್ಲಾ ಉಪನೋಂದಣಾಧಿಕಾರಿಗಳ ಕಚೇರಿಗಳು ವಾರಾಂತ್ಯದಲ್ಲಿ ಕಾರ್ಯನಿರ್ವಹಿಸುವಂತೆ ಆದೇಶಿಸಿದೆ. ಬೆಂಗಳೂರು ಮತ್ತು ಇತರ ಜಿಲ್ಲಾ ಕೇಂದ್ರಗಳಲ್ಲಿ ಆಯ್ದ ಕಚೇರಿಗಳು 2 ಮತ್ತು 4ನೇ ಶನಿವಾರ, ಭಾನುವಾರದಂದು ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕಿದೆ.

ಸಬ್ ರಿಜಿಸ್ಟರ್ ಕಚೇರಿ ಕೆಲಸದಲ್ಲಿ ಬದಲಾವಣೆ: ಭಾನುವಾರವೂ ಕಾರ್ಯನಿರ್ವಹಿಸಲು ಆದೇಶ
Sub Registrar Office
ರಮೇಶ್ ಬಿ. ಜವಳಗೇರಾ
|

Updated on:May 27, 2025 | 8:42 PM

Share

ಬೆಂಗಳೂರು (ಮೇ 27): ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕದಲ್ಲಿ ಜಿಲ್ಲೆಗೆ ಒಂದು ಉಪನೋಂದಣಾಧಿಕಾರಿಗಳ ಕಚೇರಿಯು 2 ಮತ್ತು 4ನೇ ಶನಿವಾರ ಹಾಗೂ ಎಲ್ಲಾ ಭಾನುವಾರಗಳಂದು ಕಾರ್ಯನಿರ್ವಹಿಸಲು ಸರ್ಕಾರ ಆದೇಶ ಹೊರಡಿಸಿದೆ. ಇನ್ನು ರಜಾ ದಿನ ಕಾರ್ಯನಿರ್ವಹಿಸುವ ಉಪನೋಂದಣಾಧಿಕಾರಿಗಳ ಕಚೇರಿಗೆ ಮಂಗಳವಾರ ರಜಾ ದಿನ ಎಂದು ಘೋಷಿಸಿ ಆದೇಶಿಸಲಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನ ಬಸವನಗುಡಿ ಉಪನೋಂದಣಾಧಿಕಾರಿಗಳ ಕಚೇರಿ, ಗಾಂಧಿನಗರ ಉಪನೋಂದಣಾಧಿಕಾರಿಗಳ ಕಚೇರಿ, ಜಯನಗರ ಉಪನೋಂದಣಾಧಿಕಾರಿಗಳ ಕಚೇರಿ, ರಾಜಾಜಿನಗರದ ಮಾದನಾಯಕನಹಳ್ಳಿ ಉಪನೋಂದಣಾಧಿಕಾರಿಗಳ ಕಚೇರಿ, ಶಿವಾಜಿನಗರ ಉಪನೋಂದಣಾಧಿಕಾರಿಗಳ ಕಚೇರಿಗಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಉಪನೋಂದಣಾಧಿಕಾರಿಗಳ ಕಚೇರಿ ಕೆಲಸದ ದಿನ ಮತ್ತು ರಜಾ ದಿನಗಳಂದೂ ಕಾರ್ಯ ನಿರ್ವಹಿಸಲಿವೆ.

ಅಧಿಸೂಚನೆಯಲ್ಲಿ ಏನಿದೆ?

ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳು ದಿನಾಂಕ:01-06-2025 ರಿಂದ 28-12-2025 ರ ವರೆಗೆ ಬರುವ 2ನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರಗಳ ರಜಾದಿನಗಳಂದು ಅನುಬಂಧದಲ್ಲಿ ದಿನಾಂಕಗಳನ್ನು ನಿಗಧಿಪಡಿಸಲಾಗಿದೆ. ಅದರಂತೆ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದೆ ಹಾಗೂ ನಿಗಧಿಪಡಿಸಿದ ದಿನಾಂಕಗಳಂದು ಕರ್ತವ್ಯ ನಿರ್ವಹಿಸಿದ ಉಪನೋಂದಣಾಧಿಕಾರಿಗಳು ಕಛೇರಿಗೆ ಕಾರ್ಯನಿರ್ವಹಿಸಿದ ರಜಾ ದಿನದಲ್ಲಿ ತಕ್ಷಣ ಬರುವ ಮುಂದಿನ ಮಂಗಳವಾರ ದಿನವನ್ನು ರಜಾ ದಿನವೆಂದು ಘೋಷಿಸಿದೆ.

ಯಾವೆಲ್ಲಾ ಉಪನೋಂದಣಾಧಿಕಾರಿ ಓಪನ್?

ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಾದ ಚಿತ್ರದುರ್ಗ ಉಪನೋಂದಣಾಧಿಕಾರಿಗಳ ಕಚೇರಿ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಉಪನೋಂದಣಾಧಿಕಾರಿಗಳ ಕಚೇರಿ, ದಾವಣಗೆರೆ ಉಪನೋಂದಣಾಧಿಕಾರಿಗಳ ಕಚೇರಿ, ರಾಮನಗರ ಉಪನೋಂದಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಉಪನೋಂದಣಾಧಿಕಾರಿಗಳ ಕಚೇರಿ, ತುಮಕೂರು ಜಿಲ್ಲೆಯ ಕುಣಿಗಲ್ ಉಪನೋಂದಣಾಧಿಕಾರಿಗಳ ಕಚೇರಿ, ಕೋಲಾರ ಉಪನೋಂದಣಾಧಿಕಾರಿಗಳ ಕಚೇರಿ, ಬೆಳಗಾವಿ ಜಿಲ್ಲೆಯ ಮೂಡಲಗಿ ಉಪನೋಂದಣಾಧಿಕಾರಿಗಳ ಕಚೇರಿ, ಬಾಗಲಕೋಟೆ ಜಿಲ್ಲೆಯ ಇಳಕಲ್ ಉಪನೋಂದಣಾಧಿಕಾರಿಗಳ ಕಚೇರಿ, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಉತ್ತರ ಉಪನೋಂದಣಾಧಿಕಾರಿಗಳ ಕಚೇರಿ, ಗದಗ್ ಜಿಲ್ಲೆಯ ಗಜೇಂದ್ರಗಢ ಉಪನೋಂದಣಾಧಿಕಾರಿಗಳ ಕಚೇರಿ, ಕಾರವಾರ/ ಉತ್ತರಕನ್ನಡದ ಕುಮಟಾ ಉಪನೋಂದಣಾಧಿಕಾರಿಗಳ ಕಚೇರಿ, ಹಾವೇರಿ ಉಪನೋಂದಣಾಧಿಕಾರಿಗಳ ಕಚೇರಿ, ವಿಜಯಪುರ ಉಪನೋಂದಣಾಧಿಕಾರಿಗಳ ಕಚೇರಿ, ಚಾಮರಾಜನಗರ ಜಿಲ್ಲೆಯ ಕುದೇರು ಉಪನೋಂದಣಾಧಿಕಾರಿಗಳ ಕಚೇರಿ, ಹಾಸನ ಜಿಲ್ಲೆಯ ಸಕಲೇಶಪುರ ಉಪನೋಂದಣಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆಯ ಮಡಿಕೇರಿ ಉಪನೋಂದಣಾಧಿಕಾರಿಗಳ ಕಚೇರಿ, ಚಿಕ್ಕಮಗಳೂರು ಉಪನೋಂದಣಾಧಿಕಾರಿಗಳ ಕಚೇರಿ, ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು ಸಿಟಿ ಉಪನೋಂದಣಾಧಿಕಾರಿಗಳ ಕಚೇರಿ, ಮಂಡ್ಯ ಜಿಲ್ಲೆಯ ಮಳವಳ್ಳಿ ಉಪನೋಂದಣಾಧಿಕಾರಿಗಳ ಕಚೇರಿ, ಮೈಸೂರು ಜಿಲ್ಲೆಯ ಮೈಸೂರು ದಕ್ಷಿಣ ಉಪನೋಂದಣಾಧಿಕಾರಿಗಳ ಕಚೇರಿ, ಉಡುಪಿ ಉಪನೋಂದಣಾಧಿಕಾರಿಗಳ ಕಚೇರಿ, ಕೊಪ್ಪಳ ಜಿಲ್ಲೆಯ ಗಂಗಾವತಿ ಉಪನೋಂದಣಾಧಿಕಾರಿಗಳ ಕಚೇರಿ, ಬೀದರ್ ಉಪನೋಂದಣಾಧಿಕಾರಿಗಳ ಕಚೇರಿ, ಕಲಬುರಗಿ ಉಪನೋಂದಣಾಧಿಕಾರಿಗಳ ಕಚೇರಿ, ರಾಯಚೂರು ಉಪನೋಂದಣಾಧಿಕಾರಿಗಳ ಕಚೇರಿ, ಯಾದಗಿರಿ ಉಪನೋಂದಣಾಧಿಕಾರಿಗಳ ಕಚೇರಿ, ಬಳ್ಳಾರಿ ಉಪನೋಂದಣಾಧಿಕಾರಿಗಳ ಕಚೇರಿ ಹಾಗೂ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಉಪನೋಂದಣಾಧಿಕಾರಿಗಳ ಕಚೇರಿಗಳು ಕಾರ್ಯನಿರ್ವಹಿಸಲಿವೆ ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

Published On - 8:40 pm, Tue, 27 May 25

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?