Karnataka Unlock 3.0: ಸೋಮವಾರದಿಂದಲೇ ಮೆಟ್ರೊ, ಬಸ್ಗಳಲ್ಲಿ ಶೇಕಡಾ 100ರಷ್ಟು ಪ್ರಯಾಣಿಕರು ಸಂಚರಿಸಲು ಅನುಮತಿ
ಅನ್ಲಾಕ್ 3.0ದ ಪ್ರಯುಕ್ತ ಈ ವಿನಾಯಿತಿ ನೀಡಲಾಗಿದ್ದು, ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಬೆಂಗಳೂರು: ಕೊನೆಗೂ ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆಗಳಾದ ಬಸ್ ಮತ್ತು ಮೆಟ್ರೊ ರೈಲುಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಶೇಕಡಾ 100ರಷ್ಟು ಪ್ರಯಾಣಿಕರು ಪ್ರಯಾಣ ಬೆಳೆಸುವ ಸಮಯ ಬಂದಿದೆ. ಸೋಮವಾರದಿಂದಲೇ (ಜುಲೈ 5) ರಾಜ್ಯಾದ್ಯಂತ ಬಸ್ ಮತ್ತು ಮೆಟ್ರೊಗಳ ಸಂಪೂರ್ಣ ಸೇವೆಯನ್ನು ಸಾರ್ವಜನಿಕರು ಪಡೆಯಬಹುದಾಗಿದ್ದು, ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಅನ್ಲಾಕ್ 3.0ದ ಪ್ರಯುಕ್ತ ಈ ವಿನಾಯಿತಿ ನೀಡಲಾಗಿದೆ.
ರಾಜ್ಯಾದ್ಯಂತ ಪ್ರತಿದಿನ ಸಂಜೆ 9ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಹಾಗೂ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿ ಇರುವುದಿಲ್ಲ. ಧಾರ್ಮಿಕ, ರಾಜಕೀಯ ಇತರ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ. ಪಬ್ಗಳು ಕಾರ್ಯನಿರ್ವಹಿಸಲು ಅವಕಾಶ ಇಲ್ಲ ಹಾಗೂ ಬಾರ್ಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್ಗಳು ತೆರೆಯಲು ಅವಕಾಶ ನೀಡಲಾಗಿಲ್ಲ.
ಕೊರೊನಾ ಎರಡನೇ ಅಲೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಇಳಿಕೆಯಾಗಿದೆ. ಪಾಸಿಟಿವಿಟಿ ದರ ಕೂಡ ಕಡಿಮೆ ಆಗಿದೆ. ಕೊವಿಡ್-19 ಎರಡನೇ ಅಲೆ ಆತಂಕ ಕಡಿಮೆಯಾಗುತ್ತಿರುವಂತೆ ಲಾಕ್ಡೌನ್ ನಿಯಮಾವಳಿಗಳನ್ನು ಹಂತಹಂತವಾಗಿ ಸಡಿಲಿಕೆ ಮಾಡಲಾಗುತ್ತಿದೆ. ಜೂನ್ 14ರಂದು ಮೊದಲ ಅನ್ಲಾಕ್ ಘೋಷಿಸಲಾಗಿತ್ತು. ಆ ಬಳಿಕ, ಜೂನ್ 21ರಂದು ಮತ್ತೊಂದು ಹಂತದ ಲಾಕ್ಡೌನ್ ಸಡಿಲಿಕೆ ಮಾಡಲಾಗಿತ್ತು. ಇಂದು (ಜುಲೈ 3) ಮೂರನೇ ಹಂತದ ಅನ್ಲಾಕ್ ಘೋಷಿಸಲಾಗಿದೆ. ಜುಲೈ 5 ಅಂದರೆ ಸೋಮವಾರದಿಂದ ಈ ನಿಯಮಾವಳಿಗಳು ಜಾರಿಗೆ ಬರಲಿದೆ.
(Karnataka Unlock 100 percent passengers allowed in public transport by July 5th)
Published On - 7:29 pm, Sat, 3 July 21