Karnataka Unlock: 6 ರಿಂದ 1 ಗಂಟೆಯವರೆಗೆ ಅಂಗಡಿ ತೆರೆಯಲು ಇನ್ನೂ 4 ಜಿಲ್ಲೆಗಳಲ್ಲಿ ಅನುಮತಿ ನೀಡಿದ ಸರ್ಕಾರ

| Updated By: guruganesh bhat

Updated on: Jun 24, 2021 | 8:37 PM

ಈ ಜಿಲ್ಲೆಗಳಲ್ಲಿ ಎಸಿ ಶಾಪ್, ಎಸಿ ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ಎಸಿ ಮಾಲ್‌ಗಳನ್ನು ಹೊರತುಪಡಿಸಿ ಸಂಜೆ 5 ಗಂಟೆಯವರೆಗೆ ಎಲ್ಲಾ‌ ಅಂಗಡಿ ತೆರೆಯಲು ಸರ್ಕಾರ ಅನುಮತಿ ನೀಡಿದೆ.

Karnataka Unlock: 6 ರಿಂದ 1 ಗಂಟೆಯವರೆಗೆ ಅಂಗಡಿ ತೆರೆಯಲು ಇನ್ನೂ 4 ಜಿಲ್ಲೆಗಳಲ್ಲಿ ಅನುಮತಿ ನೀಡಿದ ಸರ್ಕಾರ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ರಾಜ್ಯದ ಇನ್ನೂ ನಾಲ್ಕು ಜಿಲ್ಲೆಗಳಲ್ಲಿ ಎಲ್ಲಾ‌ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ದಕ್ಷಿಣ ಕನ್ನಡ, ಚಾಮರಾಜನಗರ, ಹಾಸನ,‌ ದಾವಣಗೆರೆ ಜಿಲ್ಲೆಗಳಲ್ಲಿ ಎಸಿ ಶಾಪ್, ಎಸಿ ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ಎಸಿ ಮಾಲ್‌ಗಳನ್ನು ಹೊರತುಪಡಿಸಿ 6 ರಿಂದ 1 ಗಂಟೆಯವರೆಗೆ ಎಲ್ಲಾ ಅಂಗಡಿ ತೆರೆಯಲು ಎಲ್ಲಾ‌ ಅಂಗಡಿ ತೆರೆಯಲು ಸರ್ಕಾರ ಅನುಮತಿ ನೀಡಿದೆ.

ನಿನ್ನೆಯಷ್ಟೇ ( ಜೂನ್ 21)  ಅನ್‌ಲಾಕ್ 2.0 ಜಿಲ್ಲೆಗಳ ಪಟ್ಟಿಗೆ ಮತ್ತೆ 6 ಜಿಲ್ಲೆಗಳನ್ನು ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿತ್ತು. ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲೂ ಲಾಕ್​ಡೌನ್ ವಿನಾಯಿತಿ ನೀಡಲಾಗಿತ್ತು. 2ನೇ ಹಂತದ ಕರ್ನಾಟಕ ಅನ್​ಲಾಕ್ ಭಾಗವಾಗಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ನಿರ್ಬಂಧ ಸಡಿಲಿಸಿ ಬೆಳಗ್ಗೆಯಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೂನ್ 19ರಂದು ಘೋಷಿಸಿದ್ದರು. ಇಂದು  ಈ ಪಟ್ಟಿಗೆ ಇನ್ನೂ 4 ಜಿಲ್ಲೆಗಳನ್ನು ಸೇರಿಸಲಾಗಿದೆ.

ಈ ಮೊದಲು ಅನ್​ಲಾಕ್ ಪ್ರಕಿಯೆಗೆ ಚಾಲನೆ ನೀಡಿದ್ದ ಸಿಎಂ ಯಡಿಯೂರಪ್ಪ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಮಾತ್ರ ಈ ಸಡಿಲಿಕೆ ಅನ್ವಯವಾಗಲಿದೆ ಎಂದು ತಿಳಿಸಿದ್ದರು.

ಎಸಿ ಬಳಸದೇ ಹೋಟೆಲ್‌ಗಳನ್ನೂ ತೆರೆಯಲು ಅವಕಾಶವಿದೆ. ಬಸ್, ಮೆಟ್ರೋಗಳಲ್ಲಿ ಶೇ.50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗುತ್ತದೆ. ಜಿಮ್‌ಗಳಲ್ಲಿ ಶೇ.50ರಷ್ಟು ಜನರಿಗೆ ಅವಕಾಶವಿದೆ. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗೆ ಅನುಮತಿ ನೀಡಲಾಗಿದೆ.

ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಶುಭ ಸುದ್ದಿ: ಏಪ್ರಿಲ್ ತಿಂಗಳ ಬಸ್ ಪಾಸ್ ಅವಧಿ ವಿಸ್ತರಣೆ
ಸುಮಾರು 2 ತಿಂಗಳ ನಂತರ ಇಂದಿನಿಂದ ಬಸ್ ಸಂಚಾರ ಆರಂಭವಾಗಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಏಪ್ರಿಲ್‌ ತಿಂಗಳ ಪಾಸ್ ಅವಧಿಯನ್ನು ವಿಸ್ತರಿಸಿದೆ. ಇಷ್ಟು ದಿನಗಳ ಕಾಲ ಲಾಕ್‌ಡೌನ್‌ ಇದ್ದ ಕಾರಣ ಬಸ್​ಗಳು ಸಂಚರಿಸಲಿರಲಿಲ್ಲ. ಏಪ್ರಿಲ್ 8ರಿಂದ ಏಪ್ರಿಲ್27ರವರೆಗಿನ ಪಾಸ್‌ಗಳಿಗೆ ಮಾತ್ರ ಈ ವಿಸ್ತರಣೆ ಅನ್ವಯವಾಗಲಿದ್ದು, ಈ ಅವಧಿಯ ಹಳೆ ಪಾಸ್‌ ತೋರಿಸಿ 18 ದಿನಗಳ ಸರ್ಕಾರಿ ಬಸ್‌ಗಳಲ್ಲಿ ಸಂಚರಿಸಬಹುದಾಗಿದೆ.

ಏಪ್ರಿಲ್ 8ರಿಂದ ಏಪ್ರಿಲ್27ರವರೆಗಿನ ಅವಧಿಯ ಪಾಸ್ ಹೊಂದಿದವರು ಪಾಸ್ ಕೌಂಟರ್​ಗಳಿಗೆ ಭೇಟಿ ನೀಡಿ ಸೀಲ್ ಮತ್ತು ಮೊಹರು ಹಾಕಿಸಿಕೊಳ್ಳಬೇಕು. ಆನಂತರ ಹಳೆಯ ಪಾಸ್ ಬಳಸಿಯೇ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಇದನ್ನೂ ಓದಿ: Karnataka Unlock: 2ನೇ ಹಂತದ ಅನ್​ಲಾಕ್: ಸೋಮವಾರದಿಂದಲೇ ಸರ್ಕಾರಿ ಬಸ್ ಓಡಾಟ ಆರಂಭ, ಎಲ್ಲಾ ಅಂಗಡಿ ಓಪನ್, ಶರತ್ತುಗಳು ಅನ್ವಯ

Nikhil Kumarswamy: ಕುಮಾರಸ್ವಾಮಿ ಕುಟುಂಬದಿಂದ ಸಿಹಿ ಸುದ್ದಿ; ಶೀಘ್ರವೇ ತಂದೆ ಆಗಲಿದ್ದಾರೆ ನಿಖಿಲ್​ ​

(Karnataka unlock state government permits 4 more districts to open the shop till 5pm)

Published On - 4:58 pm, Tue, 22 June 21