AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock: 3ನೇ ಹಂತದ ಅನ್​ಲಾಕ್; ಸೋಮವಾರದಿಂದಲೇ ಮಾಲ್ ಓಪನ್ ಸಾಧ್ಯತೆ, ಷರತ್ತುಗಳು ಅನ್ವಯ

ಅನ್​ಲಾಕ್ 3.O ನಲ್ಲಿ ನೈಟ್ ಕರ್ಫ್ಯೂ ಜಾರಿಗೆ ಬಂದಲ್ಲಿ ಮಾಲ್​ಗಳ ತೆರವು ಸಮಯದಲ್ಲಿ ಕೆಲವೊಂದು ಬದಲಾವಣೆಯಾಗಲಿದೆ. ಅದರಂತೆ ಬೆಳಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆವರೆಗೂ ಮಾಲ್​ಗಳು ಓಪನ್ ಮಾಡಲು ಯೋಜನೆ ರೂಪಿಸಲಾಗಿದೆ.

Karnataka Unlock: 3ನೇ ಹಂತದ ಅನ್​ಲಾಕ್; ಸೋಮವಾರದಿಂದಲೇ ಮಾಲ್ ಓಪನ್ ಸಾಧ್ಯತೆ, ಷರತ್ತುಗಳು ಅನ್ವಯ
ಮಾಲ್
TV9 Web
| Updated By: preethi shettigar|

Updated on:Jul 03, 2021 | 11:48 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭಿಸಿದೆ. ತಜ್ಞರ ಸಲಹೆಗೆ ಅನುಸಾರವಾಗಿ ಈಗಾಗಲೇ ಅನ್​ಲಾಕ್​ 2.0 ಆರಂಭವಾಗಿದ್ದು, ಇದೀಗ ಜುಲೈ 5 ರಿಂದ ಅನ್​ಲಾಕ್​ 3.O ಜಾರಿಯಾಗಲಿದೆ. ಇದರಲ್ಲಿ ರಾಜ್ಯ ಸರ್ಕಾರ ಮಾಲ್​ಗೆ ರಿಲೀಫ್​ ನೀಡಲು ನಿರ್ಧರಿಸಿದೆ. ಇನ್ನು ಥಿಯೇಟರ್, ಪಬ್, ಕ್ಲಬ್, ಬಾರ್, ಸ್ವಿಮ್ಮಿಂಗ್ ಪೂಲ್​ಗಳಿಗೂ ರಿಲೀಫ್ ನೀಡುವ ಸಾಧ್ಯತೆ ಇದೆ.

ಅನ್​ಲಾಕ್ 3.O ನಲ್ಲಿ ನೈಟ್ ಕರ್ಫ್ಯೂ ಜಾರಿಗೆ ಬಂದಲ್ಲಿ ಮಾಲ್​ಗಳ ತೆರವು ಸಮಯದಲ್ಲಿ ಕೆಲವೊಂದು ಬದಲಾವಣೆಯಾಗಲಿದೆ. ಅದರಂತೆ ಬೆಳಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆವರೆಗೂ ಮಾಲ್​ಗಳು ಓಪನ್ ಮಾಡಲು ಯೋಜನೆ ರೂಪಿಸಲಾಗಿದೆ. ಸಾಮಾನ್ಯವಾಗಿ 10 ಗಂಟೆಗೆ ಓಪನ್ ಆಗುತ್ತಿದ್ದ ಮಾಲ್​ಗಳು. ನೈಟ್ ಕರ್ಫ್ಯೂ ಜಾರಿಗೆ ಬಂದರೆ, ಬೆಳಗ್ಗೆ ಬೇಗನೆ ಓಪನ್ ಮಾಡಲು ಯೋಜನೆ ರೂಪಿಸಲಾಗಿದೆ.

ಕೊರೊನಾ ಪಾಸಿಟಿವ್ ರೇಟ್ ಕಡಿಮೆ ಇದ್ದಲ್ಲಿ ಅನ್​ಲಾಕ್​ 3.O ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ಅದರಂತೆ ರಾಜ್ಯದ ಪಾಸಿಟಿವ್ ರೇಟ್ ಗಮನದಲ್ಲಿರಿಸಿಕೊಂಡು ಮಾಲ್​ ಓಪನ್​ಗೆ ಮುಂದಾಗಿದೆ. ಇನ್ನು ಕಳೆದ ಎರಡೂವರೆ ತಿಂಗಳಿಂದ ಬಂದ್ ಆಗಿದ್ದ ಥಿಯೇಟರ್, ಪಬ್, ಬಾರ್, ಕ್ಲಬ್, ಸ್ವಿಮ್ಮಿಂಗ್ ಪೂಲ್​ಗಳಿಗೆ ಅನುಮತಿ ಕೊಡುವ ಸಾಧ್ಯತೆಯಿದೆ.

ಬಾರ್​ಗಳಿಗೂ ಕೊಂಚ ರಿಲೀಫ್ ಸಿಗುವ ಸಾಧ್ಯತೆ ಹೋಟೆಲ್​ಗಳಿಗೆ ಸಿಕ್ಕ ವಿನಾಯಿತಿಯಂತೆ,ಬಾರ್​ಗೂ ವಿನಾಯಿತಿ ಸಿಗುವ ಸಾಧ್ಯತೆ ಇದೆ. ಶೇ.50% ರಷ್ಟು ಗ್ರಾಹಕರಿಗೆ ಬಾರ್​ನಲ್ಲಿ ಕೂತು ಕುಡಿಯಲು ಅವಕಾಶ ನೀಡುವ ಸಾಧ್ಯತೆ ಇದ್ದು, ಸಾಮಾಜಿಕ ಅಂತರ ಕಾಪಾಡಿಕೊಂಡು ಬಾರ್​ನಲ್ಲಿ ಟೇಬಲ್ ಸರ್ವಿಸ್ ಆರಂಭಿಸಲು ಚಿಂತನೆ ನಡೆಸಲಾಗಿದೆ.

ಕ್ಲಬ್, ಕ್ಲಬ್ ಹೌಸ್​ಗಳಿಗೂ ಅವಕಾಶ ನೀಡುವ ಸಾಧ್ಯತೆ. ಆದರೆ ಪಾರ್ಟಿ, ಹೆಚ್ಚು ಜನ ಸೇರುವ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಅನ್​ಲಾಕ್ 3.O ನಲ್ಲಿ ದೇವಸ್ಥಾನಗಳು ರಿಲೀಫ್ ಸಿಗುವ ಸಾಧ್ಯತೆ ಇದ್ದು, ವಿಶೇಷ ಆಚರಣೆ, ಪ್ರಸಾದ ವಿತರಣೆ, ಗುಂಪು ಸೇರುವುದು ಸೇರಿದಂತೆ ಇನ್ನಿತರ ನಿರ್ಬಂಧ ಹೇರುವ ಮೂಲಕ ದೇವಸ್ಥಾನಗಳನ್ನ ಓಪನ್ ಮಾಡಲು ಅವಕಾಶ ನೀಡುವ ಸಾಧ್ಯತೆ ಇದೆ.

ಆದರೆ ಅನ್​ಲಾಕ್‌ 3.O ನಲ್ಲಿ ಥಿಯೇಟರ್​ಗಳಿಗೆ ರಿಲೀಫ್ ಸಿಗುವುದು ಅನುಮಾನವಾಗಿದೆ. ಸಧ್ಯಕ್ಕೆ ಥಿಯೇಟರ್​ಗಳನ್ನು ಓಪನ್ ಮಾಡದಿರಲು ಕೆಲ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಹೀಗಾಗಿ ಜುಲೈ 15 ವರೆಗೂ ಥಿಯೇಟರ್​ಗಳು ಓಪನ್ ಆಗುವುದು ಬಹುತೇಕ ಅನುಮಾನವಾಗಿದೆ.

ಜುಲೈ 5ರ ನಂತರ ನೈಟ್ ಕರ್ಫ್ಯೂ ಮುಂದುವರಿಯಬಹುದು. ಸದ್ಯ ನೈಟ್ ಕರ್ಫ್ಯೂ ಸಂಜೆ 6 ಗಂಟೆಯಿಂದ ಜಾರಿಯಲ್ಲಿದೆ. ಆದರೆ ಜುಲೈ 5ರಿಂದ ಸಂಜೆ 7 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಾಗುವ ಸಾಧ್ಯತೆಯಿದೆ. ವಿಕೇಂಡ್ ಕರ್ಫ್ಯೂ ಯಥಾಸ್ಥಿತಿ ಮುಂದುವರಿಯುತ್ತದೆ.

ಇದನ್ನೂ ಓದಿ:

ಅನ್‌ಲಾಕ್ 2.Oನಲ್ಲಿ ಕೊರೊನಾ ರೂಲ್ಸ್ ಕಂಪ್ಲೀಟ್‌ ಬ್ರೇಕ್‌.. ಕೊರೊನಾ ಮರೆತು ನಿರ್ಲಕ್ಷ್ಯದಲ್ಲಿರುವ ಜನ

ಕೇರಳದಿಂದ ಕರ್ನಾಟಕ ಪ್ರವೇಶಿಸುವವರಿಗೆ 72 ಗಂಟೆಗಳ ಒಳಗಿನ ನೆಗೆಟಿವ್ ರಿಪೋರ್ಟ್ ಕಡ್ಡಾಯ; ದಕ್ಷಿಣ ಕನ್ನಡ ಅನ್​ಲಾಕ್ ಕೆಟಗೆರಿ 1ರ ಪಟ್ಟಿಗೆ ಸೇರ್ಪಡೆ

Published On - 9:31 am, Fri, 2 July 21

‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ