Karnataka Rains: ಕರ್ನಾಟಕದ ಈ 16 ಜಿಲ್ಲೆಗಳಲ್ಲಿ ಒಂದು ವಾರ ಸುರಿಯಲಿದೆ ಧಾರಾಕಾರ ಮಳೆ
ಕರ್ನಾಟಕದಲ್ಲಿ ವರುಣನ ಆರ್ಭಟ ತೀವ್ರವಾಗುತ್ತಿದೆ, ಒಂದೆಡೆ ಆರು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದಿದೆ. ಕಳೆದ 2 ದಿನಗಳಿಂದ ಭಾರಿ ಗಾಳಿ ಸಹಿತ ಮಳೆಯಾಗುತ್ತಿದ್ದು, ಇಂದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಹೀಗಾಗಿ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಹಲವೆಡೆ ಭೂಕುಸಿತವಾಗುತ್ತಿದ್ದು, ಮಳೆ ಬಿಟ್ಟೂ ಬಿಡದೆ ಸುರಿಯುತ್ತಿದೆ. 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಕೊಡಗಿಗೆ ಆರೆಂಜ್ ಅಲರ್ಟ್ ಇದ್ದು, ಮೈಸೂರು, ಹಾಸನ, ಬಳ್ಳಾರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೀದರ್ಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ತುಮಕೂರು, ವಿಜಯನಗರದಲ್ಲೂ ಮಳೆಯಾಗಿದೆ.
ಭಾಗಮಂಡಲ, ಕದ್ರಾ, ಕುಮಟಾ, ಅಂಕೋಲಾ, ಕಾರವಾರ, ಹೊನ್ನಾವರ, ಗೋಕರ್ಣ, ಆಗುಂಬೆ, ಶಿರಾಲಿ, ಹಳಿಯಾಳ, ಉಡುಪಿ, ಲೋಂಡಾ, ಸೋಮವಾರಪೇಟೆ, ಮಂಗಳೂರು ವಿಮಾನ ನಿಲ್ದಾಣ, ಗೇರುಸೊಪ್ಪ, ಸಿದ್ದಾಪುರ, ಧರ್ಮಸ್ಥಳ, ಯಲ್ಲಾಪುರ, ಕಾರ್ಕಳ, ಲಿಂಗನಮಕ್ಕಿ, ಜಯಪುರ, ಕಳಸ, ಪುತ್ತೂರು, ಮಾಣಿ, ಪಣಂಬೂರು, ಕಮ್ಮರಡಿ, ಶೃಂಗೇರಿಯಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: ಕರ್ನಾಟಕದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕೋಟ, ಮಂಕಿ, ಮೂರ್ನಾಡು, ಕೊಟ್ಟಿಗೆಹಾರ, ಕೊಪ್ಪ, ಬನವಾಸಿ, ಕಿರವತ್ತಿ, ನಾಪೋಕ್ಲು, ವಿರಾಜಪೇಟೆ, ಬಾಳೆಹೊನ್ನೂರು, ಉಪ್ಪಿನಂಗಡಿ, ಸೈದಾಪುರ, ಭದ್ರಾವತಿ, ಆನವಟ್ಟಿ, ಬೈಲಹೊಂಗಲ, ಸೇಡಬಾಳ, ಸೇಡಂ, ಬೀದರ್, ಶಿವಮೊಗ್ಗ, ಮೂಡಿಗೆರೆ, ತರೀಕೆರೆ, ಅಜ್ಜಂಪುರ, ನಿಪ್ಪಾಣಿ, ಸರಗೂರು, ಹೊನ್ನಾಳಿ, ಹುಂಚದಕಟ್ಟೆ, ಹುಣಸೂರು, ಮಂಠಾಳ, ಚಿಕ್ಕೋಡಿ, ನರಗುಂದ, ಮುದ್ದೇಬಿಹಾಳ, ಮಸ್ಕಿ, ಕುಂದಗೋಳ, ಬಾದಾಮಿ, ಕೊಳ್ಳೇಗಾಲದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೋಡಮುಸುಕಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುತ್ತಿದೆ.ಎಚ್ಎಎಲ್ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 27.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದು (ಜುಲೈ 16) ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಹಾಸನ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಹೀಗಾಗಿ ಹಲಿಯಾಳ ಮತ್ತು ಮುಂಡಗೊಂಡ ತಾಲೂಕು ಹೊರತುಪಡಿಸಿ ಇನ್ನುಳಿದ 10 ತಾಲೂಕುಗಳಿಗೆ ನಾಳೆ ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ ತಾಲೂಕಿನ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ