AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಕರ ನೇಮಕಾತಿ: ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ; ಪ್ರಮುಖ ದಿನಾಂಕಗಳ ವಿವರ ಇಲ್ಲಿದೆ!

ಶಾಲಾ ಶಿಕ್ಷಣ ಇಲಾಖೆಯು ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕವನ್ನು ಅಕ್ಟೋಬರ್ 26ರವರೆಗೆ ವಿಸ್ತರಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ ವಿವಿಧ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿಯನ್ನು ಅಕ್ಟೋಬರ್ 28ರೊಳಗೆ ಖಚಿತಪಡಿಸಿಕೊಳ್ಳಲು ಅವಕಾಶವಿದೆ. ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಪರೀಕ್ಷೆಗಳು ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ನಡೆಯಲಿವೆ.

ಶಿಕ್ಷಕರ ನೇಮಕಾತಿ: ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ; ಪ್ರಮುಖ ದಿನಾಂಕಗಳ ವಿವರ ಇಲ್ಲಿದೆ!
ಶಿಕ್ಷಕರ ನೇಮಕಾತಿImage Credit source: Getty Images
ಅಕ್ಷತಾ ವರ್ಕಾಡಿ
|

Updated on: Sep 25, 2026 | 2:13 PM

Share

ಶಾಲಾ ಶಿಕ್ಷಣ ಇಲಾಖೆಯು ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ವಿವಿಧ ಶಿಕ್ಷಕರ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿದೆ. ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಯಾವೆಲ್ಲಾ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ?

ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ ಸಾಮಾನ್ಯ ಶಿಕ್ಷಕ (ಪಿಎಸ್‌ಟಿ 1 ರಿಂದ 5ನೇ ತರಗತಿ), ಪಿ.ಇ ಗ್ರೇಡ್-2 (1 ರಿಂದ 8ನೇ ತರಗತಿ), ಜಿಪಿಟಿ (6 ರಿಂದ 8ನೇ ತರಗತಿ), ಸಿಎಸ್‌ಟಿ (1 ರಿಂದ 8ನೇ ತರಗತಿ) ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ಸಹಶಿಕ್ಷಕರ ವೃಂದ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಗ್ರೇಡ್-1 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಹೊಸ ದಿನಾಂಕಗಳು:

ಈಗಾಗಲೇ ಜಿಲ್ಲಾವಾರು ಅಧಿಸೂಚನೆ ಹೊರಡಿಸಿದ್ದ ಶಿಕ್ಷಣ ಇಲಾಖೆಯು, ಈ ಹಿಂದೆ ಪ್ರಕಟಿಸಿದ್ದ ಪರೀಕ್ಷೆಗಳನ್ನು ಮುಂದೂಡಿದೆ. ಪರಿಷ್ಕೃತ ವೇಳಾಪಟ್ಟಿಯಂತೆ ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅ.26 ರವರೆಗೆ ಅವಧಿ ವಿಸ್ತರಿಸಲಾಗಿದ್ದು, ಪಾವತಿಸಿರುವ ಅರ್ಜಿ ಶುಲ್ಕವನ್ನು ಖಚಿತಪಡಿಸಿಕೊಳ್ಳಲು ಅ. 28 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ವಕೀಲಿ ವೃತ್ತಿಗೆ ಗುಡ್‌ಬೈ ಹೇಳಿ ‘ಡಾಗ್ ವಾಕರ್’ ಆದ ಮಹಿಳೆ: ಈಗ ಕಮ್ಮಿ ಕೆಲಸ, ತಿಂಗಳಿಗೆ ಲಕ್ಷ ಲಕ್ಷ ಸಂಪಾದನೆ!

ಪರೀಕ್ಷಾ ದಿನಾಂಕ ಮತ್ತು ವೇಳಾಪಟ್ಟಿ ಮಾಹಿತಿ:

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಪರೀಕ್ಷೆಗಳನ್ನು ನವೆಂಬರ್ ಅಥವಾ ಡಿಸೆಂಬರ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದ ನಿಖರವಾದ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್​​ ಶಾಕ್​​: ಇಡಿ ಬೆನ್ನಲ್ಲೇ ಐಟಿ ರೇಡ್
ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್​​ ಶಾಕ್​​: ಇಡಿ ಬೆನ್ನಲ್ಲೇ ಐಟಿ ರೇಡ್
ಜನರ ನಡುವೆ ಬೆರೆಯಿರಿ, ಭಾರತದ ವೈವಿಧ್ಯತೆಯನ್ನು ಹತ್ತಿರದಿಂದ ಅರಿಯಿರಿ: ಮೋದಿ
ಜನರ ನಡುವೆ ಬೆರೆಯಿರಿ, ಭಾರತದ ವೈವಿಧ್ಯತೆಯನ್ನು ಹತ್ತಿರದಿಂದ ಅರಿಯಿರಿ: ಮೋದಿ
ಕರ್ನಾಟಕದ ಖಾಸಗಿ ಕಂಪನಿಯ ನೇಮಕಾತಿ ನೀತಿಗೆ ಬಿಜೆಪಿ ಆಕ್ಷೇಪ
ಕರ್ನಾಟಕದ ಖಾಸಗಿ ಕಂಪನಿಯ ನೇಮಕಾತಿ ನೀತಿಗೆ ಬಿಜೆಪಿ ಆಕ್ಷೇಪ
ನಕಲಿ ಪನೀರ್‌ ಹಾವಳಿಗೆ ಬ್ರೇಕ್ ಹಾಕಲು FSSAI ಬಿಗ್ ಪ್ಲಾನ್
ನಕಲಿ ಪನೀರ್‌ ಹಾವಳಿಗೆ ಬ್ರೇಕ್ ಹಾಕಲು FSSAI ಬಿಗ್ ಪ್ಲಾನ್
ವೀಕೆಂಡ್ ಎಪಿಸೋಡ್​ನಲ್ಲಿ ಮತ್ತಿಬ್ಬರು ಹೊರ ಹೋಗ್ತಾರೆ; ಬಿಗ್ ಬಾಸ್ ಸೂಚನೆ
ವೀಕೆಂಡ್ ಎಪಿಸೋಡ್​ನಲ್ಲಿ ಮತ್ತಿಬ್ಬರು ಹೊರ ಹೋಗ್ತಾರೆ; ಬಿಗ್ ಬಾಸ್ ಸೂಚನೆ
ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರ ಕುಸಿತ
ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರ ಕುಸಿತ
ವಿಶ್ವಸಂಸ್ಥೆಯಲ್ಲಿ ಹಫೀಜ್ ಸಯೀದ್ ಪ್ರಶ್ನೆಗೆ ಮುಖ ತಿರುಗಿಸಿದ ಪಾಕ್ ಪಿಎಂ
ವಿಶ್ವಸಂಸ್ಥೆಯಲ್ಲಿ ಹಫೀಜ್ ಸಯೀದ್ ಪ್ರಶ್ನೆಗೆ ಮುಖ ತಿರುಗಿಸಿದ ಪಾಕ್ ಪಿಎಂ
ಬಿಜೆಪಿ ನಾಯಕಿ ಮಾಧವಿ ಲತಾಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ
ಬಿಜೆಪಿ ನಾಯಕಿ ಮಾಧವಿ ಲತಾಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ
ಧಾರಾಕಾರ ಮಳೆಗೆ ನಡುಗಿದ ಸಿಕ್ಕಿಂ, ರಿಂಬಿ ಗ್ರಾಮದಲ್ಲಿ ಭೂಕುಸಿತ
ಧಾರಾಕಾರ ಮಳೆಗೆ ನಡುಗಿದ ಸಿಕ್ಕಿಂ, ರಿಂಬಿ ಗ್ರಾಮದಲ್ಲಿ ಭೂಕುಸಿತ
ಇಂದು ಅನಂತ ಪದ್ಮನಾಭ ವ್ರತ ಆಚರಣೆಯಿಂದ ಐಶ್ವರ್ಯ ಮತ್ತು ಯಶಸ್ಸು ಲಭ್ಯ
ಇಂದು ಅನಂತ ಪದ್ಮನಾಭ ವ್ರತ ಆಚರಣೆಯಿಂದ ಐಶ್ವರ್ಯ ಮತ್ತು ಯಶಸ್ಸು ಲಭ್ಯ