18ರಿಂದ 45 ವರ್ಷದವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ ಉಚಿತ; ಸಿಎಂ ಯಡಿಯೂರಪ್ಪ ಘೋಷಣೆ

Free Covid Vaccine: ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಹೀಗಾಗಿ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್​ಡೌನ್ ಮಾಡಲು ನಿರ್ಧರಿಸಿದ್ದು, ನಾಳೆ ಸಂಜೆಯಿಂದ ಲಾಕ್​ಡೌನ್ ಜಾರಿಯಾಗಲಿದೆ. 15 ದಿನಗಳ ಕಾಲ ಈ ಕಠಿಣ ನಿಯಮ ಮುಂದುವರೆಯಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

18ರಿಂದ 45 ವರ್ಷದವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ ಉಚಿತ; ಸಿಎಂ ಯಡಿಯೂರಪ್ಪ ಘೋಷಣೆ
ಕೊರೊನಾ ಲಸಿಕೆ
Follow us
guruganesh bhat
|

Updated on:Apr 26, 2021 | 2:38 PM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಕೊರೊನಾ ಪ್ರಕರಣಗಳಲ್ಲಿ ರಾಜ್ಯ ಮಹಾರಾಷ್ಟ್ರವನ್ನೂ ಮೀರಿಸಿದೆ. ಕೊರೊನಾ ತಡೆಗಟ್ಟಲು ಸರ್ಕಾರಿ ಆಸ್ಪತ್ರೆಗಳಲ್ಲಿ 18ರಿಂದ 45 ವರ್ಷದವರಿಗೆ ಉಚಿತವಾಗಿ ಕೊರೊನಾ ಲಸಿಕೆ ಒದಗಿಸುತ್ತೇವೆ. ರಾಜ್ಯಾದ್ಯಂತ ನಾಳೆ ರಾತ್ರಿಯಿಂದ 14 ದಿನ ಬಿಗಿ ಕ್ರಮ ಜಾರಿಗೊಳಿಸುತ್ತೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಘೋಷಿಸಿದರು.

ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಹೀಗಾಗಿ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್​ಡೌನ್ ಮಾಡಲು ನಿರ್ಧರಿಸಿದ್ದು, ನಾಳೆ ಸಂಜೆಯಿಂದ ಲಾಕ್​ಡೌನ್ ಜಾರಿಯಾಗಲಿದೆ. 15 ದಿನಗಳ ಕಾಲ ಈ ಕಠಿಣ ನಿಯಮ ಮುಂದುವರೆಯಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಬೆಳಗ್ಗೆ 6-10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಉತ್ಪಾದನಾ ವಲಯ ಎಂದಿನಂತೆ ಮುಂದುವರಿಯುತ್ತದೆ. ಕೃಷಿ ಚಟುವಟಿಕೆಗಳಿಗೂ ಯಾವುದೇ ತೊಂದರೆ ಇಲ್ಲ. ರಾಜ್ಯದಲ್ಲಿ ಎಂದಿನಂತೆ ಕರ್ಫ್ಯೂ ಮುಂದುವರಿಯುತ್ತದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಇನ್ನುಮುಂದೆ ಆಕ್ಸಿಜನ್​ ಕೊರತೆಯಾಗುವುದಿಲ್ಲ. ರಾಜ್ಯಕ್ಕೆ 800 ಮೆಟ್ರಿಕ್ ಟನ್ ಆಕ್ಸಿಜನ್ ಕೊಡಲು ಕೇಂದ್ರ ಸರ್ಕಾರ ಕೊಡಲು ಒಪ್ಪಿಕೊಂಡಿದೆ. ಎಂದು ತಿಳಿಸಿದ್ದಾರೆ. ಅಲ್ಲದೇ ರೆಮ್​ಡೆಸಿವಿರ್​ ಇಂಜೆಕ್ಷನ್​ ಕೊರತೆಯೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎರಡು ವಾರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದಿದ್ದರೆ ಮತ್ತೆ ಕಠಿಣ ಕ್ರಮ ಮುಂದುವರೆಸಬೇಕಾದ ಅನಿವಾರ್ಯತೆ ಬರಬಹುದು. ಹಾಗಾಗಿ ಜನರು ಸಹಕಾರ ನೀಡಿ ಕೊರೊನಾ ನಿಯಂತ್ರಿಸಬೇಕು ಎಂದಿದ್ದಾರೆ. ಜನರ ಓಡಾಟಕ್ಕೆ ಸಾರಿಗೆ ಸಂಚಾರ ಇರುವುದಿಲ್ಲ. ಆದರೆ, ಸರಕು ಸಾಗಣೆ  ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(Karnataka to give free covid shots to 18 to 45 age group says CM BS Yediyurappa)

Published On - 2:36 pm, Mon, 26 April 21

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್