Karnataka Unlock Revised Guidelines: ಲಾಕ್​ಡೌನ್ ತೆರವುಗೊಂಡ ಜಿಲ್ಲೆಗಳಲ್ಲಿ ಯಾವ ಅಂಗಡಿ ತೆರೆಯಬಹುದು? ಸ್ಪಷ್ಟಪಡಿಸಿದ ಸರ್ಕಾರ

| Updated By: guruganesh bhat

Updated on: Jun 12, 2021 | 9:28 AM

ಅಂಗಡಿಗಳ ಪೈಕಿ ಸಿಮೆಂಟ್ ಮತ್ತು ಸ್ಟೀಲ್ ಅಂಗಡಿಗಳು ಮಾತ್ರ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ತೆರೆಯಬಹುದು ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ಈ ಮೂಲಕ ಜೂನ್10ರಂದು ಘೋಷಿಸಿದ್ದ ಮೊದಲ ಹಂತದ ಅನ್​ಲಾಕ್ ನಿಯಮಗಳಲ್ಲಿ ಗೊಂದಲಕ್ಕೆ ಸರ್ಕಾರ ತೆರೆ ಎಳೆದಿದೆ.

Karnataka Unlock Revised Guidelines: ಲಾಕ್​ಡೌನ್ ತೆರವುಗೊಂಡ ಜಿಲ್ಲೆಗಳಲ್ಲಿ ಯಾವ ಅಂಗಡಿ ತೆರೆಯಬಹುದು? ಸ್ಪಷ್ಟಪಡಿಸಿದ ಸರ್ಕಾರ
ಲಾಕ್​ಡೌನ್ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಅನ್‌ಲಾಕ್‌ ಗೈಡ್‌ಲೈನ್ಸ್‌ನಲ್ಲಿ ಸಿವಿಲ್ ಕೆಲಸಗಳಿಗೆ ಮಾತ್ರ ದುರಸ್ತಿಗೆ ಅನುಮತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಉಳಿದ ಯಾವುದೇ ದುರಸ್ತಿ ಕೆಲಸಗಳಿಗೆ ಅವಕಾಶ ಇಲ್ಲ. ಅಂಗಡಿಗಳ ಪೈಕಿ ಸಿಮೆಂಟ್ ಮತ್ತು ಸ್ಟೀಲ್ ಅಂಗಡಿಗಳು ಮಾತ್ರ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ತೆರೆಯಬಹುದು ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ಈ ಮೂಲಕ ಮೊನ್ನೆ ( ಜೂನ್ 10) ಘೋಷಿಸಿದ್ದ ಮೊದಲ ಹಂತದ ಅನ್​ಲಾಕ್ ನಿಯಮಗಳಲ್ಲಿ ಗೊಂದಲಕ್ಕೆ ಸರ್ಕಾರ ತೆರೆ ಎಳೆದಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್​ಡೌನ್ ಮುಂದುವರೆಯಲಿದೆ. ಈ ಜಿಲ್ಲೆಗಳಲ್ಲಿ ಈಗ ಅನುಷ್ಠಾನದಲ್ಲಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರತಿದಿನ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ಕೊವಿಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ಮೊನ್ನೆ (ಜೂನ್ 10)   ತಿಳಿಸಿದ್ದಾರೆ.

ಎಲ್ಲ ಕಾರ್ಖಾನೆ ಶೇ 50 ಸಿಬ್ಬಂದಿ ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶವಿದೆ. ಗಾರ್ಮೆಂಟ್ಸ್​ ಶೇ 30 ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಮದ್ಯ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗುವುದು. ಬಾರ್  ಮತ್ತು  ರೆಸ್ಟೋರೆಂಟ್​, ವೈನ್​ ಸ್ಟೋರ್, ಎಂಎಸ್​ಐಎಲ್​ಗಳಲ್ಲಿ ಮಧ್ಯಾಹ್ನ 2ರವರೆಗೆ ಪಾರ್ಸೆಲ್​ ಅವಕಾಶವಿದೆ ಎಂದು ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಏಳರಿಂದ ಸೋಮವಾರ ಬೆಳಗ್ಗೆ ಆರರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಅಲ್ಲದೇ ನೈಟ್​ ಕರ್ಫ್ಯೂ ಸಹ ಜಾರಿಯಲ್ಲಿರಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊವಿಡ್​ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ ನಟಿ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಬಿಜೆಪಿ

ಸರ್ಕಾರಿ ಗೌರವಗಳೊಂದಿಗೆ ಬೌದ್ದ ಧರ್ಮದ ವಿಧಿ ವಿಧಾನಗಳ ಪ್ರಕಾರ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ

(Karnataka Unlock revised Guidelines Rules released by state govt)

Published On - 7:31 am, Sat, 12 June 21