AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಇಲಾಖೆ ಸಿಬ್ಬಂದಿಯ ಜುಲೈ ತಿಂಗಳ ಶೇ 25ರಷ್ಟು ಸಂಬಳಕ್ಕಾಗಿ 60 ಕೋಟಿ ಹಣ ಬಿಡುಗಡೆ

ನಾಳೆ ಬೆಳಗ್ಗೆ 11.30ಕ್ಕೆ ವಿಧಾನಸೌಧದಲ್ಲಿ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಸಾರಿಗೆ ಸಚಿವ ಶ್ರೀರಾಮುಲು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಸಾರಿಗೆ ಇಲಾಖೆ ಸಿಬ್ಬಂದಿಯ  ಜುಲೈ ತಿಂಗಳ ಶೇ 25ರಷ್ಟು ಸಂಬಳಕ್ಕಾಗಿ 60 ಕೋಟಿ ಹಣ ಬಿಡುಗಡೆ
ಸಾಂದರ್ಭಿಕ ಚಿತ್ರ
TV9 Web
| Updated By: guruganesh bhat|

Updated on:Aug 24, 2021 | 12:20 AM

Share

ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಸಂಬಳಕ್ಕಾಗಿ ರಾಜ್ಯ ಸರ್ಕಾರ 60.82 ಕೋಟಿ ಹಣ ಬಿಡುಗಡೆ ಮಾಡಿದೆ. ಜುಲೈ ತಿಂಗಳ ಶೇಕಡಾ 25ರಷ್ಟು ಸಂಬಳಕ್ಕಾಗಿ ಹಣ ಬಿಡುಗಡೆ ಮಾಡಲಾಗಿದೆ. ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಸತ್ಯವತಿ ಈಕುರಿತು ಅಧಿಕೃತ ಆದೇಶ ಪ್ರಕಟಿಸಿದ್ದಾರೆ. ಕೆಎಸ್ಆರ್ಟಿಸಿ ₹27.74 ಕೋಟಿ, ವಾಯುವ್ಯ ಕರ್ನಾಟಕ ₹17.48 ಕೋಟಿ, ಕಲ್ಯಾಣ ಕರ್ನಾಟಕ ಸಾರಿಗೆಗೆ 15.61 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ನಾಳೆ ಬೆಳಗ್ಗೆ 11.30ಕ್ಕೆ ವಿಧಾನಸೌಧದಲ್ಲಿ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಸಾರಿಗೆ ಸಚಿವ ಶ್ರೀರಾಮುಲು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

BMTC: ಶಾಲೆ ಆರಂಭವಾಗಲಿರುವ 9-12ನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಆಗಸ್ಟ್ 23, ಸೋಮವಾರದಿಂದ 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ- ಕಾಲೇಜು ಆರಂಭವಾಗಲಿರುವ (Karnataka School Reopen) ಕಾರಣ ಬಿಎಂಟಿಸಿ ಬಸ್​ಗಳಲ್ಲಿ (BMTC Bus) ವಿದ್ಯಾರ್ಥಿಗಳು ವಾಸಸ್ಥಳದಿಂದ ಶಾಲಾ- ಕಾಲೇಜಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. 2020-21 ಸಾಲಿನಲ್ಲಿ ವಿತರಣೆ ಮಾಡಿರುವ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸ್ ಮತ್ತು ಈ ವರ್ಷದ ಶೈಕ್ಷಣಿಕ ದಾಖಲಾತಿ ಶುಲ್ಕ ಕಟ್ಟಿರುವ ರಶೀದಿ ತೋರಿಸಿ ವಿದ್ಯಾರ್ಥಿಗಳು ಬಿಎಂಟಿಸಿ ವ್ಯಾಪ್ತಿಯ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಅಥವಾ ಶಾಲಾ ಕಾಲೇಜಿನ ಐಡಿ ಕಾರ್ಡ್ ತೋರಿಸಿಯೂ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಿಎಂಟಿಸಿಯ ಮುಂದಿನ ಆದೇಶದವರೆಗೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಒದಗಿಸಲಾಗಿದೆ.

ವಿದ್ಯಾರ್ಥಿಗಳು ಪಾಲಿಸಬೇಕಾಗಿರುವ ಸಂಗತಿಗಳೇನು? ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ಈಗಾಗಲೇ ಮಾರ್ಗಸೂಚಿ ನೀಡಿದ್ದು, ಹೇಗೆಲ್ಲಾ ತಯಾರಿ ಮಾಡಿಕೊಳ್ಳಬೇಕು? ಯಾವೆಲ್ಲಾ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದೆ. ಅದರಂತೆ ಪ್ರಮುಖ ನಿಯಮಗಳು ಇಂತಿವೆ:

1. ಶಾಲೆಯಲ್ಲಿ ಎರಡಕ್ಕಿಂತ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದರೆ ಒಂದು ವಾರ ಶಾಲೆ ಸೀಲ್​ಡೌನ್ 2. ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ಪ್ರಮಾಣ ಇರುವ ಜಿಲ್ಲೆಗಳಲ್ಲಿ ಶಾಲೆ ತೆರೆಯುವಂತಿಲ್ಲ 3. ಕೊರೊನಾ ಲಕ್ಷಣ ಕಂಡು ಬರುವ ಮಗುವನ್ನು ಶಾಲೆಗೆ ಕಳುಹಿಸುವಂತಿಲ್ಲ 4. ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯ 5. ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಕಡ್ಡಾಯವಾಗಿ ಕೊರೊನಾ ಲಸಿಕೆ ಪಡೆದಿರಬೇಕು 6. ವಿದ್ಯಾರ್ಥಿಗಳು ತಮ್ಮ ಪೋಷಕರಿಂದ ಒಪ್ಪಿಗೆ ಪತ್ರ ಪಡೆದು ಶಾಲೆಗೆ ಬರಬೇಕು 7. ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ 72 ಗಂಟೆಗಳ ಅಂತರದಲ್ಲಿ ಪಡೆದ ಕೊವಿಡ್ ನೆಗೆಟಿವ್ ವರದಿ ಸಲ್ಲಿಸಬೇಕು 8. ಶಾಲೆ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಇಲ್ಲ 9. ಆನ್ ಲೈನ್ ಹಾಗೂ ಆಫ್ ಲೈನ್ ಎರಡಕ್ಕೂ ಅವಕಾಶ ಸಾಧ್ಯತೆ 10. ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಕಲಿಕೆಗೆ ಅವಕಾಶ

ಇದನ್ನೂ ಓದಿ: 

ನುಡಿನಮನ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಬುಡಕಟ್ಟು ವಾದ್ಯ ಕಡ್ಡಾಯಿ ಕಲಾವಿದ ಗುರುವ ಕೊರಗ ನಿಧನ

ಪಂಜ್​ಶಿರ್​ ಹೋರಾಟಕ್ಕೆ ತಜಕಿಸ್ತಾನ್ ಬೆಂಬಲ: ಮತ್ತೊಂದು ಮಜಲಿಗೆ ಅಫ್ಘಾನಿಸ್ತಾನ ಯುದ್ಧ

(Karnataka Transport Department released 60 crores for salaries for Transport Department staff)

Published On - 10:14 pm, Mon, 23 August 21