ಇನ್ಮುಂದೆ ಓಲಾ- ಉಬರ್ ಆಟೋ ಸಿಗೋದು ಡೌಟಾ?; ಪ್ರಯಾಣಿಕರ ಸುಲಿಗೆಗೆ ಇಳಿದ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ

| Updated By: ಸುಷ್ಮಾ ಚಕ್ರೆ

Updated on: Oct 07, 2022 | 1:49 PM

ಓಲಾ- ಉಬರ್ ಪ್ರಯಾಣಿಕರ ಬಳಿ ಸುಲಿಗೆ ಮಾಡುತ್ತಿರುವುದರಿಂದ ಆ್ಯಪ್ ಆಧಾರಿತ ಸಂಸ್ಥೆಗಳಿಗೆ ಕಡಿವಾಣ ಹಾಕಲು ಸಾರಿಗೆ ಇಲಾಖೆ ಮುಂದಾಗಿದೆ. ಸಾರಿಗೆ ಇಲಾಖೆಯಿಂದ ಆ್ಯಪ್ ಆಧಾರಿತ ಓಲಾ ಮತ್ತು ಊಬರ್ ಕಂಪನಿಗೆ ನೋಟೀಸ್ ಜಾರಿ ಮಾಡಲಾಗಿದೆ.

ಇನ್ಮುಂದೆ ಓಲಾ- ಉಬರ್ ಆಟೋ ಸಿಗೋದು ಡೌಟಾ?; ಪ್ರಯಾಣಿಕರ ಸುಲಿಗೆಗೆ ಇಳಿದ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಈಗ ಬೆಂಗಳೂರಿನಲ್ಲಿ ಮಾಮೂಲಿ ಆಟೋದಲ್ಲಿ ಪ್ರಯಾಣಿಸುವವರಿಗಿಂತಲೂ ಆ್ಯಪ್ ಆಧಾರಿತ ಓಲಾ (Ola), ಉಬರ್ (Uber) ಆಟೋ, ಕ್ಯಾಬ್​ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಬಹಳ ಹೆಚ್ಚಾಗಿದೆ. ಮೊಬೈಲ್​ನಲ್ಲಿ ಬುಕ್ ಮಾಡಿದರೆ ಮನೆ ಬಾಗಿಲಿಗೆ ಬರುವುದರಿಂದ ಜನರು ಈ ಆಟೋ ಸರ್ವಿಸ್ (Cab Service) ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದರೆ, ಈ ಕಂಪನಿಗಳು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಪ್ರಯಾಣಿಕರ ಬಳಿ ಸುಲಿಗೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಓಲಾ- ಊಬರ್ ಕಂಪನಿಗಳಿಗೆ ಸಾರಿಗೆ ಇಲಾಖೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಸಾರಿಗೆ ಇಲಾಖೆಯ ನಿಯಮದ ಪ್ರಕಾರ ಆಟೋಗಳ ಕನಿಷ್ಟ ದರ 30 ರೂ. ಇರಬೇಕು. ಕಾಯುವಿಕೆಯ ಚಾರ್ಜ್ (ವೇಟಿಂಗ್ ಚಾರ್ಜ್) ಅನ್ನು ಪ್ರತಿ 5 ನಿಮಿಷಕ್ಕೆ 5 ರೂ.ಗಳಂತೆ ನಿಗದಿ ಪಡಿಸಲಾಗಿತ್ತು. ಆದರೆ, ಸಾರಿಗೆ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ 100 ರೂ.ಗಳಷ್ಟು ಹಣ ವಸೂಲಿ ಮಾಡಲಾಗುತ್ತಿದೆ. ಆ್ಯಪ್ ಆಧಾರಿತ ಟ್ರಾನ್ಸ್‌ಪೋರ್ಟ್‌ ಸಂಸ್ಥೆಗಳು ಪ್ರಯಾಣಿಕರ ಬಳಿ ಸುಲಿಗೆ ಮಾಡುತ್ತಿರುವುದರಿಂದ ಆ್ಯಪ್ ಆಧಾರಿತ ಸಂಸ್ಥೆಗಳಿಗೆ ಕಡಿವಾಣ ಹಾಕಲು ಸಾರಿಗೆ ಇಲಾಖೆ ಮುಂದಾಗಿದೆ. ಸಾರಿಗೆ ಇಲಾಖೆಯಿಂದ ಆ್ಯಪ್ ಆಧಾರಿತ ಓಲಾ ಮತ್ತು ಊಬರ್ ಕಂಪನಿಗೆ ನೋಟೀಸ್ ಜಾರಿ ಮಾಡಲಾಗಿದೆ.

ಇದನ್ನೂ ಓದಿ: GST: ಹೊಸ ವರ್ಷದ ಆರಂಭದಲ್ಲೇ ಶಾಕಿಂಗ್ ನ್ಯೂಸ್: ಜ. 1 ರಿಂದ ಓಲಾ, ಉಬರ್‌, ಸ್ವಿಗ್ಗಿ, ಜೊಮ್ಯಾಟೋ ಸೇವೆ ದುಬಾರಿ

ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದ್ದು, ಈ ವಿಚಾರವಾಗಿ ವಿವರಣೆ ನೀಡುವಂತೆ ಸಾರಿಗೆ ಇಲಾಖೆ 3 ದಿನಗಳ ಗಡುವು ನೀಡಿದೆ. ಆ್ಯಪ್ ಆಧಾರಿತ ಓಲಾ-ಊಬರ್ ನಲ್ಲಿ ಆಟೋ ಸೇವೆ ಸ್ಥಗಿತಗೊಳಿಸುವಂತೆ ಸಾರಿಗೆ ಇಲಾಖೆ ನೋಟಿಸ್ ನೀಡಿದೆ. ಹೀಗಾಗಿ, ಇನ್ಮುಂದೆ ಓಲಾ -ಉಬರ್ ನಲ್ಲಿ ಆಟೋ ಸಿಗೋದು ಅನುಮಾನ ಎನ್ನಲಾಗುತ್ತಿದೆ. ಈ ಆ್ಯಪ್ ಆಧಾರಿತ ಸಂಸ್ಥೆಗಳಲ್ಲಿ ಆಟೋ ಸೇವೆ ಸ್ಥಗಿತ ಮಾಡುವಂತೆ ನೋಟಿಸ್ ನೀಡಲಾಗಿದೆ. ನಿಬಂಧನೆಗಳ ಪ್ರಕಾರ ಟ್ಯಾಕ್ಸಿ ಸೇವೆಗೆ ಮಾತ್ರ ಓಲಾ -ಉಬರ್ ಲೈಸೆನ್ಸ್ ನಲ್ಲಿ ಅವಕಾಶವಿದೆ. ಆದರೆ, ನಿಯಮ ಉಲ್ಲಂಘಿಸಿ ಆಟೋ ರಿಕ್ಷಾಗಳ ಸೇವೆ ಒದಗಿಸಲಾಗುತ್ತಿದೆ. ಹೀಗಾಗಿ ಅಗ್ರಿಗೇಟರ್ ಸೇವೆಯಡಿಯಲ್ಲಿ ಆಟೋ ರಿಕ್ಷಾ ಸೇವೆ ಒದಗಿಸೋದನ್ನು ಸ್ಥಗಿತಗೊಳಿಸುವಂತೆ ನೋಟಿಸ್ ನೀಡಲಾಗಿದೆ. ಹಾಗೇ, ಮೂರು ದಿನದೊಳಗೆ ವರದಿ ಸಲ್ಲಿಕೆಗೆ ಸೂಚನೆ ನೀಡಲಾಗಿದೆ. ಇಲ್ಲದಿದ್ದರೆ  ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Auto Rickshaw Offences: ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕರು ಪ್ರಯಾಣಕ್ಕೆ ಹೆಚ್ಚಿನ ದರ ಕೇಳಿದರೆ ಏನು ಮಾಡಬೇಕು? ವಿವರ ಇಲ್ಲಿದೆ

ಈ ಬಗ್ಗೆ ರಾಜ್ಯ ಸಾರಿಗೆ ಇಲಾಖೆ ಆಯುಕ್ತ ಟಿಹೆಚ್ಎಂ ಕುಮಾರ್ ಹೇಳಿಕೆ ನೀಡಿದ್ದು, ಕಳೆದ 3-4 ದಿನಗಳಿಂದ ನಮಗೆ ತುಂಬಾ ದೂರುಗಳು ಬರುತ್ತಿದ್ದವು. ಓಲಾ-ಊಬರ್ ಆಟೋ ದರ ದುಪ್ಪಟ್ಟು ವಿಧಿಸ್ತಾರೆ ಎನ್ನುವ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು,
ಒಲಾ-ಉಬರ್ ಸಂಸ್ಥೆಗೆ ನೋಟಿಸ್ ನೀಡಿದ್ದೇವೆ. ಅವರಿಗೆ 3 ದಿನ ಗಡುವು ನೀಡಿದ್ದೇವೆ. ಅವರು ಏನು ಉತ್ತರ ಕೊಡುತ್ತಾರೆ ಅನ್ನೋದನ್ನು ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:48 pm, Fri, 7 October 22