AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಗ್ರಾಮೀಣಾಭಿವೃದ್ಧಿಗೆ 25 ಕೋಟಿ ರೂ. ಘೋಷಿಸಿದ ಕೇಂದ್ರ

ಬಜೆಟ್​​​ನಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನೂ ಕೊಟ್ಟಿಲ್ಲ ಎಂಬ ವಿಚಾರ ತೀವ್ರ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಕರ್ನಾಟಕದ ಗ್ರಾಮೀಣಾಭಿವೃದ್ಧಿಗಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು 25 ಕೋಟಿ ರೂ. ಅನುದಾನ ಘೋಷಿಸಿದೆ. ಈ ಅನುದಾನ ಯಾವುದಕ್ಕೆಲ್ಲ ಬಳಕೆಯಾಗಲಿದೆ ಎಂಬ ವಿವರವನ್ನೂ ಸಚಿವಾಲಯ ನೀಡಿದೆ.

ಕರ್ನಾಟಕ ಗ್ರಾಮೀಣಾಭಿವೃದ್ಧಿಗೆ 25 ಕೋಟಿ ರೂ. ಘೋಷಿಸಿದ ಕೇಂದ್ರ
ಕರ್ನಾಟಕ ಗ್ರಾಮೀಣಾಭಿವೃದ್ಧಿಗೆ 25 ಕೋಟಿ ರೂ. ಘೋಷಿಸಿದ ಕೇಂದ್ರ (ಸಾಂದರ್ಭಿಕ ಚಿತ್ರ)
Ganapathi Sharma
|

Updated on: Jul 29, 2024 | 1:11 PM

Share

ನವದೆಹಲಿ, ಜುಲೈ 29: ಕರ್ನಾಟಕದ ಗ್ರಾಮೀಣ ಪ್ರದೇಶದ ಸಂಪರ್ಕ ವ್ಯವಸ್ಥೆ ಬಲಪಡಿಸಲು ಮತ್ತು ಕರ್ನಾಟಕದಲ್ಲಿ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವುದಕ್ಕಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು ಪಿಎಂ-ಜನ್​ಮಾನ್ (PM-JANMAN) ಯೋಜನೆ ಅಡಿಯಲ್ಲಿ 25.1796 ಕೋಟಿ ರೂ. ಅನುದಾನ ಘೋಷಣೆ ಮಾಡಿದೆ. 23.766 ಕಿಮೀ ವ್ಯಾಪ್ತಿಯ 18 ರಸ್ತೆಗಳು ಮತ್ತು 2 ಸೇತುವೆಗಳ ಕಾಮಗಾರಿಗಾಗಿ ಈ ಅನುದಾನ ಘೋಷಣೆ ಮಾಡಲಾಗಿದೆ.

ಅನುದಾನ ಘೋಷಣೆ ಬಗ್ಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಪ್ರಕಟಣೆ ಬಿಡುಗಡೆ ಮಾಡಿದ್ದು, ಅನುದಾನದಿಂದ ಏನೆಲ್ಲ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ವಿವರಿಸಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕವನ್ನು ಹೆಚ್ಚಿಸುವ ಮೂಲಕ, ದೂರದ ಹಳ್ಳಿಗಳು ಮತ್ತು ನಗರ ಕೇಂದ್ರಗಳ ನಡುವಿನ ಅಂತರವನ್ನು ಕಡಿಮೆ ಮಾಡಲಾಗುವುದು. ಈ ಮೂಲಕ ಬುಡಕಟ್ಟು ಕುಟುಂಬಗಳ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಸುಧಾರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕ ಅಭಿವೃದ್ಧಿ, ವ್ಯಾಪಾರ ಮತ್ತು ವಾಣಿಜ್ಯವನ್ನು ಉತ್ತೇಜಿಸುವುದು, ಆರೋಗ್ಯ, ಶಿಕ್ಷಣ ಮತ್ತು ಮಾರುಕಟ್ಟೆಗಳಂತಹ ಅಗತ್ಯ ಸೇವೆಗಳಿಗೆ ಪ್ರವೇಶವನ್ನು ಸುಧಾರಿಸುವುದು, ಉದ್ಯೋಗಾವಕಾಶಗಳನ್ನು ಸೃಷ್ಟಿಸಿ ಸ್ಥಳೀಯ ಆರ್ಥಿಕತೆಯನ್ನು ಉತ್ತೇಜಿಸುವ ಉದ್ದೇಶ ಈ ಅನುದಾನ ಘೋಷಣೆಯ ಹಿಂದಿದೆ ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಬಜೆಟ್​​ನಲ್ಲಿ ಮಂಡ್ಯಕ್ಕೆ ಏನು ಕೊಟ್ಟಿದ್ದೀರಿ? ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಅಲ್ಲದೆ, ಸಮೃದ್ಧ ಮತ್ತು ಅಭಿವೃದ್ಧಿ ಹೊಂದಿದ ಭಾರತದ (ವಿಕಸಿತ್ ಭಾರತ್) ಸರ್ಕಾರದ ದೃಷ್ಟಿಯೊಂದಿಗೆ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಪ್ರಕಟಣೆ ವಿವರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ