ಎಚ್ಚರ ಎಚ್ಚರ: ನಿಮ್ಮ ಮಕ್ಕಳ ಕೈಗೆ ಬೈಕ್ , ಕಾರು ಕೊಡುವರು ಈ ಸ್ಟೋರಿ ಓದಲೇ ಬೇಕು

ಡಿಎಲ್ ಇಲ್ಲದ ಸಣ್ಣಪುಟ್ಟ ಮಕ್ಕಳು ಕಾರು, ಬೈಕ್​ ಚಲಾಯಿಸುತ್ತಿರುವ ಪ್ರಕರಣಗಳು ದಿನಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದರಿಂದ ಸಾಕಷ್ಟು ರಸ್ತೆ ಅಪಘಾತಗಳ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಸಾವು ನೋವುಗಳು ಹೆಚ್ಚಾಗುತ್ತಿವೆ. ಹೀಗಾಗಿ ಇದಕ್ಕೆ ಬ್ರೇಕ್ ಹಾಕಲು ರಾಜ್ಯ ಸಾರಿಗೆ ಇಲಾಖೆ ಮುಂದಾಗಿದ್ದು, ಕಠಿಣ ನಿಯಮ ಜಾರಿಗೆ ತರಲು ಮುಂದಾಗಿದೆ. ಹೀಗಾಗಿ ಪೋಷಕರು ನಿಮ್ಮ ಮಕ್ಕಳ ಕೈಗೆ ಬೈಕ್, ಕಾರು ಕೊಡುವ ಮುನ್ನ ಈ ಸ್ಟೋರಿ ಓದಲೇಬೇಕು.

ಎಚ್ಚರ ಎಚ್ಚರ: ನಿಮ್ಮ ಮಕ್ಕಳ ಕೈಗೆ ಬೈಕ್ , ಕಾರು ಕೊಡುವರು ಈ ಸ್ಟೋರಿ ಓದಲೇ ಬೇಕು
ಪ್ರಾತಿನಿಧಿಕ ಚಿತ್ರ
Edited By:

Updated on: Nov 21, 2025 | 9:52 PM

ಬೆಂಗಳೂರು, ನವೆಂಬರ್ 21): 18 ವರ್ಷ ತುಂಬದ ಅಪ್ರಾಪ್ತ ಮಕ್ಕಳಿಗೆ  ವಾಹನಗಳನ್ನು ಚಲಾಯಿಸಲು ಕೊಡುತ್ತಿರುವುದರಿಂದ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ.ಹಾಲು, ನೀರು ತರಲು ಅಂಗಡಿಗೆ ಹೋಗಲು,ಸ್ಕೂಲ್, ಕಾಲೇಜಿಗೆ ಹೋಗಲು ಹೀಗೆ ಕೆಲ ಕಾರ್ಯಗಳಿಗೆ ಮಕ್ಕಳ ಕೈಯಲ್ಲಿ ಬೈಕ್ ಹಾಗೂ ಕಾರು ಚಲಾಯಿಸಲು ಕೊಡುತ್ತಿದ್ದು, ಹದಿಹರಿಯದ ವಯಸ್ಸಿನ ಮಕ್ಕಳು ಜೋಷ್​​ನಲ್ಲಿ ವೇಗವಾಗಿ ಚಲಾಯಿಸಿ ಅಪಘಾತ ಮಾಡುತ್ತಿದ್ದಾರೆ. ಹೀಗಾಗಿ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಕಟ್ಟು ನಿಟ್ಟಿನ ನಿಯಮ ಜಾರಿಗೆ ತರಲು ಮುಂದಾಗಿದ್ದು, ಮಕ್ಕಳು ವಾಹನ ಚಲಾಯಿಸಿದ್ರೆ 25 ಸಾವಿರ ರೂ. ದಂಡ ಮತ್ತು ಜೈಲು ಶಿಕ್ಷೆ.

ಸಣ್ಣ ಮಕ್ಕಳಿಗೆ ವಾಹನ ಚಲಾಯಿಸಲು ಕೊಡದಂತೆ ಸಾರಿಗೆ ಇಲಾಖೆ ಪೋಷರಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ. ಸಣ್ಣ ಮಕ್ಕಳು ಜೋಷ್ ನಲ್ಲಿ ವಿಪರೀತ ವೇಗವಾಗಿ ವಾಹನಗಳನ್ನು ಚಲಾಯಿಸಲು ಎಕ್ಸಿಡೆಂಟ್ ಮಾಡುತ್ತಿದ್ದಾರೆ. ಇಂತಹ ಪ್ರಕರಣಗಳು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಆಕ್ಸಿಡೆಂಟ್ ಗಳು ಹೆಚ್ಚಾಗಿ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.ಕೈ ಕಾಲು ಮುರಿದು ಕೊಳ್ಳುತ್ತಿದ್ದು, ಇದನ್ನು ತಪ್ಪಿಸಲು ರಾಜ್ಯ ಸಾರಿಗೆ ಇಲಾಖೆ ಸಣ್ಣ ಮಕ್ಕಳು ವಾಹನಗಳನ್ನು ಚಲಾಯಿಸಬಾರದೆಂದು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಇದಕ್ಕೆ ಪೋಷಕರು ಸ್ವಾಗತಿಸಿದ್ದು, ಡಿಎಲ್ ಇಲ್ಲದ ಮಕ್ಕಳಿಗೆ ವಾಹನ ಚಾಲನೆ ಮಾಡಲು ಕೊಡುವುದು ತಪ್ಪು ಎಂದು ಅಭಿಪ್ರಾಯ ತಿಳಿಸಿದ್ದಾರೆ.

ಇದನ್ನೂ ಓದಿ: ಮಗನಿಗೆ ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ: ಅಪ್ರಾಪ್ತರಿಗೆ ವಾಹನ ​ಕೊಡುವ ಮುನ್ನ ಹುಷಾರ್

ಈ ಬಗ್ಗೆ ಸರ್ಕಾರಕ್ಕೆ ಕೋರ್ಟ್​ ಖಡಕ್ ಸೂಚನೆ

ಮೊನ್ನೆ ಅಷ್ಟೇ ಈ ಸಂಬಂಧ ಕರ್ನಾಟಕ ಹೈಕೋರ್ಟ್​ ಮಹತ್ವದ ನಿರ್ದೇಶನ ನೀಡಿದೆ. ದ್ವಿಚಕ್ರ ವಾಹನಗಳಲ್ಲಿ ಸಂಚಾರ ಮಾಡುವ ಮಕ್ಕಳಿಗೆ ಹೆಲ್ಮೆಟ್‌ ಮತ್ತು ಸುರಕ್ಷತಾ ಕ್ರಮಗಳುಳ್ಳ ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು 2022ರ ನಿಯಮ 138ರ ಅನುಷ್ಟಾನಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಸರ್ಕಾರಕ್ಕೆ ಸೂಚಿಸಿದೆ.

ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ ಅರ್ಚನಾ ಭಟ್ ಕೆ. ಎಂಬವರು 2023ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ, ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಅಲ್ಲದೆ, ಕೇಂದ್ರ ಮೋಟಾರು ವಾಹನ ನಿಯಮಗಳನ್ನು ಜಾರಿಗೆ ತರುವಲ್ಲಿ ಅಧಿಕಾರಿಗಳು ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ವಾಸ್ತವವಾಗಿ ಜಾರಿಗೆ ಬಂದಿಲ್ಲ. ಹೀಗಾಗಿ ನಿಯಮಗಳನ್ನು ಜಾರಿಗೆ ತರಲು ಸರ್ಕಾರ ತಕ್ಷಣ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪೀಠ ಹೇಳಿದೆ.