Karnataka Unlock: ರಾಜ್ಯದ ಇನ್ನೂ 6 ಜಿಲ್ಲೆಗಳು ಅನ್​ಲಾಕ್; ಯಾವ ಜಿಲ್ಲೆಗಳು ಎಂಬ ಮಾಹಿತಿ ಇಲ್ಲಿದೆ

ಇತ್ತೀಚಿಗೆ 16 ಜಿಲ್ಲೆಗಳಲ್ಲಿ ಘೋಷಣೆಯಾಗಿದ್ದ ಅನ್​ಲಾಕ್ ಪ್ರಕ್ರಿಯೆಗೆ ಇನ್ನೂ 6 ಜಿಲ್ಲೆಗಳನ್ನು ಸೇರಿಸಲಾಗಿದೆ. ಅವು ಯಾವ ಜಿಲ್ಲೆಗಳು ಎಂಬ ಮಾಹಿತಿ ಇಲ್ಲಿದೆ.

Karnataka Unlock: ರಾಜ್ಯದ ಇನ್ನೂ 6 ಜಿಲ್ಲೆಗಳು ಅನ್​ಲಾಕ್; ಯಾವ ಜಿಲ್ಲೆಗಳು ಎಂಬ ಮಾಹಿತಿ ಇಲ್ಲಿದೆ
ಲಾಕ್​ಡೌನ್ (ಸಂಗ್ರಹ ಚಿತ್ರ)
Follow us
TV9 Web
| Updated By: guruganesh bhat

Updated on: Jun 21, 2021 | 4:01 PM

ಬೆಂಗಳೂರು: ಅನ್‌ಲಾಕ್ 2.0 ಜಿಲ್ಲೆಗಳ ಪಟ್ಟಿಗೆ ಮತ್ತೆ 6 ಜಿಲ್ಲೆಗಳನ್ನು ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲೂ ಲಾಕ್​ಡೌನ್ ವಿನಾಯಿತಿ ನೀಡಲಾಗಿದೆ. 2ನೇ ಹಂತದ ಕರ್ನಾಟಕ ಅನ್​ಲಾಕ್ ಭಾಗವಾಗಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ನಿರ್ಬಂಧ ಸಡಿಲಿಸಿ ಬೆಳಗ್ಗೆಯಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೂನ್ 19ರಂದು ಘೋಷಿಸಿದ್ದರು.

ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಮಾತ್ರ ಈ ಸಡಿಲಿಕೆ ಅನ್ವಯವಾಗಲಿದೆ ಎಂದು ತಿಳಿಸಲಾಗಿತ್ತು. ಇದೀಗ ಈ ಜಿಲ್ಲೆಗಳ ಸಾಲಿಗೆ ಹೊಸದಾಗಿ ಇನ್ನೂ 6 ಜಿಲ್ಲೆಗಳನ್ನು ಸೇರಿಸಲಾಗಿದೆ.

ಎಸಿ ಬಳಸದೇ ಹೋಟೆಲ್‌ಗಳನ್ನೂ ತೆರೆಯಲು ಅವಕಾಶವಿದೆ. ಬಸ್, ಮೆಟ್ರೋಗಳಲ್ಲಿ ಶೇ.50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗುತ್ತದೆ. ಜಿಮ್‌ಗಳಲ್ಲಿ ಶೇ.50ರಷ್ಟು ಜನರಿಗೆ ಅವಕಾಶವಿದೆ. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗೆ ಅನುಮತಿ ನೀಡಲಾಗಿದೆ.

ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಶುಭ ಸುದ್ದಿ: ಏಪ್ರಿಲ್ ತಿಂಗಳ ಬಸ್ ಪಾಸ್ ಅವಧಿ ವಿಸ್ತರಣೆ ಸುಮಾರು 2 ತಿಂಗಳ ನಂತರ ಇಂದಿನಿಂದ ಬಸ್ ಸಂಚಾರ ಆರಂಭವಾಗಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಏಪ್ರಿಲ್‌ ತಿಂಗಳ ಪಾಸ್ ಅವಧಿಯನ್ನು ವಿಸ್ತರಿಸಿದೆ. ಇಷ್ಟು ದಿನಗಳ ಕಾಲ ಲಾಕ್‌ಡೌನ್‌ ಇದ್ದ ಕಾರಣ ಬಸ್​ಗಳು ಸಂಚರಿಸಲಿರಲಿಲ್ಲ. ಏಪ್ರಿಲ್ 8ರಿಂದ ಏಪ್ರಿಲ್27ರವರೆಗಿನ ಪಾಸ್‌ಗಳಿಗೆ ಮಾತ್ರ ಈ ವಿಸ್ತರಣೆ ಅನ್ವಯವಾಗಲಿದ್ದು, ಈ ಅವಧಿಯ ಹಳೆ ಪಾಸ್‌ ತೋರಿಸಿ 18 ದಿನಗಳ ಸರ್ಕಾರಿ ಬಸ್‌ಗಳಲ್ಲಿ ಸಂಚರಿಸಬಹುದಾಗಿದೆ.

ಏಪ್ರಿಲ್ 8ರಿಂದ ಏಪ್ರಿಲ್27ರವರೆಗಿನ ಅವಧಿಯ ಪಾಸ್ ಹೊಂದಿದವರು ಪಾಸ್ ಕೌಂಟರ್​ಗಳಿಗೆ ಭೇಟಿ ನೀಡಿ ಸೀಲ್ ಮತ್ತು ಮೊಹರು ಹಾಕಿಸಿಕೊಳ್ಳಬೇಕು. ಆನಂತರ ಹಳೆಯ ಪಾಸ್ ಬಳಸಿಯೇ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಇದನ್ನೂ ಓದಿ:  ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಶುಭ ಸುದ್ದಿ: ಏಪ್ರಿಲ್ ತಿಂಗಳ ಬಸ್ ಪಾಸ್ ಅವಧಿ ವಿಸ್ತರಣೆ

ಸಿಬಿಎಸ್​ಇ, ಐಸಿಎಸ್​ಇ ಆಡಳಿತ ಮಂಡಳಿಗಳಿಗೆ ಮೌಲ್ಯಮಾಪನ ಸೂತ್ರ ಅಂತಿಮಗೊಳಿಸಲು ಸುಪ್ರೀಂಕೋರ್ಟ್ ಸೂಚನೆ

(Karnataka Unlock 6 more districts of the state unlocked Here is information on which districts)

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ