Vande Bharat Express: ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು; ಕಡಿಮೆಯಾಗಲಿದೆ ಧಾರವಾಡ – ಬೆಂಗಳೂರು ಪ್ರಯಾಣ ಅವಧಿ
ಕರ್ನಾಟಕಕ್ಕೆ ಮತ್ತೊಂದು ಸೆಮಿ ಹೈಸ್ಪೀಡ್ ರೈಲು ನೀಡಲು ಸಚಿವಾಲಯ ನಿರ್ಧರಿಸಿದ್ದು, ಮುಂದಿನ ತಿಂಗಳು ಸಂಚಾರ ಆರಂಭಿಸಲಿದೆ. ಹುಬ್ಬಳ್ಳಿಗೆ ಭೇಟಿ ನೀಡಿದ್ದ ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಈ ಕುರಿತು ಈಗಾಗಲೇ ಮಾಹಿತಿ ನೀಡಿದ್ದಾರೆ.
ಭಾರತೀಯ ರೈಲ್ವೆ ವಂದೇ ಭಾರತ್ ವಂದೇ ಭಾರತ್ ಎಕ್ಸ್‌ಪ್ರೆಸ್‌ಗಳ (Vande Bharat Express) ಲೋಕಾರ್ಪಣೆ ಕಾರ್ಯಕ್ರಮಗಳನ್ನು ತ್ವರಿತಗೊಳಿಸಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಈ ವರ್ಷದ ಆಗಸ್ಟ್ ಅಂತ್ಯದ ವೇಳೆಗೆ ಹೆಚ್ಚು ವಂದೇ ಭಾರತ್ ರೈಲುಗಳನ್ನು ಲೋಕಾರ್ಪಣೆ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಕರ್ನಾಟಕಕ್ಕೆ ಮತ್ತೊಂದು ಸೆಮಿ ಹೈಸ್ಪೀಡ್ ರೈಲು ನೀಡಲು ಸಚಿವಾಲಯ ನಿರ್ಧರಿಸಿದ್ದು, ಮುಂದಿನ ತಿಂಗಳು ಸಂಚಾರ ಆರಂಭಿಸಲಿದೆ. ಹುಬ್ಬಳ್ಳಿಗೆ ಭೇಟಿ ನೀಡಿದ್ದ ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಈ ಕುರಿತು ಈಗಾಗಲೇ ಮಾಹಿತಿ ನೀಡಿದ್ದಾರೆ.
ವಂದೇ ಭಾರತ್ ಎಕ್ಸ್ಪ್ರೆಸ್ಗೆ ಚಾಲನೆ ಯಾವಾಗ?
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಪ್ರಾರಂಭಿಸಲು ಸಿದ್ಧತೆ ಈಗಾಗಲೇ ಪೂರ್ಣಗೊಂಡಿದೆ ಮತ್ತು ಜುಲೈನಲ್ಲಿ ಚಾಲನೆ ದೊರೆಯುವ ನಿರೀಕ್ಷೆ ಇದೆ. ಆದಾಗ್ಯೂ, ಬಿಡುಗಡೆ ದಿನಾಂಕವನ್ನು ಇನ್ನೂ ನಿರ್ಧರಿಸಲಾಗಿಲ್ಲ. ಜುಲೈ ತಿಂಗಳಲ್ಲಿ ರೈಲು ಸಂಚಾರ ಆರಂಭಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಮುಂಬರುವ ರೈಲು ರಾಜ್ಯದ ಎರಡು ನಗರಗಳಾದ ಬೆಂಗಳೂರು ಮತ್ತು ಧಾರವಾಡವನ್ನು ಸಂಪರ್ಕಿಸಲಿದೆ.
ಪ್ರಯಾಣದ ದೂರ ಮತ್ತು ಸಮಯದ ವಿವರ
ಈ ರೈಲು ಬೆಂಗಳೂರು ಮತ್ತು ಧಾರವಾಡ ನಡುವಿನ 464 ಕಿಲೋಮೀಟರ್ ದೂರವನ್ನು ಆರು ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಕ್ರಮಿಸುವ ಸಾಧ್ಯತೆಯಿದೆ. ಪ್ರಸ್ತುತ ಈ ಮಾರ್ಗದಲ್ಲಿ, ರಾಮೇಶ್ವರಂ – ಎಸ್‌ಎಸ್‌ಎಸ್ ಹುಬ್ಬಳ್ಳಿ ಸ್ಪೆಷಲ್ ಫೇರ್ ಸ್ಪೆಷಲ್ ಟ್ರೈನ್ ವೇಗವಾಗಿ ಸಂಚರಿಸುವ ಎಕ್ಸ್‌ಪ್ರೆಸ್ ಆಗಿದೆ. ಅದೇ ದೂರವನ್ನು ಕ್ರಮಿಸಲು 6 ಗಂಟೆ 55 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ.
ಇದನ್ನೂ ಓದಿ: Vande Bharat Express: ವಂದೇ ಭಾರತ್ ಎಕ್ಸ್‌ಪ್ರೆಸ್, ಆನ್ಲೈನ್ ಟಿಕೆಟ್ ಬುಕಿಂಗ್ ವಿಧಾನ ಇಲ್ಲಿದೆ ನೋಡಿ
ಪ್ರಧಾನಿ ಮೋಯಿಂದ ಚಾಲನೆ?
ಬೆಂಗಳೂರು ಮತ್ತು ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುವ ಸಾಧ್ಯತೆ ಇದೆ. ಮೈಸೂರು-ಚೆನ್ನೈ ಮಾರ್ಗದಲ್ಲಿ ರಾಜ್ಯದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮೋದಿ ಚಾಲನೆ ನೀಡಿದ್ದರು.
ಕರ್ನಾಟಕದಲ್ಲಿ ಮತ್ತೊಂದು ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಾರಂಭಿಸುವುದರೊಂದಿಗೆ, ಹುಬ್ಬಳ್ಳಿ ಮತ್ತು ಧಾರವಾಡದ ಜನರಿಗೆ ಅತ್ಯುತ್ತಮ ರೈಲು ಪ್ರಯಾಣ ಸೌಲಭ್ಯ ದೊರೆಯಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ