ಬೆಂಗಳೂರು: ರಾಜ್ಯದೆಲ್ಲೆಡೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಮುಂದಿನ ಐದು ದಿನಗಳವರೆಗೆ ತನ್ನ ಆರ್ಭಟ ಮುಂದುವರಿಸಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಟಿವಿ9ಗೆ ತಿಳಿಸಿದರು.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯ ಭರಾಟೆ ಮುಂದುವರಿಯಲಿದ್ದು ಸದರಿ ಜಿಲ್ಲೆಗಳಲ್ಲಿ ಈಗಾಗಲೇ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಹಾಗೆಯೇ, ಮಲೆನಾಡು ಪ್ರಾಂತ್ಯದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಟಿವಿ9ಗೆ ಪಾಟೀಲ್ ತಿಳಿಸಿದರು.
ಕೊವಿಡ್-19 ಪೀಡೆಯಿಂದ ಈಗಾಗಲೇ ಸಾಕಷ್ಟು ನಲುಗಿರುವ ರಾಜ್ಯಕ್ಕೆ ಮಳೆಯಿಂದ ಮತ್ತಷ್ಟು ಸಮಸ್ಯೆಗಳು ಎದುರಾಗುವ ಸಾಧ್ಯತೆಗಳಿವೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೊಂಚ ಗಮನ ಹರಿಸಬೇಕಾಗಿದೆ.