Karnataka Transport Workers Strike: ಕೆಎಸ್ಆರ್ಟಿಸಿ, ಬಿಎಂಟಿಸಿ ಬಂದ್, ಸರ್ಕಾರಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ಗಳ ದರ್ಬಾರ್
KSRTC BMTC Employees Strike: ಕೊಪ್ಪಳ, ತುಮಕೂರು, ಹಾವೇರಿ, ಮಂಡ್ಯ, ಬಾಗಲಕೋಟೆ, ಚಿತ್ರದುರ್ಗ, ರಾಮನಗರ, ನೆಲಮಂಗಲ, ಯಾದಗಿರಿ, ಕೋಲಾರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದ ಕಾರಣ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಬೀದರ್ನಲ್ಲಿ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಶೇ.40ರಷ್ಟು ಬಸ್ ಮಾತ್ರ ಸಂಚಾರ ಆರಂಭಿಸಿವೆ.
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಮುನಿಸಿಕೊಂಡಿರುವ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ನೌಕರರು ತಮ್ಮ ಬೇಡಿಕೆಗಳನ್ನು ಈ ಕೂಡಲೇ ಈಡೇರಿಸುವಂತೆ ಆಗ್ರಹಿಸಿ ಮುಷ್ಕರದ ಮಾರ್ಗ ಹಿಡಿದಿದ್ದಾರೆ. ಪರಿಣಾಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳಗ್ಗಿನಿಂದಲೇ ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ತಬ್ಧವಾಗಿದ್ದು, ಬೆಂಗಳೂರಿನಲ್ಲೂ ಬಿಎಂಟಿಸಿ ಬಸ್ಗಳು ರಸ್ತೆಗಿಳಿಯದ ಕಾರಣ ದಿನನಿತ್ಯ ಕೆಲಸ ಕಾರ್ಯಗಳಿಗೆ ಬಸ್ಗಳನ್ನೇ ನೆಚ್ಚಿಕೊಂಡ ಜನ ಬೇರೆ ವ್ಯವಸ್ಥೆ ಹುಡುಕಿಕೊಳ್ಳಲು ಪರದಾಡುತ್ತಿದ್ದಾರೆ.
ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣ ಬಿಕೋ ಎನ್ನುತ್ತಿದ್ದು, ಕೇವಲ ಬೆರಳಿಕೆಯಷ್ಟು ಅಂತರರಾಜ್ಯ ಬಸ್ಗಳು ಮಾತ್ರ ಓಡಾಟ ಆರಂಭಿಸಿವೆ. ಮೆಜೆಸ್ಟಿಕ್ ಬಸ್ ನಿಲ್ದಾಣವೂ ಖಾಲಿ ಖಾಲಿಯಾಗಿದ್ದು ಬೆಳಗ್ಗೆ ಬೇಗ ಬಂದರೆ ಬಸ್ ಸಿಗಬಹುದೆಂಬ ನಿರೀಕ್ಷೆಯಲ್ಲಿ ಆಗಮಿಸಿದ್ದ ಜನ ನಿರಾಶರಾಗಿದ್ದಾರೆ. ಪ್ರತಿನಿತ್ಯಕ್ಕೆ ಹೋಲಿಸಿದರೆ ಇಂದು ಪ್ರಯಾಣಿಕರ ಸಂಖ್ಯೆಯೂ ಇಳಿಮುಖವಾಗಿದೆ. ಅಂತೆಯೇ, ನಗರ ವ್ಯಾಪ್ತಿಯಲ್ಲಿ ಬಿಎಂಟಿಸಿ ಬಸ್ ಸಂಚಾರ ಸ್ಘಗಿತಗೊಂಡಿರುವ ಹಿನ್ನೆಲೆಯಲ್ಲಿ ಯಶವಂತಪುರ, ಗೊರಗುಂಟೆ ಪಾಳ್ಯ, ಪೀಣ್ಯ ಸೇರಿದಂತೆ ಬಹುತೇಕ ಎಲ್ಲಾ ಭಾಗಗಳಲ್ಲೂ ಪ್ರಯಾಣಿಕರಿಗೆ ತೊಂದರೆಯಾಗಿದೆ.
ಕೊಪ್ಪಳ, ತುಮಕೂರು, ಹಾವೇರಿ, ಮಂಡ್ಯ, ಬಾಗಲಕೋಟೆ, ಚಿತ್ರದುರ್ಗ, ರಾಮನಗರ, ನೆಲಮಂಗಲ, ಯಾದಗಿರಿ, ಕೋಲಾರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದ ಕಾರಣ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಬೀದರ್ನಲ್ಲಿ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಶೇ.40ರಷ್ಟು ಬಸ್ ಮಾತ್ರ ಸಂಚಾರ ಆರಂಭಿಸಿವೆ.
ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎನ್ನುವುದು ನಿಶ್ಚಿತವಾಗುತ್ತಿದ್ದಂತೆಯೇ ಬೆಂಗಳೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಖಾಸಗಿ ಬಸ್ಗಳು ಲಗ್ಗೆ ಇಟ್ಟಿವೆ. ಆರಂಭದಲ್ಲಿ ಒಂದೆರೆಡು ಬಿಎಂಟಿಸಿ ಬಸ್ ಕಣ್ಣಿಗೆ ಬಿದ್ದವಾದರೂ ಅದರಲ್ಲಿದ್ದ ಚಾಲಕರು ಹಾಗೂ ನಿರ್ವಾಹಕರು ನಮ್ಮ ಪಾಳಿ ಮುಗಿದಿದೆ. ಬಸ್ ಅನ್ನು ಡಿಪೋಕ್ಕೆ ಬಿಟ್ಟು ಮನೆಗೆ ತೆರಳಲು ಬಂದಿದ್ದೇವೆ ಎಂದು ಹೇಳುವ ಮೂಲಕ ಇಂದು ಯಾರೂ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂಬುದನ್ನು ಹೇಳಿದರು.
ಇದನ್ನೂ ಓದಿ: Karnataka Transport Workers Strike: ಮೆಜೆಸ್ಟಿಕ್ ಬಸ್ನಿಲ್ದಾಣಕ್ಕೆ ಖಾಸಗಿ ಬಸ್ಗಳು
Bus Strike: ಸಾರಿಗೆ ನೌಕರರ ಜತೆ ಸಂಧಾನ ಪ್ರಶ್ನೆಯೇ ಇಲ್ಲ; ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಎಚ್ಚರಿಕೆ
Published On - 6:30 am, Wed, 7 April 21