AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಾದ್ಯಂತ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ಅನುಮತಿ ನೀಡಿದ ಸರ್ಕಾರ

ರಾಜ್ಯಾದ್ಯಂತ ಸಾರ್ವಜನಿಕ ಗ್ರಂಥಾಲಯಗಳನ್ನು ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ತೆರೆಯಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಾದ್ಯಂತ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ಅನುಮತಿ ನೀಡಿದ ಸರ್ಕಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jun 24, 2021 | 7:54 PM

Share

ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಗ್ರಂಥಾಲಯಗಳನ್ನು ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ತೆರೆಯಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 21 ರಿಂದ ಕರ್ನಾಟಕದಲ್ಲಿ ಅನ್​ಲಾಕ್ ಪ್ರಕ್ರಿಯೆಯನ್ನು ಘೋಷಿಸಿದ್ದ ಸರ್ಕಾರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಗ್ರಂಥಾಲಯ ಮತ್ತು ಪುಸ್ತಕದಂಗಡಿಗಳನ್ನು ತೆರೆಯಲು ಆಗ್ರಹ ವ್ಯಕ್ತವಾಗಿತ್ತು. ಕೊನೆಗೂ ಈ ಆಗ್ರಹಕ್ಕೆ ಮಣಿದಿರುವ ಸರ್ಕಾರ ರಾಜ್ಯ ಸರ್ಕಾರ ಕರ್ನಾಟಕದಾದ್ಯಂತ ಗ್ರಂಥಾಲಯಗಳನ್ನು ತೆರೆಯಲು ಅನುಮತಿ ನೀಡಿ ಆದೇಶ ಹೊರಡಿಸಿದೆ.

ಕರ್ನಾಟಕದಲ್ಲಿ ಇಂದು 3,979 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, 138 ಜನರು ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 969 ಜನರಿಗೆ ಸೋಂಕು ಖಚಿತಪಟ್ಟಿದ್ದು, 14 ಜನರು ಮೃತಪಟ್ಟಿದ್ದಾರೆ. ಇಂದಿನ ಕೊವಿಡ್ ಸೋಂಕಿತರ ಸಂಖ್ಯೆಯನ್ನೂ ಸೇರಿಸಿ ರಾಜ್ಯದಲ್ಲಿ ಕೊವಿಡ್ ಸೋಂಕಿತರ ಸಂಖ್ಯೆ 28,23,444ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 34,425 ಜನರು ಮೃತಪಟ್ಟಿದ್ದು, 26,78,473 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇಂದು ಒಂದೇ ದಿನ 9,768 ಜನರು ಕೊವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗೆ ಹಿಂತಿರುಗಿದ್ದಾರೆ.

ಬಾಗಲಕೋಟೆ 7, ಬಳ್ಳಾರಿ 67, ಬೆಳಗಾವಿ 98, ಬೆಂಗಳೂರು ಗ್ರಾಮಾಂತರ 81, ಬೆಂಗಳೂರು ನಗರ 969, ಬೀದರ್ 18, ಚಾಮರಾಜನಗರ 64, ಚಿಕ್ಕಬಳ್ಳಾಪುರ 44, ಚಿಕ್ಕಮಗಳೂರು 110, ಚಿತ್ರದುರ್ಗ 33, ದಕ್ಷಿಣ ಕನ್ನಡ 498, ದಾವಣಗೆರೆ 118, ಧಾರವಾಡ 62, ಗದಗ 18, ಹಾಸನ 336, ಹಾವೇರಿ 28, ಕಲಬುರಗಿ 31, ಕೊಡಗು 115, ಕೊಪ್ಪಳ 18, ಕೋಲಾರ 103, ಮಂಡ್ಯ 137, ಮೈಸೂರು 404 , ಉಡುಪಿ 123, ರಾಯಚೂರು 16, ರಾಮನಗರ 32, ಶಿವಮೊಗ್ಗ 206, ತುಮಕೂರು 128, ಉತ್ತರ ಕನ್ನಡ 104, ವಿಜಯಪುರ 4, ಯಾದಗಿರಿ ಜಿಲ್ಲೆಯಲ್ಲಿ 7 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿಂದು ಕೊರೊನಾ ಸೋಂಕಿನಿಂದ 138 ಜನರ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆ 14, ಮೈಸೂರು ಜಿಲ್ಲೆ 22, ದಕ್ಷಿಣ ಕನ್ನಡ, ಬಳ್ಳಾರಿ, ಧಾರವಾಡ ಜಿಲ್ಲೆ 10, ಹಾಸನ ಜಿಲ್ಲೆ 9, ಕೋಲಾರ, ಉಡುಪಿ ಜಿಲ್ಲೆ 7, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾವೇರಿ ಜಿಲ್ಲೆ 6, ಶಿವಮೊಗ್ಗ ಜಿಲ್ಲೆ 5, ದಾವಣಗೆರೆ ಜಿಲ್ಲೆ 3, ಚಿತ್ರದುರ್ಗ, ಕೊಡಗು, ಕೊಪ್ಪಳ, ತುಮಕೂರು, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ 2, ಬಾಗಲಕೋಟೆ, ಬೆಳಗಾವಿ, ಬೀದರ್, ಮಂಡ್ಯ, ಕಲಬುರಗಿ, ಚಾಮರಾಜನಗರ ಜಿಲ್ಲೆಗಳಲ್ಲಿಂದು ಸೋಂಕಿಗೆ ತಲಾ ಓರ್ವ ನಿಧನರಾಗಿದ್ದಾರೆ.

ಇದನ್ನೂ ಓದಿ: ಕೊವಿಡ್​ನಿಂದ ಮೃತಪಟ್ಟವರ, ನೊಂದವರ ಗಣತಿ ನಡೆಸಲು ಕಾಂಗ್ರೆಸ್​ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ

ಕೊವಿಡ್ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭ; ಡಾ.ಸಿ.ಎನ್.ಅಶ್ವತ್ಥ್ ನಾರಾಯಣ

(Karnataka Unlock state govt orders open library)

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ