Bharat Gaurav Train: ಕಾಶಿ ಬಹಳ ದೂರವಿಲ್ಲ, ಶ್ರಾವಣದ ಕೊನೆಯ ವಾರದಲ್ಲಿ ಕರ್ನಾಟಕದಿಂದ ಕಾಶಿಗೆ ‘ಭಾರತ್‌ ಗೌರವ್‌’ ರೈಲು: ಜೊಲ್ಲೆ

ಶ್ರಾವಣ ಮಾಸದ ಕೊನೆಯ ವಾರದಲ್ಲಿ ಕರ್ನಾಟಕದಿಂದ ಕಾಶಿಗೆ ಭಾರತ್‌ ಗೌರವ್‌ ರೈಲು ಯೋಜನೆ ಪ್ರಾರಂಭವಾಗಲಿದೆ ಎಂದು ಮಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ

Bharat Gaurav Train: ಕಾಶಿ ಬಹಳ ದೂರವಿಲ್ಲ, ಶ್ರಾವಣದ ಕೊನೆಯ ವಾರದಲ್ಲಿ ಕರ್ನಾಟಕದಿಂದ ಕಾಶಿಗೆ 'ಭಾರತ್‌ ಗೌರವ್‌' ರೈಲು: ಜೊಲ್ಲೆ
Shashikala Jolle
Follow us
TV9 Web
| Updated By: ನಯನಾ ರಾಜೀವ್

Updated on:Jul 11, 2022 | 4:42 PM

ಬೆಂಗಳೂರು: ಶ್ರಾವಣ ಮಾಸದ ಕೊನೆಯ ವಾರದಲ್ಲಿ ಕರ್ನಾಟಕದಿಂದ ಕಾಶಿಗೆ ಭಾರತ್‌ ಗೌರವ್‌ ರೈಲು ಯೋಜನೆ ಪ್ರಾರಂಭವಾಗಲಿದೆ ಎಂದು ಮಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ನಗರದ ಬೈಯ್ಯಪ್ಪನಹಳ್ಳಿಯಲ್ಲಿರುವ ಸರ್‌ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿ ಕಾಶಿ ಯಾತ್ರೆಗೆ ಕಾಯ್ದಿರಿಸಲಾಗಿರುವ ರೈಲಿನ ಪರಿಶಿಲನೆ ಹಾಗೂ ರೈಲ್ವೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಈ ವಿಷಯ ತಿಳಿಸಿದರು.

ಜೀವನದಲ್ಲಿ ಒಮ್ಮೆಯಾದರೂ ಕಾಶಿ ಯಾತ್ರೆಯನ್ನು ಕೈಗೊಳ್ಳಬೇಕು ಎನ್ನುವುದು ಬಹುಪಾಲು ಹಿಂದುಗಳ ಆಸೆಯಾಗಿರುತ್ತದೆ. ಇದರನ್ನು ಪೂರೈಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎನ್ನುವುದು ನನ್ನ ಆಶಯವಾಗಿತ್ತು. ಇದಕ್ಕೆ ಬೆನ್ನೆಲುಬಾಗಿ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿಂತು ಎಲ್ಲಾ ರೀತಿಯ ಸಹಕಾರ ನೀಡಿದ್ದಕ್ಕಾಗಿ ಅಭಿನಂದನೆಯನ್ನು ತಿಳಿಸಿದರು.

ಕಾಶಿಯಾತ್ರೆಗೆ ಯಾತ್ರಾರ್ಥಿಗಳನ್ನು ಕೊಂಡೊಯ್ಯುವ ಭಾರತ್‌ ಗೌರವ್‌ ರೈಲನ್ನು ಸಿದ್ದಪಡಿಸಲು ಅನುಮತಿ ನೀಡಿದ್ದು, ಶ್ರಾವಣ ಮಾಸದ ಕೊನೆಯ ವಾರದಲ್ಲಿ ಯಾತ್ರೆ ಪ್ರಾರಂಭವಾಗಲಿದೆ. ಈ ಮೂಲಕ ಭಾರತ್‌ ಗೌರವ್‌ ರೈಲು ಸೇವೆಯನ್ನು ಒದಗಿಸುತ್ತಿರುವ ದೇಶದ ಮೊದಲ ರಾಜ್ಯ ಹಾಗೂ ಇಲಾಖೆ ಎನ್ನುವ ಹೆಗ್ಗಳಿಕೆ ನಾವು ಪಾತ್ರರಾಗಲಿದ್ದೇವೆ.

ಪುಣ್ಯ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ರವಾಸ ಕೈಗೊಳ್ಳಲು ಅನುಕೂಲವಾಗುವಂತೆ ಪ್ಯಾಕೇಜುಗಳನ್ನು ರೂಪಿಸುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಭಾರತ್‌ ಗೌರವ್‌ ರೈಲು ಯೋಜನೆಯ ಅಡಿಯಲ್ಲಿ ರಾಜ್ಯ ಮುಜರಾಯಿ ಇಲಾಖೆಯ ವತಿಯಿಂದ ರೈಲನ್ನು ಬಾಡಿಗೆಗೆ ಪಡೆದು ಕಾಶಿಗೆ ಓಡಿಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.

ರೈಲನ್ನು ಮಾರ್ಪಾಡಿಸುವ ಹಾಗೂ ಇನ್ನಿತರೆ ಅಗ್ಯ ಕ್ರಮಗಳ ಬಗ್ಗೆ ವಿಸ್ತ್ರುತವಾಗಿ ರೈಲ್ವೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇವೆ. ರಿಯಾಯಿತಿ ದರದಲ್ಲಿ 7 ದಿನಗಳ ಪ್ರವಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದಕ್ಕಾಗಿ ಈಗಾಗಲೇ 1 ಕೋಟಿ ರೂಪಾಯಿಗಳ ಭೌತಿಕ ಬ್ಯಾಂಕ್‌ ಗ್ಯಾರಂಟಿಯನ್ನು ನೀಡಿ ರೈಲನ್ನು ಬಾಡಿಗೆಗೆ ತಗೆದುಕೊಳ್ಳಲಾಗಿದೆ ಎಂದು ಹೇಳಿದರು.

ರೈಲಿನ ವಿನ್ಯಾಸದ ಬಗ್ಗೆ: ಬೆಂಗಳೂರು-ವಾರಾಣಸಿ-ಅಯೋಧ್ಯೆ-ಪ್ರಯಾಗರಾಜ್‌-ಬೆಂಗಳೂರು ಮಾರ್ಗದಲ್ಲಿ ರೈಲು 7 ದಿನಗಳಲಿ 4161 ಕಿಲೋಮೀಟರ್‌ಗಳಷ್ಟು ದಾರಿ ಕ್ರಮಿಸಲಿದೆ.

14 ಬೋಗಿಗಳನ್ನು ಈ ರೈಲು ಒಳಗೊಂಡಿರಲಿದ್ದು, 11 ಬೋಗಿಗಳನ್ನು ಪ್ರಯಾಣಿಕರ ಪ್ರವಾಸಕ್ಕೆ ಅಣಿ ಮಾಡಲಾಗುತ್ತಿದೆ. 3 ಟಯರ್‌ ಎಸಿಯ ವ್ಯವಸ್ಥೆ ಇರಲಿದೆ. ಒಂದು ಬೋಗಿಯನ್ನು ದೇವಸ್ಥಾನವಾಗಿ ಪರಿವರ್ತಿಸಿ ಯಾತ್ರಾರ್ಥಿಗಳ ಭಜನೆಗೆ ಅವಕಾಶ ನೀಡಲಾಗುವುದು. ಅಲ್ಲದೇ, ನಮ್ಮ ರಾಜ್ಯದ ಪ್ರಮುಖ ದೇವಸ್ಥಾನಗಳ ಬ್ರಾಂಡಿಂಗ್‌ ಮಾಡುವ ಉದ್ದೇಶದಿಂದ 11 ಬೋಗಿಗಳ ಮೇಲೆ ರಾಜ್ಯದ ಪ್ರಮುಖ 11 ದೇವಸ್ಥಾನಗಳ ಮಾಹಿತಿಯನ್ನು ಅಳವಡಿಸಲಾಗುವುದು.

ಆಹಾರ, ನೀರು, ವಸತಿ, ಸ್ಥಳೀಯ ಸಾರಿಗೆ ಮತ್ತು ಇತರೆ ಮೂಲಭೂತ ಸೌಕರ್ಯಗಳಿಗೆ ರೈಲ್ವೇಯ ಅಧೀನ ಸಂಸ್ಥೆಯ ಜೊತೆ ಐಆರ್‌ಸಿಟಿಸಿ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುವುದು. 7 ದಿನಗಳ ಪ್ರವಾಸಕ್ಕೆ ಅಂದಾಜು 15 ಸಾವಿರ ರೂಪಾಯಿ ವೆಚ್ಚವಾಗಲಿದ್ದು, ಇದರಲ್ಲಿ 5 ಸಾವಿರ ರೂಗಳನ್ನು ಸಹಾಯಧನವನ್ನಾಗಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಬೆಂಗಳೂರಿನಿಂದ ಪುಣ್ಯಕ್ಷೇತ್ರಗಳಾದ ವಾರಾಣಸಿ, ಅಯೋಧ್ಯಾ, ಪ್ರಯಾಗರಾಜ್‌ ಮತ್ತು ಕಾಶಿಗೆ ಯಾತ್ರಾರ್ಥಿಗಳನ್ನು ರೈಲು ಕರೆದೊಯ್ಯಲಿದೆ. ಈ ಸಂಧರ್ಭದಲ್ಲಿ ಮುಜರಾಯಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ, ಸೌತ್‌ ವೆಸ್ಟರ್ನ್‌ ರೈಲ್ವೇಯ ಚೀಪ್‌ ಕಮರ್ಷಿಯಲ್‌ ಮ್ಯಾನೇಜರ್‌ ಡಾ ಅನೂಪ್‌ ದಯಾನಂದ್‌ ಇದ್ದರು.

Published On - 4:41 pm, Mon, 11 July 22

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು