ನಗದು ರಹಿತ ಟಿಕೆಟ್, ಎಲೆಕ್ಟ್ರಾನಿಕ್ ಬಸ್ ಸೌಲಭ್ಯ, ವಿದ್ಯಾರ್ಥಿಗಳಿಗೆ ಆನ್​ಲೈನ್​ನಲ್ಲೇ ಬಸ್ ಪಾಸ್ ವಿತರಣೆಗೆ ಕ್ರಮ: ಸಾರಿಗೆ ಸಚಿವ ಶ್ರೀರಾಮುಲು

ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

ನಗದು ರಹಿತ ಟಿಕೆಟ್,  ಎಲೆಕ್ಟ್ರಾನಿಕ್ ಬಸ್ ಸೌಲಭ್ಯ, ವಿದ್ಯಾರ್ಥಿಗಳಿಗೆ ಆನ್​ಲೈನ್​ನಲ್ಲೇ ಬಸ್ ಪಾಸ್ ವಿತರಣೆಗೆ ಕ್ರಮ: ಸಾರಿಗೆ ಸಚಿವ ಶ್ರೀರಾಮುಲು
ಮಾಜಿ ಸಚಿವ ಬಿ.ಶ್ರೀರಾಮುಲು
Follow us
TV9 Web
| Updated By: guruganesh bhat

Updated on:Aug 24, 2021 | 3:06 PM

ಬೆಂಗಳೂರು: ಸದ್ಯಕ್ಕೆ ಯಾವುದೇ ಬಸ್ ಪಾಸ್ ದರ ಹೆಚ್ಚಳ ಮಾಡುವುದಿಲ್ಲ. ಬಸ್ ಟಿಕೇಟ್ ದರದಲ್ಲೂ ಕೂಡ ಯಾವುದೇ ಹೆಚ್ಚಳ ಇಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಡೀಸೆಲ್ ಬೆಲೆ ಹೆಚ್ಚಳದಿಂದಲೇ ಸಾರಿಗೆ ಸಂಸ್ಥೆಗಳಿಗೆ ನಷ್ಟವಾಗುತ್ತದೆ ಎಂಬ ವಿಚಾರದ ಕುರಿತೂ ಮಾತನಾಡಿದ ಅವರು, ಪ್ರಯಾಣಿಕರ ಸಂಖ್ಯೆ ಕಡಿಯಾದಾಗಲೂ ನಷ್ಟವಾಗುತ್ತದೆ. ಹೀಗಾಗಿ ಡೀಸಲ್ ಬೆಲೆ ಮಾತ್ರವಲ್ಲ. ಖಾಲಿ ವಾಹನ ಚಲಾಯಿಸುವಿದರಿಂದಲೂ ನಷ್ಟವಾಗುತ್ತಿದೆ. ಎಲೆಕ್ಟ್ರಾನಿಕ್ ಬಸ್​ಗಳ ಬಳಕೆ ಹೆಚ್ಚಿಸುವುದರಿಂದ ನಷ್ಟ ಕಡಿಮೆ ಮಾಡಬಹುದು. ಇಂಧನ ಬೆಲೆ ಇಡೀ ದೇಶದಲ್ಲಿದೆ, ಕಡಿಮೆ ಮಾಡಿ ಅಂತ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ಆನ್​ಲೈನ್ ಮೂಲಕ ಬಸ್​ಪಾಸ್ ಒದಗಿಸುವ ವ್ಯವಸ್ಥೆ ಜಾರಿಗೊಳಿಸುತ್ತೇವೆ. ಸಾರಿಗೆ ನೌಕರರ ಪರವಾಗಿ ನಿಲ್ಲುತ್ತೇವೆ ಎಂದು ಸಹ ಅವರು ವಿವರ ನೀಡಿದರು.

ಜನರಿಗೆ ಹೊರೆಯಾಗದ ರೀತಿ ಲಾಭವಾಗಿ ಮಾಡಬೇಕಿದೆ. ಸೇವೆಯ ಜೊತೆಯಲ್ಲಿ ಲಾಭದಾಯಕವಾಗಿ ಮಾಡಬೇಕು. ಇದಕ್ಕಾಗಿ ಜನರಿಗೆ ಅನುಕೂಲ ಅಗುವ ರೀತಿ ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ. ಟೆಕ್ನಾಲಜಿ ಬಳಸಿ ಕ್ಯಾಶ್ ಲೆಸ್ ಟಿಕೆಟ್ ದೊರೆಯುವಂತೆ ಮಾಡಬೇಕು. ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದರು. ಯಾರ ನಿಗಮಕ್ಕೆ ಎಷ್ಟು ನಷ್ಟ?

ಸದ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಷ್ಟದಲ್ಲಿದ್ದು ನಿಗಮದ ಸಂಸ್ಥೆಗಳ ನಷ್ಟವನ್ನು ತುಂಬಿಕೊಂಡು ಲಾಭದತ್ತ ಸಾರಿಗೆ ಇಲಾಖೆಯನ್ನು ಮುನ್ನಡೆಸುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು.  ಕೆಎಸ್ಆರ್ಟಿಸಿ 427 ಕೋಟಿ, ಬಿಎಂಟಿಸಿ 548 ಕೋಟಿ, ಎನ್ಡಬ್ಲ್ಯುಕೆಎಸ್ಆರ್ಟಿಸಿ, 389 ಕೋಟಿ, ಕಲ್ಯಾಣ ಕರ್ನಾಟಕ 191 ಕೋಟಿ ನಷ್ಟದಲ್ಲಿದೆ. ಈಮೂಲಕದ ಒಟ್ಟು 1121 ಕೋಟಿ ನಷ್ಟದ ಹೊರೆ ರಾಜ್ಯ ರಸ್ತೆ ಸಾರಿಗೆ ನಿಗಮದ ಮೇಲಿದೆ.

ಯಾರೊಬ್ಬರೂ ಇಂಥದ್ದೇ ಖಾತೆ ಬೇಕೆಂದು ಕೇಳಬಾರದು. ಇಂಥದ್ದೇ ಖಾತೆ ಬೇಕೆನ್ನುವುದು ಸರಿಯಲ್ಲ. ಆನಂದ್ ಸಿಂಗ್ ನಮ್ಮ ಸ್ನೇಹಿತ, ಫೋನ್ನಲ್ಲಿ ಚರ್ಚಿಸಿದ್ದೇನೆ ಎಂದು ಸಹ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಹಂಗಾಮಿ ಸರ್ಕಾರ ರಚಿಸಿದ ತಾಲಿಬಾನ್: ಆಹಾರ ಧಾನ್ಯದ ಬೆಲೆ ಏರಿಕೆ

BMTC: ಶಾಲೆ ಆರಂಭವಾಗಲಿರುವ 9-12ನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

(Karnataka Transport Minister Sriramulu says Action to bring cashless ticket and electronic bus facility no hike in Bus pass and ticket)

Published On - 2:56 pm, Tue, 24 August 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ