Karnataka Unlock 3.0 Guidelines: ಮಾಸ್ಕ್ ಧರಿಸದಿದ್ದರೆ ನಗರಗಳಲ್ಲಿ 250 ರೂ, ಗ್ರಾಮೀಣ ಭಾಗಗಳಲ್ಲಿ 100 ರೂ.ದಂಡ
ಕರ್ನಾಟಕ ಅನ್‌ಲಾಕ್: ಜುಲೈ 19ರವರೆಗೆ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ. ಥಿಯೇಟರ್ ಹಾಗೂ ಸಿನಿಮಾ ಹಾಲ್ಗಳನ್ನು ತೆರೆಯುವಂತಿಲ್ಲ ಎಂದು ಸರ್ಕಾರ ತಿಳಿಸಿದೆ.
ಬೆಂಗಳೂರು: ಮೂರನೇ ಹಂತದ ಅನ್‌ಲಾಕ್ ಮಾರ್ಗಸೂಚಿ ಬಿಡುಗಡೆಯಾಗಿದ್ದು, ನಗರಗಳಲ್ಲಿ ಮಾಸ್ಕ್ ಧರಿಸದವರಿಗೆ 250 ರೂಪಾಯಿ ದಂಡ, ಗ್ರಾಮೀಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸದಿರುವವರಿಗೆ 100 ರೂ. ದಂಡ ವಿಧಿಸಲಾಗುವುದು ಎಂದು ರಾಜ್ಯ ಸರ್ಕಾರದ ಅನ್‌ಲಾಕ್ 3.O ಮಾರ್ಗಸೂಚಿ ತಿಳಿಸಿದೆ. ಜುಲೈ 19ರವರೆಗೆ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ. ಥಿಯೇಟರ್ ಹಾಗೂ ಸಿನಿಮಾ ಹಾಲ್ಗಳನ್ನು ತೆರೆಯುವಂತಿಲ್ಲ ಎಂದು ಸರ್ಕಾರ ತಿಳಿಸಿದೆ.
ಕರ್ನಾಟಕದಾದ್ಯಂತ ಸೋಮವಾರದಿಂದ (ಜುಲೈ5) ಪ್ರತಿದಿನ ಸಂಜೆ 9ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಹಾಗೂ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಲಾಕ್ಡೌನ್ ತೆರವು ಪ್ರಕ್ರಿಯೆಯ ಮೂರನೇ ಹಂತದಲ್ಲಿ ಈ ಸಡಿಲಿಕೆಯನ್ನು ಘೋಷಿಸದ ಅವರು, ಧಾರ್ಮಿಕ, ರಾಜಕೀಯ ಇತರ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ. ಪಬ್ಗಳು ಕಾರ್ಯನಿರ್ವಹಿಸಲು ಅವಕಾಶ ಇಲ್ಲ ಹಾಗೂ ಬಾರ್ಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್ಗಳು ತೆರೆಯಲು ಅವಕಾಶ ನೀಡಲಾಗಿಲ್ಲ ಎಂದು ತಿಳಿಸಿದರು.
ಜುಲೈ 5ರ ಬೆಳಗ್ಗೆ 5 ಗಂಟೆಯಿಂದ ಜುಲೈ 19ರ ಬೆಳಗ್ಗೆ 5.00 ಗಂಟೆಯವರೆಗೆ ಜಾರಿಗೆ ಬರುವಂತೆ ಈ ಕೆಳ ಕಾಣಿಸಿದ ಸಡಿಲಿಕೆಗಳು/ನಿರ್ಬಂಧಗಳು ಜಾರಿಯಲ್ಲಿರುತ್ತವೆ.
1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. 2. ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. 3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇಕಡಾ 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ. 4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. 5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. 6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ. 7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ. 8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ. 9. ಕೊವಿಡ್ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. 10. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ. 11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ. 12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು. 13. ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. 14. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.
• ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಲಾಗಿದೆ.
ಇದನ್ನೂ ಓದಿ:
Karnataka Unlock 3.0: ಬಹುತೇಕ ನಿರ್ಬಂಧಗಳ ಸಡಿಲಿಕೆ; ಅನ್‌ಲಾಕ್ ಹೊಸ ಮಾರ್ಗಸೂಚಿ ಘೋಷಿಸಿದ ಬಿ ಎಸ್ ಯಡಿಯೂರಪ್ಪ
ಕರ್ನಾಟಕದಲ್ಲಿ ಜುಲೈ 5 ರಿಂದ ಅನ್‌ಲಾಕ್ 3.0 ಜಾರಿ; ಸೋಮವಾರದಿಂದಲೇ ಪಬ್ ತೆರೆಯಲು ಅವಕಾಶ ಸಾಧ್ಯತೆ
(Karnataka Unlock 3.0 Guidelines not wearing Mask Fine 250 in cities and 100 in rural areas)
Published On - 8:18 pm, Sat, 3 July 21