AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಣಿ ಸಾವು, ನಾಪತ್ತೆ ಪ್ರಕರಣ ಹೆಚ್ಚಳ ಬೆನ್ನಲ್ಲೇ ಅರಣ್ಯ ಇಲಾಖೆ ಅಲರ್ಟ್: ಟ್ರಕ್ಕಿಂಗ್​​ ಬಿಗಿಕ್ರಮ

ಪಶ್ಚಿಮ ಘಟ್ಟ ಮತ್ತು ಅರಣ್ಯ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಚಾರಣ ಅವಘಡಗಳ ಬೆನ್ನಲ್ಲೇ ರಾಜ್ಯ ಅರಣ್ಯ ಇಲಾಖೆ ಹೊಸ ಸುರಕ್ಷತಾ ನಿಯಮಾವಳಿಗಳನ್ನು ಜಾರಿಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ಇಲಾಖೆ 39 ಚಾರಣ ಮಾರ್ಗಗಳಿಗೆ ಕ್ಯಾರಿಯಿಂಗ್ ಕೆಪಾಸಿಟಿ, ಜಿಪಿಎಸ್ ಟ್ರ್ಯಾಕಿಂಗ್, ಸ್ಥಳೀಯ ಮಾರ್ಗದರ್ಶಕರು ಮತ್ತು ತುರ್ತು ರಕ್ಷಣಾ ತಂಡಗಳನ್ನು ನಿಯೋಜಿಸಲು ನಿರ್ಧರಿಸಿದೆ.

ಸರಣಿ ಸಾವು, ನಾಪತ್ತೆ ಪ್ರಕರಣ ಹೆಚ್ಚಳ ಬೆನ್ನಲ್ಲೇ ಅರಣ್ಯ ಇಲಾಖೆ ಅಲರ್ಟ್: ಟ್ರಕ್ಕಿಂಗ್​​ ಬಿಗಿಕ್ರಮ
ಪ್ರಾತಿನಿಧಿಕ ಚಿತ್ರ Image Credit source: Getty images
ಹರೀಶ್ ಜಿ.ಆರ್​.
| Edited By: |

Updated on: Aug 30, 2026 | 5:02 PM

Share

ಬೆಂಗಳೂರು, ಆಗಸ್ಟ್​ 30: ಪಶ್ಚಿಮ ಘಟ್ಟ ಸೇರಿದಂತೆ ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಾರಣ (Trekking) ಅವಘಡಗಳು ಮತ್ತು ವನ್ಯಜೀವಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಅರಣ್ಯ ಇಲಾಖೆ ಅಲರ್ಟ್ ಆಗಿದೆ. ಚಾರಣಿಗರ ಸುರಕ್ಷತೆ ಮತ್ತು ಚಾರಣ ಮಾರ್ಗಗಳ ಭದ್ರತೆ ಗಮನದಲ್ಲಿಟ್ಟುಕೊಂಡು  ಹೊಸ ಕಾರ್ಯಾಚರಣೆ ನಿಯಮಾವಳಿ (SOP) ಜಾರಿಗೆ ತರಲು ಇಲಾಖೆ ಮುಂದಾಗಿದೆ.

ಸರಣಿ ಚಾರಣ ಅವಘಡಗಳು 

ಇತ್ತೀಚೆಗೆ ನಡೆದ ಸರಣಿ ಅವಘಡಗಳು ಚಾರಣಿಗರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ಸೃಷ್ಟಿಸಿವೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಚಿರತೆ ದಾಳಿಗೆ 10 ವರ್ಷದ ಬಾಲಕ ಬಲಿಯಾಗಿದ್ದರೆ, ಬಂಡಾಜೆ ಜಲಪಾತ ಮಾರ್ಗದಲ್ಲಿ ಚಾರಣಕ್ಕೆ ತೆರಳಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಮತ್ತೊಂದೆಡೆ, ತಡಿಯಂಡಮೋಲ್‌ನಲ್ಲಿ ಕೇರಳ ಮೂಲದ ಮಹಿಳೆಯೊಬ್ಬರು ದಾರಿ ತಪ್ಪಿ ನಾಪತ್ತೆಯಾಗಿದ್ದು, ಅರಣ್ಯ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದರು.

39 ನಿಯಮಿತ ಮಾರ್ಗಗಳು: ‘ಕ್ಯಾರಿಯಿಂಗ್ ಕೆಪಾಸಿಟಿ’ ಮಿತಿ

ರಾಜ್ಯದಲ್ಲಿ ಒಟ್ಟು 39 ನಿಯಮಿತ ಅರಣ್ಯ ಚಾರಣ ಮಾರ್ಗಗಳನ್ನು ಗುರುತಿಸಲಾಗಿದೆ. ಅತಿಯಾದ ಪ್ರವಾಸಿಗರ ದಟ್ಟಣೆಯನ್ನು ತಪ್ಪಿಸಲು ಮತ್ತು ಪ್ರಕೃತಿಯ ಮೇಲಿನ ಒತ್ತಡ ಕಡಿಮೆ ಮಾಡಲು ಇನ್ನುಮುಂದೆ ‘ಕ್ಯಾರಿಯಿಂಗ್ ಕೆಪಾಸಿಟಿ’ ಆಧಾರದ ಮೇಲೆ ಚಾರಣಿಗರ ಸಂಖ್ಯೆಗೆ ಕಟ್ಟುನಿಟ್ಟಿನ ಮಿತಿ ಹೇರಲು ನಿರ್ಧರಿಸಲಾಗಿದೆ.

ಜಿಪಿಎಸ್ ಟ್ರ್ಯಾಕಿಂಗ್ ಹಾಗೂ ಸ್ಥಳೀಯರಿಗೆ ತರಬೇತಿ

  • ಚಾರಣಿಗರ ಚಲನವಲನ ಗಮನಿಸಲು ಜಿಪಿಎಸ್ ಆಧಾರಿತ ಟ್ರ್ಯಾಕಿಂಗ್ ವ್ಯವಸ್ಥೆ ಅಳವಡಿಕೆ.
  • ಸ್ಥಳೀಯ ಯುವಕರಿಗೆ ಸೂಕ್ತ ತರಬೇತಿ ನೀಡಿ, ಅವರನ್ನು ಅಧಿಕೃತ ಪ್ರಕೃತಿ ಮಾರ್ಗದರ್ಶಕರಾಗಿ  ನಿಯೋಜಿಸಲಾಗುವುದು.
  • ಅರಣ್ಯ ಮಾರ್ಗಗಳಲ್ಲಿ ದಾರಿ ತಪ್ಪುವುದನ್ನು ತಪ್ಪಿಸಲು ಸ್ಪಷ್ಟ ದಾರಿ ಸೂಚಿ ಫಲಕಗಳು ಮತ್ತು ಅಗತ್ಯ ಮೂಲಸೌಕರ್ಯಗಳ ವೃದ್ಧಿ.
  • ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಾಗ ತಕ್ಷಣ ನೆರವಿಗೆ ಧಾವಿಸಲು ಬಲವರ್ಧಿತ ರಕ್ಷಣಾ ಪಡೆಗಳ ಸಜ್ಜು.

ಇದನ್ನೂ ಓದಿ: ಅಕೌಂಟ್ ನಲ್ಲಿ 1 ಕೋಟಿ ಬ್ಯಾಲೆನ್ಸ್: ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾಗಿ 7 ದಿನಗಳಾದ್ರೂ ಸಿಗದ ಟೆಕ್ಕಿ ಅದ್ವೈತ್ ಸುಳಿವು

ವನ್ಯಜೀವಿಗಳ ಸಂಚಾರ ಹೆಚ್ಚಿರುವ ಸೂಕ್ಷ್ಮ ಪ್ರದೇಶಗಳಲ್ಲಿ ಚಾರಣವನ್ನು ಕಡ್ಡಾಯವಾಗಿ ನಿಷೇಧಿಸಲಾಗುತ್ತದೆ. ಕುದುರೆಮುಖ ಸೇರಿದಂತೆ ಸುರಕ್ಷಿತವಾಗಿರುವ ಆಯ್ದ ಮಾರ್ಗಗಳನ್ನು ಮಾತ್ರ ಹಂತ-ಹಂತವಾಗಿ ಮರುಆರಂಭಿಸಲು ನಿರ್ಧರಿಸಲಾಗಿದೆ. ಇನ್ನು ನಿಯಮ ಉಲ್ಲಂಘಿಸುವ ಚಾರಣಿಗರು ಹಾಗೂ ಅನಧಿಕೃತ ಗೈಡ್‌ಗಳನ್ನು ಬ್ಲ್ಯಾಕ್‌ಲಿಸ್ಟ್‌ಗೆ ಸೇರಿಸಲಾಗುವುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!