Traffic Fine Discount: ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ 50ರಷ್ಟು ರಿಯಾಯಿತಿ

ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ಕಟ್ಟಲು ಈ ಹಿಂದೆ ಶೇ 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ಟ್ರಾಫಿಕ್ ಪೊಲೀಸರು ಇದೀಗ ಮತ್ತೆ ಡಿಸ್ಕೌಂಟ್ ನೀಡಿದ್ದಾರೆ.

Traffic Fine Discount: ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ 50ರಷ್ಟು ರಿಯಾಯಿತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on:Jul 05, 2023 | 3:23 PM

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ (Traffic Fine) ಕಟ್ಟಲು ಈ ಹಿಂದೆ ಶೇ 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಡಿಸ್ಕೌಂಟ್ ನೀಡಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023ರ ಫೆಬ್ರವರಿ 11ರ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ ಪೊಲೀಸ್‌ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಲು ಈ ಹಿಂದೆ ಆದೇಶಿಸಲಾಗಿತ್ತು. ಇದೀಗ ಪೊಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಮತ್ತೊಮ್ಮೆ ಶೇ 50ರ ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸೆಪ್ಟೆಂಬರ್ 9ರ ವರೆಗೆ ರಿಯಾಯಿತಿ ದರದಲ್ಲಿ ಡಂಡ ಪಾವತಿಸಲು ಅವಕಾಶವಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಈ ಹಿಂದೆಯೂ 2 ಬಾರಿ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಸರ್ಕಾರ ಅವಕಾಶ ನೀಡಿತ್ತು. ನಂತರ ರಾಜ್ಯ ವಿಧಾನಸಭೆ ಘೋಷಣೆಯಾಗಿದ್ದು, ರಿಯಾಯಿತಿ ದರದ ದಂಡ ಪಾವತಿ ಅವಕಾಶ ಸ್ಥಗಿತಗೊಂಡಿತ್ತು.

ಹೈಕೋರ್ಟ್ ನ್ಯಾಯಾಧೀಶರು ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಜೂನ್ 14ರಂದು ನಡೆದ ಸಭೆಯ ನಡವಳಿಗಳಲ್ಲಿ ಪೂಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ದಂಡದ ಮೊತ್ತಕ್ಕೆ ರಿಯಾಯಿತಿ ನೀಡಲು ಕ್ರಮಕೈಗೊಳ್ಳುವಂತೆ ಕೋರಲಾಗಿತ್ತು. ಅದರಂತೆ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಅವಕಾಶ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Bengaluru Traffic: ಸಂಚಾರಿ ನಿಯಮ ಉಲ್ಲಂಘಿಸಿದವರ ವಿರುದ್ಧ ದೂರು ನೀಡಲು ಬಂದಿದೆ ಹೊಸ ಆ್ಯಪ್​; ಇಲ್ಲಿದೆ ಅದರ ವಿಶೇಷತೆ

ಈ ಹಿಂದೆ ಜನವರಿ – ಫೆಬ್ರವರಿ ತಿಂಗಳಲ್ಲಿ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ನಂತರ ಮಾರ್ಚ್​ 4ರಿಂದ 15 ದಿನಗಳ ಕಾಲಾವಕಾಶ ನೀಡಿತ್ತು. ಆಗಲೂ 11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಅವಕಾಶ ನೀಡಲಾಗಿತ್ತು ಎಂಬುದು ಗಮನಾರ್ಹ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Wed, 5 July 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ