ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಕೊರೊನಾ ಪ್ರಕರಣಗಳಲ್ಲಿ ರಾಜ್ಯ ಮಹಾರಾಷ್ಟ್ರವನ್ನೂ ಮೀರಿಸಿದೆ. ಕೊರೊನಾ ತಡೆಗಟ್ಟಲು ಸರ್ಕಾರಿ ಆಸ್ಪತ್ರೆಗಳಲ್ಲಿ 18ರಿಂದ 45 ವರ್ಷದವರಿಗೆ ಉಚಿತವಾಗಿ ಕೊರೊನಾ ಲಸಿಕೆ ಒದಗಿಸುತ್ತೇವೆ. ರಾಜ್ಯಾದ್ಯಂತ ನಾಳೆ ರಾತ್ರಿಯಿಂದ 14 ದಿನ ಬಿಗಿ ಕ್ರಮ ಜಾರಿಗೊಳಿಸುತ್ತೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಘೋಷಿಸಿದರು.
ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಹೀಗಾಗಿ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್ಡೌನ್ ಮಾಡಲು ನಿರ್ಧರಿಸಿದ್ದು, ನಾಳೆ ಸಂಜೆಯಿಂದ ಲಾಕ್ಡೌನ್ ಜಾರಿಯಾಗಲಿದೆ. 15 ದಿನಗಳ ಕಾಲ ಈ ಕಠಿಣ ನಿಯಮ ಮುಂದುವರೆಯಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಬೆಳಗ್ಗೆ 6-10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಉತ್ಪಾದನಾ ವಲಯ ಎಂದಿನಂತೆ ಮುಂದುವರಿಯುತ್ತದೆ. ಕೃಷಿ ಚಟುವಟಿಕೆಗಳಿಗೂ ಯಾವುದೇ ತೊಂದರೆ ಇಲ್ಲ. ರಾಜ್ಯದಲ್ಲಿ ಎಂದಿನಂತೆ ಕರ್ಫ್ಯೂ ಮುಂದುವರಿಯುತ್ತದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಇನ್ನುಮುಂದೆ ಆಕ್ಸಿಜನ್ ಕೊರತೆಯಾಗುವುದಿಲ್ಲ. ರಾಜ್ಯಕ್ಕೆ 800 ಮೆಟ್ರಿಕ್ ಟನ್ ಆಕ್ಸಿಜನ್ ಕೊಡಲು ಕೇಂದ್ರ ಸರ್ಕಾರ ಕೊಡಲು ಒಪ್ಪಿಕೊಂಡಿದೆ. ಎಂದು ತಿಳಿಸಿದ್ದಾರೆ. ಅಲ್ಲದೇ ರೆಮ್ಡೆಸಿವಿರ್ ಇಂಜೆಕ್ಷನ್ ಕೊರತೆಯೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಎರಡು ವಾರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದಿದ್ದರೆ ಮತ್ತೆ ಕಠಿಣ ಕ್ರಮ ಮುಂದುವರೆಸಬೇಕಾದ ಅನಿವಾರ್ಯತೆ ಬರಬಹುದು. ಹಾಗಾಗಿ ಜನರು ಸಹಕಾರ ನೀಡಿ ಕೊರೊನಾ ನಿಯಂತ್ರಿಸಬೇಕು ಎಂದಿದ್ದಾರೆ. ಜನರ ಓಡಾಟಕ್ಕೆ ಸಾರಿಗೆ ಸಂಚಾರ ಇರುವುದಿಲ್ಲ. ಆದರೆ, ಸರಕು ಸಾಗಣೆ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ
(Karnataka to give free covid shots to 18 to 45 age group says CM BS Yediyurappa)
Published On - 2:36 pm, Mon, 26 April 21