ಶಕ್ತಿ ಸ್ಮಾರ್ಟ್​​ ಕಾರ್ಡ್​​ಗೆ ಆನ್​ಲೈನ್ ಅರ್ಜಿ ಸಲ್ಲಿಸಲು ಶೀಘ್ರ ಹೊಸ ಪೋರ್ಟಲ್; ಸಚಿವ ರಾಮಲಿಂಗಾ ರೆಡ್ಡಿ

ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆಂದೇ ಹೊಸದೊಂದು ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಹೇಳಿದ್ದಾರೆ.

ಶಕ್ತಿ ಸ್ಮಾರ್ಟ್​​ ಕಾರ್ಡ್​​ಗೆ ಆನ್​ಲೈನ್ ಅರ್ಜಿ ಸಲ್ಲಿಸಲು ಶೀಘ್ರ ಹೊಸ ಪೋರ್ಟಲ್; ಸಚಿವ ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ
Follow us
| Updated By: ಗಣಪತಿ ಶರ್ಮ

Updated on: Jun 27, 2023 | 5:52 PM

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿಗಳಲ್ಲಿ ಒಂದಾದ, ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆಂದೇ ಹೊಸದೊಂದು ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಮಂಗಳವಾರ ಹೇಳಿದ್ದಾರೆ. ‘ಶಕ್ತಿ ಸ್ಮಾರ್ಟ್ ಕಾರ್ಡ್‌’ಗಳಿಗೆ (Shakti smart cards) ಅರ್ಜಿ ಸಲ್ಲಿಸುವ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ಸ್ಮಾರ್ಟ್ ಕಾರ್ಡ್‌ಗಳ ಅಗತ್ಯವಿದೆ.

ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆಯಬಹುದು ಎಂದು ರೆಡ್ಡಿ ತಿಳಿಸಿದ್ದಾರೆ. ಹೊಸ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ. ಯಾವುದೇ ಗುರುತಿನ ಚೀಟಿಯನ್ನು ಅಪ್‌ಲೋಡ್ ಮಾಡುವ ಮೂಲಕ ಸ್ಮಾರ್ಟ್ ಕಾರ್ಡ್ ಪಡೆಯಬಹುದು. ಸದ್ಯಕ್ಕೆ, ಸರ್ಕಾರ ನೀಡಿದ ಯಾವುದೇ ಗುರುತಿನ ಚೀಟಿಯನ್ನು ತೋರಿಸಿ ಮಹಿಳೆಯರು ಮೂರು ತಿಂಗಳವರೆಗೆ ಉಚಿತವಾಗಿ ಪ್ರಯಾಣಿಸಬಹುದು ಎಂದು ಅವರು ಹೇಳಿದ್ದಾರೆ.

ಈ ಯೋಜನೆಯು ರಸ್ತೆ ಸಾರಿಗೆ ನಿಗಮಗಳಿಗೆ (ಆರ್‌ಟಿಸಿ) ಹೆಚ್ಚಿನ ಅಧಿಕಾರ ನೀಡಿದೆ ಎಂದು ರೆಡ್ಡಿ ಹೇಳಿದರು. ಯೋಜನೆಯಿಂದ ನಿಗಮಗಳ ಆದಾಯ ಹೆಚ್ಚಿದೆ. ಇದರಿಂದ ಸರ್ಕಾರ, ಪಾಲಿಕೆ ಹಾಗೂ ನಮ್ಮ ಪಕ್ಷಕ್ಕೆ ಹೆಚ್ಚಿನ ಬಲ ಬಂದಿದೆ. ಇದು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಶಕ್ತಿಹೀನಗೊಳಿಸಿದೆ. ಯಾಕೆಂದರೆ ಅವರು (ಬಿಜೆಪಿಯವರು) ಮಹಿಳೆಯರನ್ನು ಬೆಂಬಲಿಸುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಹಲ್ಲೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ; ಸಚಿವ ರಾಮಲಿಂಗಾ ರೆಡ್ಡಿಗೆ ಸಿಬ್ಬಂದಿಯಿಂದ ಮನವಿ

ಕಾಂಗ್ರೆಸ್ ಪಕ್ಷದ ಐದು ಚುನಾವಣಾ ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ’ ಹಯೋಜನೆಗೆ ಜೂನ್ 11 ರಂದು ಚಾಲನೆ ನೀಡಲಾಯಿತು. ಅಂದಿನಿಂದ 8,24,93,637 ಮಹಿಳೆಯರು ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ, ಮತ್ತು 194,50,13,686 ರೂಪಾಯಿ ಮೌಲ್ಯದ ಟಿಕೆಟ್‌ಗಳನ್ನು ವಿತರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ