AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ: ಕೊನೆಗೂ ವೇತನ ಹೆಚ್ಚಳ

ಸಾರಿಗೆ ನೌಕರರಿಗೆ 12.50ರಷ್ಟು ಸಂಬಳ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ಸಾರಿಗೆ ನೌಕರರ ಬಹುದಿನಗಳ ಹೋರಾಟ, ಮುಷ್ಕರಕ್ಕೆ ಕೊನೆಗೂ ಫಲ ಸಿಕ್ಕಂತಾಗಿದೆ. ಶೇ 25 ರಷ್ಟು ವೇತನ ಪರಿಷ್ಕರಣೆಗೆ ನೌಕರರು ಪಟ್ಟು ಹಿಡಿದಿದ್ದರು. ಸದ್ಯ ಸರ್ಕಾರ 12.50ರಷ್ಟು ವೇತನ ಹೆಚ್ಚಿಸಿದೆ.

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ: ಕೊನೆಗೂ ವೇತನ ಹೆಚ್ಚಳ
ಸಾರಿಗೆ ನೌಕರರ ವೇತನ ಹೆಚ್ಚಳ (ಎಐ ಚಿತ್ರ)Image Credit source: tv9 kannada
ಕಿರಣ್​ ಸೂರ್ಯ
| Edited By: |

Updated on:May 12, 2026 | 7:17 PM

Share

ಬೆಂಗಳೂರು, ಮೇ 12: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ (Transport Staff) ಮೂಲ ವೇತನದಲ್ಲಿ ಶೇ. 12.50 ರಷ್ಟು ಹೆಚ್ಚಳ (salary hike) ಮಾಡುವ ಮೂಲಕ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಆ ಮೂಲಕ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, NWKRTC ಮತ್ತು KKRTC ಸಾರಿಗೆ ಸಂಸ್ಥೆಗಳ ನೌಕರರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ವೇತನ ಹೆಚ್ಚಿಸುವ ಮೂಲಕ ಗುಡ್ ನ್ಯೂಸ್ ನೀಡಿದೆ.

ಮುಖ್ಯಾಂಶಗಳು

  • ಸಾರಿಗೆ ನೌಕರರ ಸಂಬಳ ಹೆಚ್ಚಳ ಮಾಡಿ ಸರ್ಕಾರ ಆದೇಶ
  • ಕೊನೆಗೂ ಸಾರಿಗೆ ನೌಕರರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿದ ಸರ್ಕಾರ
  • 2025 ಏಪ್ರಿಲ್​​​ 1ರಿಂದ ಹೊಸ ವೇತನ ಪರಿಷ್ಕರಣೆ ಜಾರಿ

2025ರ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಹೊಸ ವೇತನ ಪರಿಷ್ಕರಣೆ ಮಾಡಲಾಗಿದೆ. ಈ ಹೊಸ ಆದೇಶದ ಪ್ರಕಾರ, ಮಾರ್ಚ್ 31, 2025ರ ಅಂತ್ಯಕ್ಕೆ ನೌಕರರು ಪಡೆಯುತ್ತಿದ್ದ ಮೂಲ ವೇತನಕ್ಕೆ ಈ ಹೆಚ್ಚಳ ಅನ್ವಯವಾಗಲಿದ್ದು, ಪರಿಷ್ಕೃತ ವೇತನ ಶ್ರೇಣಿಯು ಮಾರ್ಚ್ 31, 2029ರವರೆಗೆ ಜಾರಿಯಲ್ಲಿರಲಿದೆ.

15 ತಿಂಗಳ ಹಿಂಬಾಕಿ ನೀಡಲು ನಿರ್ಧಾರ

ಹೆಚ್ಚಳ ವೇತನದ ಹಣವು ಜುಲೈ 1, 2026ರಿಂದ ನೌಕರರ ಮಾಸಿಕ ಸಂಬಳದೊಂದಿಗೆ ಪಾವತಿಯಾಗಲಿದೆ. ಇನ್ನು ಏಪ್ರಿಲ್ 1, 2025ರಿಂದ ಜೂನ್ 30, 2026ರವರೆಗಿನ 15 ತಿಂಗಳ ಹಿಂಬಾಕಿಯನ್ನು ಸಂಸ್ಥೆಗಳ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪಾವತಿಸಲು ಸರ್ಕಾರ ತೀರ್ಮಾನಿಸಿದೆ.

ಇದನ್ನೂ ಓದಿ: ಮೇ 20 ರಿಂದ ಕರ್ನಾಟಕದಲ್ಲಿ ಸಾರಿಗೆ ಬಸ್​ಗಳು ರಸ್ತೆಗಿಳಿಯುವುದು ಡೌಟ್! ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರ ತೀರ್ಮಾನ

ಹೆಚ್ಚುವರಿ ವೆಚ್ಚ ಎಷ್ಟು?

ಈ ವೇತನ ಪರಿಷ್ಕರಣೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಸೇರಿ ನಾಲ್ಕು ಸಾರಿಗೆ ನಿಗಮಗಳಿಗೆ ಪ್ರತಿ ತಿಂಗಳು 72.80 ಕೋಟಿ ರೂ ಮತ್ತು ವಾರ್ಷಿಕ 873.64 ಕೋಟಿ ರೂ. ಹೆಚ್ಚುವರಿ ವೆಚ್ಚವಾಗಲಿದೆ. ಈ ಪರಿಷ್ಕರಣೆ ಒಟ್ಟು 1 ಲಕ್ಷದ 5 ಸಾವಿರ ಸಿಬ್ಬಂದಿಗಳಿಗೆ ಅನ್ವಯವಾಗಲಿದೆ.

ಹಿಂಬಾಕಿ ವೇತನ ಜಮೆ

ಈಗಾಗಲೇ 2023ರ ಮಾರ್ಚ್ ವೇತನ ಪರಿಷ್ಕರಣೆಯ 26 ತಿಂಗಳ ಹಿಂಬಾಕಿ ಮೊತ್ತ 1,271.92 ಕೋಟಿ ರೂ ಇದ್ದು, ಮೊದಲ ಕಂತಿನ 450 ಕೋಟಿ ರೂ ಸರ್ಕಾರ ಬಿಡುಗಡೆ ಮಾಡಿದ್ದು, ನೌಕರರ ಖಾತೆಗಳಿಗೆ ಜಮಾ ಮಾಡಲಾಗಿದೆ.

ಇದನ್ನೂ ಓದಿ: ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್​​​ ನ್ಯೂಸ್​​: ವೇತನ ಹಿಂಬಾಕಿ ಪಾವತಿಗೆ 450 ಕೋಟಿ ರೂ. ಬಿಡುಗಡೆ!

ಕೆಎಸ್ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ನೌಕರರು ಶೇ.25ರಷ್ಟು ವೇತನ ಪರಿಷ್ಕರಣೆಗೆ ಪಟ್ಟು ಹಿಡಿದಿದ್ದರು. ರಾಜ್ಯಾದ್ಯಂತ ಮುಷ್ಕರ ಮಾಡಲಾಗಿತ್ತು. ಈ ಹಿಂದೆ ಬಿಜೆಪಿ ಸರ್ಕಾರ 2023 ಮಾರ್ಚ್​​ 15ರಂದು ಶೇ.15ರಷ್ಟು ವೇತನ ಹೆಚ್ಚಿಸಿತ್ತು. ನೌಕರರ ಬೇಡಿಕೆ ಶೇ.25 ಇದ್ದರೂ, ಸದ್ಯ ಶೇ.12.50 ಹೆಚ್ಚಳಕ್ಕೆ ರಾಜ್ಯ ಸರ್ಕಾರ ಸಮ್ಮತಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:31 pm, Tue, 12 May 26

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ