AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Property Tax: ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್​ಗಳಿಗೆ ಶೇ 50 ರಷ್ಟು ಆಸ್ತಿ ತೆರಿಗೆ ವಿನಾಯಿತಿ ಘೋಷಣೆ

Property Tax Exemption: ಅಬಕಾರಿ ಸನ್ನದು ಶುಲ್ಕ ಮತ್ತು ಹೆಚ್ಚುವರಿ ಸನ್ನದು ಶುಲ್ಕದ ಶೇ. 50ರಷ್ಟು ಮೊತ್ತ ಪಾವತಿಸಬೇಕು, ಉಳಿದ ಶೇ. 50 ರಷ್ಟು ಶುಲ್ಕ ಮೊತ್ತ ಡಿಸೆಂಬರ್ 31 ರೊಳಗೆ ಪಾವತಿಸಬೇಕು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Property Tax: ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್​ಗಳಿಗೆ ಶೇ 50 ರಷ್ಟು ಆಸ್ತಿ ತೆರಿಗೆ ವಿನಾಯಿತಿ ಘೋಷಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 24, 2021 | 6:02 PM

Share

ಬೆಂಗಳೂರು: ಕೊವಿಡ್ 2ಅಲೆ ಹಿನ್ನೆಲೆಯಲ್ಲಿ 2021-22ನೇ ಆರ್ಥಿಕ ವರ್ಷದಲ್ಲಿ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್​ಗಳಿಗೆ ಶೇ. 50 ರಷ್ಟು ಆಸ್ತಿ ತೆರಿಗೆ ವಿನಾಯಿತಿ ನೀಡಲಾಗಿದೆ. ಏಪ್ರಿಲ್, ಮೇ ಮತ್ತು ಜೂನ್ ತಿಂಗಳ ವಿದ್ಯುಚ್ಛಕ್ತಿ ಬೇಡಿಕೆ ಶುಲ್ಕ ಪಾವತಿಗೂ ವಿನಾಯಿತಿಯನ್ನು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಘೋಷಿಸಿದ್ದಾರೆ.

ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳಿಗೆ 5000 ರೂ. ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾಯಿಸಲಾಗುವುದು. ಅಬಕಾರಿ ಸನ್ನದು ಶುಲ್ಕ ಮತ್ತು ಹೆಚ್ಚುವರಿ ಸನ್ನದು ಶುಲ್ಕದ ಶೇ. 50ರಷ್ಟು ಮೊತ್ತ ಪಾವತಿಸಬೇಕು, ಉಳಿದ ಶೇ. 50 ರಷ್ಟು ಶುಲ್ಕ ಮೊತ್ತ ಡಿಸೆಂಬರ್ 31 ರೊಳಗೆ ಪಾವತಿಸಬೇಕು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಟೋಲ್ ಶುಲ್ಕ ಹೆಚ್ಚಳ; ಜುಲೈ 1ರಿಂದ ಜಾರಿ ಎಲೆಕ್ಟ್ರಾನಿಕ್ ಸಿಟಿ ರಸ್ತೆ ಬಳಕೆ ಶುಲ್ಕ (ಟೋಲ್) ಹೆಚ್ಚಳವಾಗಿದ್ದು, ಜುಲೈ ಒಂದರಿಂದಲೇ ಪರಿಷ್ಕೃತ ಶುಲ್ಕ ಜಾರಿಯಾಗಲಿದೆ. ಎಲೆಕ್ಟ್ರಾನಿಕ್ ಸಿಟಿ ಮತ್ತು ಅತ್ತಿಬೆಲೆ ರಸ್ತೆ ಬಳಕೆ ಶುಲ್ಕ ಹೆಚ್ಚಳವಾದ ಹಿನ್ನೆಲೆ ವಾಹನ ಸವಾರರು ವಿರೋಧ ವ್ಯಕ್ತಪಡಿಸಿದ್ದಾರೆ. ಟೋಲ್ ಇರುವ ಸುತ್ತಮುತ್ತಲೂ ಐಟಿ ಕಂಪನಿಗಳು, ಹಲವು ಕಾರ್ಖಾನೆಗಳು ಇವೆ. ಕೆ.ಆರ್ ಮಾರ್ಕೆಟ್​ನ ಸಿಂಗಸಂದ್ರಕ್ಕೆ ಸ್ಥಳಾಂತರಿಸಲಾಗಿದೆ. ತರಕಾರಿ ವ್ಯಾಪಾರಿಗಳಿಗೆ ಟೋಲ್ ರಸ್ತೆಯನ್ನೇ ಬಳಸಿ ಹೋಗಬೇಕಾದ ಅನಿವಾರ್ಯ ಎದುರಾಗಿದ್ದು, ಕೂಡಲೇ ಟೋಲ್ ಶುಲ್ಕ ಹೆಚ್ಚಳ ಸಂಬಂಧ ಸರ್ಕಾರ ಮಧ್ಯಸ್ಥಿಕೆ ವಹಿಸಲು ರೈತರು ಆಗ್ರಹಿಸಿದ್ದಾರೆ.

ದ್ವಿಚಕ್ರ ವಾಹನಕ್ಕೆ 20 ರೂ. ನಿಗದಿಯಾಗಿದ್ದು, ಹಿಂತಿರುಗಿ ಬರುವುದಕ್ಕೆ (ಟು ಸೈಡ್) 30 ರೂ. ಶುಲ್ಕ ನಿಗದಿಯಾಗಿದೆ. ಕಾರು, ಜೀಪ್, ವ್ಯಾನ್​ಗಳಿಗೆ 50 ರೂ. ಮತ್ತು ಹಿಂತಿರುಗಿ ಬರುವುದಕ್ಕೆ 80 ರೂ. ಶುಲ್ಕ ನಿಗದಿಯಾಗಿದೆ. ಮಿನಿ ಬಸ್, ಲುಘು ವಾಹನಕ್ಕೆ 80 ರೂ. ವಾಪಸ್ ಬಂದರೆ 110 ರೂ. ಚಾರ್ಜ್ ಮಾಡಲಾಗುತ್ತದೆ. ಬಸ್, ಗೂಡ್ಸ್​ಗೆ 145 ರೂ. ಹಿಂತಿರುಗಿ ಬಂದರೆ 220 ರೂ. ಟೋಲ್ ದರ ಫಿಕ್ಸ್ ಆಗಿದೆ.

ಭಾರಿ ವಾಹನಕ್ಕೆ 295 ರೂ. ಹಾಗೂ ಹಿಂತಿರುಗಿ ಬಂದರೆ 440 ರೂ. ಟೋಲ್ ಚಾರ್ಜ್ ದರ ನಿಗದಿಯಾಗಿದೆ. ವಾಹನಗಳ ಮಾಸಿಕ ಪಾಸ್​ನಲ್ಲಿ ಟೋಲ್ ಶುಲ್ಕ ಭಾರಿ ಹೆಚ್ಚಳವಾಗಿದ್ದು, ಶೇಕಡಾ 75ರಿಂದ 80ರಷ್ಟು ಏರಿಕೆಯಾಗಿದೆ. ದ್ವಿಚಕ್ರ ವಾಹನಗಳಿಗೆ ತಿಂಗಳ ಪಾಸ್ ದರ 625 ರೂಪಾಯಿ, ಕಾರು, ಜೀಪ್, ವ್ಯಾನ್ಸ್​ಗೆ ಟೋಲ್​ನ ಮಾಸಿಕ ಪಾಸ್ ದರ 1,570 ರೂ. ಲಘು ವಾಹನಗಳಿಗೆ 4,390 ರೂ. ಟ್ರಕ್, ಬಸ್​ಗಳಿಗೆ ತಿಂಗಳ ಪಾಸ್ ದರ 4,390 ರೂ. ಭಾರಿ ವಾಹನಗಳ ತಿಂಗಳ ಪಾಸ್ ದರ 8,780 ರೂ. ಆಗಿದೆ.

ಇದನ್ನೂ ಓದಿ: ಕೊವಿಡ್​ನಿಂದ ಮೃತಪಟ್ಟವರ, ನೊಂದವರ ಗಣತಿ ನಡೆಸಲು ಕಾಂಗ್ರೆಸ್​ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ

ಕೊವಿಡ್ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭ; ಡಾ.ಸಿ.ಎನ್.ಅಶ್ವತ್ಥ್ ನಾರಾಯಣ

(Karnataka Tourism minister CP Yogeshwar announces 50 percent property tax exemption to Hotels resorts restaurant and amusement parks)

Published On - 5:55 pm, Thu, 24 June 21

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ