AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock 4.0: ಕರ್ನಾಟಕದಲ್ಲಿ ಮತ್ತೆ ಸಡಿಲಗೊಳ್ಳುತ್ತಾ ಲಾಕ್​ಡೌನ್?; ಮುಂದಿನ ವಾರದಿಂದ ನೈಟ್​ ಕರ್ಫ್ಯೂ ತೆರವು ಸಾಧ್ಯತೆ

Karnataka Lockdown: ಜುಲೈ 19ರಿಂದ ಕರ್ನಾಟಕದಲ್ಲಿ ನೈಟ್​ ಕರ್ಫ್ಯೂ ತೆರವುಗೊಳಿಸಿ, ಪಬ್​ಗಳನ್ನು ತೆರೆಯಲು ಅವಕಾಶ ನೀಡುವ ಸಾಧ್ಯತೆ ಹೆಚ್ಚಾಗಿದೆ.

Karnataka Unlock 4.0: ಕರ್ನಾಟಕದಲ್ಲಿ ಮತ್ತೆ ಸಡಿಲಗೊಳ್ಳುತ್ತಾ ಲಾಕ್​ಡೌನ್?; ಮುಂದಿನ ವಾರದಿಂದ ನೈಟ್​ ಕರ್ಫ್ಯೂ ತೆರವು ಸಾಧ್ಯತೆ
ಬಿ.ಎಸ್.ಯಡಿಯೂರಪ್ಪ
TV9 Web
| Edited By: |

Updated on: Jul 13, 2021 | 4:43 PM

Share

ಬೆಂಗಳೂರು: ಕರ್ನಾಟಕದಲ್ಲಿ ಎರಡೇ ಎರಡು ತಿಂಗಳ ಹಿಂದೆ ಒಂದು ದಿನಕ್ಕೆ 50 ಸಾವಿರಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು (Covid-19 Cases) ದಾಖಲಾಗುತ್ತಿದ್ದವು. ಇದರಿಂದ ಕಂಗಾಲಾದ ರಾಜ್ಯ ಸರ್ಕಾರ 1 ತಿಂಗಳ ಕಾಲ ಕಟ್ಟುನಿಟ್ಟಿನ ಲಾಕ್​ಡೌನ್ (Lockdown) ಘೋಷಿಸಿತ್ತು. ರಾಜ್ಯಾದ್ಯಂತ ಕೊರೋನಾ ಕೇಸುಗಳು ಕಡಿಮೆಯಾಗುತ್ತಿದ್ದಂತೆ ಹಂತಹಂತವಾಗಿ ಅನ್​ಲಾಕ್ ​ ಜಾರಿಗೊಳಿಸಲಾಗುತ್ತಿದೆ. ಈಗಾಗಲೇ ಅಂಗಡಿ, ಮಾಲ್, ದೇವಸ್ಥಾನ, ರೆಸ್ಟೋರೆಂಟ್, ಕಂಪನಿ, ಹೋಟೆಲ್​ಗಳೆಲ್ಲವೂ ಓಪನ್ ಆಗಿದ್ದು, ವೀಕೆಂಡ್ ಕರ್ಫ್ಯೂ (Weekend Curfew) ಕೂಡ ತೆರವಾಗಿದೆ. ಸದ್ಯಕ್ಕೆ ಜಾರಿಯಲ್ಲಿರುವ ನೈಟ್ ಕರ್ಫ್ಯೂ (Night Curfew) ಕೂಡ ಮುಂದಿನ ವಾರದಿಂದ ತೆರವಾಗುವ ಸಾಧ್ಯತೆಯಿದೆ. ಈ ಮೂಲಕ ಕರ್ನಾಟಕದಲ್ಲಿ ಸಂಪೂರ್ಣವಾಗಿ ಅನ್​ಲಾಕ್ (Karnataka Unlock) ಜಾರಿಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಕರ್ನಾಟಕದಲ್ಲಿ ಕೋವಿಡ್ ಕೇಸುಗಳ ಸಂಖ್ಯೆ ಭಾರೀ ಇಳಿಮುಖವಾಗಿದೆ. ರಾಜ್ಯದಲ್ಲಿ ಸದ್ಯಕ್ಕೆ ದಿನವೊಂದಕ್ಕೆ 1,500ಕ್ಕಿಂತ ಕಡಿಮೆ ಕೊರೋನಾ ಕೇಸುಗಳು ಪತ್ತೆಯಾಗುತ್ತಿವೆ. ಕರ್ನಾಟಕದಲ್ಲಿ ಇಂದು 1,386 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 3,204 ಜನರು ಕೊರೋನಾದಿಂದ ಗುಣಮುಖರಾಗಿದ್ದಾರೆ. ಸಾವಿನ ಸಂಖ್ಯೆಯೂ 61ಕ್ಕೆ ಇಳಿದಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಪೂರ್ಣವಾಗಿ ಅನ್​ಲಾಕ್​ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಜುಲೈ 19ರಿಂದ ಅಂದರೆ ಮುಂದಿನ ವಾರದಿಂದ ನೈಟ್​ ಕರ್ಫ್ಯೂ ತೆರವುಗೊಳಿಸಿ, ಪಬ್​ಗಳನ್ನು ತೆರೆಯಲು ಅವಕಾಶ ನೀಡುವ ಸಾಧ್ಯತೆ ಹೆಚ್ಚಾಗಿದೆ. ಈ ಮೂಲಕ ಕರ್ನಾಟಕದಲ್ಲಿ 4ನೇ ಹಂತದ ಅನ್​ಲಾಕ್​ ಜಾರಿಯಾಗಲಿದೆ ಎನ್ನಲಾಗುತ್ತಿದೆ. 3ನೇ ಹಂತದ ಅನ್​ಲಾಕ್​ನಲ್ಲಿ ದೇವಸ್ಥಾನ, ಬಾರ್, ಮಾಲ್​ಗಳನ್ನು ತೆರೆಯಲು ಅನುಮತಿ ನೀಡಲಾಗಿತ್ತು. ಈಜುಕೊಳ, ಕ್ರೀಡಾ ಸಂಕೀರ್ಣಗಳನ್ನು ಕ್ರೀಡಾಪಟುಗಳ ತರಬೇತಿಗಾಗಿ ಮಾತ್ರ ಬಳಸಿಕೊಳ್ಳಬಹುದು. ರಾಜಕೀಯ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಟನೆಗಳಿಗೆ ಅವಕಾಶವಿರುವುದಿಲ್ಲ. ಅಂತ್ಯ ಸಂಸ್ಕಾರಕ್ಕೆ 20 ಮಂದಿಗೆ ಅವಕಾಶ, ಮದುವೆಗಳಲ್ಲಿ 100 ಜನ ಭಾಗವಹಿಸಬಹುದು. ಶಾಲೆ ತೆರೆಯುವ ಬಗ್ಗೆ ಪ್ರತ್ಯೇಕ ಸಭೆ ನಡೆಸಿ ತೀರ್ಮಾನ, ಆನ್ ಲೈನ್ ತರಗತಿಗಳಿಗೆ ಅವಕಾಶ. ಮಾಲ್ ತೆರೆಯಲು ಅವಕಾಶವಿದ್ದರೂ ಚಿತ್ರಮಂದಿರಗಳು ತೆರೆಯಲು ಅವಕಾಶವಿಲ್ಲ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದರು. ಮುಂದಿನ ವಾರದಿಂದ ಮತ್ತೊಂದು ಹಂತದ ಅನ್​ಲಾಕ್​ ಜಾರಿಯಾಗುವ ಬಗ್ಗೆ ಸಚಿವರು ಮುನ್ಸೂಚನೆ ನೀಡಿದ್ದಾರೆ.

ಬೆಂಗಳೂರಿಗೆ ಸಮೀಪದಲ್ಲಿರುವ ಪ್ರಮುಖ ಪ್ರವಾಸಿ ತಾಣವಾದ ನಂದಿ ಬೆಟ್ಟದಲ್ಲಿ ವೀಕೆಂಡ್​ನಲ್ಲಿ ಭಾರೀ ಜನದಟ್ಟಣೆ ಉಂಟಾಗುತ್ತಿರುವುದರಿಂದ ವಾರಾಂತ್ಯದಲ್ಲಿ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ಅವಕಾಶ ನೀಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಅಧಿಕೃತ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: Karnataka Unlock 3.0: ಇನ್ಮುಂದೆ ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಇಲ್ಲ, ರಾತ್ರಿ ಕರ್ಫ್ಯೂ ಮಾತ್ರ ಮುಂದುವರಿಕೆ: ಇಲ್ಲಿದೆ ವಿವರ

ಇದನ್ನೂ ಓದಿ: Bengaluru News: ಬೆಂಗಳೂರಿಗರೇ ಗಮನಿಸಿ; ಈ ಏರಿಯಾಗಳಲ್ಲಿ ಜುಲೈ 17ರವರೆಗೆ ಕರೆಂಟ್ ಇರೋದಿಲ್ಲ

(Karnataka Government Likely to Ease Night Curfew, Reopen Pubs From July 19 as Covid-19 Cases Decline)

Follow Us
TV9 Web
TV9 Web

TV9 Kannada

Read More
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ