Weekend Curfew: ವಾರಾಂತ್ಯದ ಕರ್ಫ್ಯೂವಿನಲ್ಲೂ ಅಗತ್ಯ ವಸ್ತು ಖರೀದಿಗೆ ಇದೆ ಅವಕಾಶ; ಇಲ್ಲಿದೆ ಮಾರ್ಗಸೂಚಿಯ ಸಂಪೂರ್ಣ ವಿವರ

Karnataka Unlock: ವೀಕೆಂಡ್​ ಕರ್ಫ್ಯೂ ವೇಳೆಯೂ ಅಗತ್ಯವಸ್ತು ಖರೀದಿಗೆ ಸಮಯ ನಿಗದಿಪಡಿಸಲಾಗಿದ್ದು, ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಅಗತ್ಯವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಬೀದಿಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದ್ದು, ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಮದ್ಯದಂಗಡಿ ತೆರೆಯಲು ಅವಕಾಶ ಒದಗಿಸಲಾಗಿದೆ.

Weekend Curfew: ವಾರಾಂತ್ಯದ ಕರ್ಫ್ಯೂವಿನಲ್ಲೂ ಅಗತ್ಯ ವಸ್ತು ಖರೀದಿಗೆ ಇದೆ ಅವಕಾಶ; ಇಲ್ಲಿದೆ ಮಾರ್ಗಸೂಚಿಯ ಸಂಪೂರ್ಣ ವಿವರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jun 20, 2021 | 7:40 AM

ಬೆಂಗಳೂರು: ಎರಡನೇ ಹಂತದ ಅನ್​ಲಾಕ್​​ ಮಾರ್ಗಸೂಚಿ ಬಿಡುಗಡೆಯಾಗಿದ್ದು, ರಾಜ್ಯಾದ್ಯಂತ ವೀಕೆಂಡ್‌ ಕರ್ಫ್ಯೂ ಮುಂದುವರಿಸಲು ನಿರ್ಧರಿಸಲಾಗಿದೆ. ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್​ ಕರ್ಫ್ಯೂ ಜಾರಿಯಲ್ಲಿರಲಿದ್ದು, ಈ ವೇಳೆ ಸರ್ಕಾರಿ ಕಚೇರಿಗಳನ್ನು ತೆರೆಯಬಹುದಾಗಿದೆ. ಜತೆಗೆ ಎಲ್ಲಾ ಕೈಗಾರಿಕೆಗಳು ಸಹ ಕಾರ್ಯನಿರ್ವಹಿಸಬಹುದಾಗಿದೆ. ಕೆಲಸಕ್ಕೆ ತೆರಳುವಾಗ ID ಕಾರ್ಡ್​ ತೋರಿಸಿ ತೆರಳಬಹುದು.

ವೀಕೆಂಡ್​ ಕರ್ಫ್ಯೂ ವೇಳೆಯೂ ಅಗತ್ಯವಸ್ತು ಖರೀದಿಗೆ ಸಮಯ ನಿಗದಿಪಡಿಸಲಾಗಿದ್ದು, ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಅಗತ್ಯವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಬೀದಿಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದ್ದು, ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಮದ್ಯದಂಗಡಿ ತೆರೆಯಲು ಅವಕಾಶ ಒದಗಿಸಲಾಗಿದೆ. ಮದ್ಯದಂಗಡಿಗಳಲ್ಲಿ ಕೇವಲ ಪಾರ್ಸಲ್​​ಗಷ್ಟೇ ಅವಕಾಶ ನೀಡಲಾಗಿದ್ದು, ವೀಕೆಂಡ್​ ಕರ್ಫ್ಯೂ ವೇಳೆ ಹೋಂ ಡೆಲಿವರಿ ಸೇವೆಗೆ ನಿರ್ಬಂಧ ಹೇರಿಲ್ಲ. ಹೋಟೆಲ್​, ರೆಸ್ಟೋರೆಂಟ್​​ಗಳಲ್ಲಿಯೂ ಕೇವಲ ಪಾರ್ಸಲ್​ಗೆ ಅವಕಾಶ ನೀಡಲಾಗಿದೆ.

ರಾಜ್ಯಾದ್ಯಂತ ಪ್ರತಿದಿನ ಸಂಜೆ 7ರಿಂದ ಬೆಳಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಇರಲಿದ್ದು, ಈ ವೇಳೆ ಅಗತ್ಯವಸ್ತು ಸರಬರಾಜಿಗೆ ಯಾವುದೇ ಅಡ್ಡಿ ಇಲ್ಲ. ಐಡಿ ಕಾರ್ಡ್​ ತೋರಿಸಿ ರಾತ್ರಿ ಪಾಳಿ ಕೆಲಸಕ್ಕೆ ತೆರಳಬಹುದು. ಟ್ರಕ್ಸ್​​, ಸರಕು ಸಾಗಣೆ ವಾಹನ, ಹೋಂ ಡೆಲಿವರಿಗೆ ಅಡ್ಡಿ ಇಲ್ಲ. ನೈಟ್​ ಕರ್ಫ್ಯೂ ವೇಳೆ ಬಸ್, ಟ್ಯಾಕ್ಸಿಗಳ ಸಂಚಾರಕ್ಕೆ ಅವಕಾಶವಿದೆ. ಬಸ್​ ಟಿಕೆಟ್​​ ತೋರಿಸಿ ಜನರು ಸಂಚರಿಸಬಹುದು.

ಸುದ್ದಿ ವಿಶ್ಲೇಷಣೆ: ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲ, ಕಾಂಗ್ರೆಸ್​ನಲ್ಲಿ ಈಗಲೇ ಹಲವಾರು ಮುಖ್ಯಮಂತ್ರಿಗಳು! ಶೇಕಡಾ 5ಕ್ಕಿಂತ ಹೆಚ್ಚು ಪಾಸಿಟಿವ್‌ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸೋಮವಾರದಿಂದ ಮೊದಲ ಹಂತದ ಅನ್​ಲಾಕ್ ಆರಂಭವಾಗಲಿದೆ. ಈ 13 ಜಿಲ್ಲೆಗಳಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು, ಬೆಳಗ್ಗೆ 5ರಿಂದ 10ವರೆಗೆ ಉದ್ಯಾನವನಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ಆದರೆ ರಾಜ್ಯದ ಇತರ 16 ಜಿಲ್ಲೆಗಳಲ್ಲಿ ಅನ್‌ಲಾಕ್‌ 2.O ಘೋಷಣೆ ಇದೇ ಅವಧಿಯಿಂದ ಆರಂಭವಾಗಲಿದೆ. ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ 16 ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ನಗರ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಮತ್ತು ಬೀದರ್‌ ಜಿಲ್ಲೆಗಳಲ್ಲಿ ಅಂಗಡಿ-ಮುಂಗಟ್ಟು ಬೆಳಗ್ಗೆಯಿಂದ ಸಂಜೆ 5ರವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಎಸಿ ಆನ್‌ ಮಾಡದೇ ಹೋಟೆಲ್‌, ಕ್ಲಬ್‌ಗಳಿಗೆ ಅವಕಾಶವಿದ್ದು, ಹೋಟೆಲ್, ಕ್ಲಬ್‌, ರೆಸ್ಟೋರೆಂಟ್‌ ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಶೇಕಡಾ 50ರಷ್ಟು ಗ್ರಾಹಕರಿಗೆ ಮಿತಿ ಹೇರಲಾಗಿದೆ. ಹೊರಾಂಗಣ ಚಿತ್ರೀಕರಣಕ್ಕೆ ಸರ್ಕಾರದಿಂದ ಅವಕಾಶ ನೀಡಲಾಗಿದ್ದು, ಬಸ್‌ ಹಾಗೂ ಮೆಟ್ರೋ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಹೊರಾಂಗಣ ಕ್ರೀಡೆಗಳಿಗೆ ವೀಕ್ಷಕರಿಗೆ ಅವಕಾಶ ನೀಡಿಲ್ಲ. ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಶೇಕಡ 50ರಷ್ಟು ಸಿಬ್ಬಂದಿಯೊಂದಿಗೆ ಕೆಲಸ ನಿರ್ವಹಿಸಬಹುದು. ಲಾಡ್ಜ್‌, ರೆಸಾರ್ಟ್‌, ಜಿಮ್​ಗಳನ್ನು ಶೇಕಡಾ 50ರಷ್ಟು ಸಾಮರ್ಥ್ಯದೊಂದಿಗೆ ಎಸಿ ಇಲ್ಲದೇ ತೆರೆಯಬಹುದಾಗಿದೆ. ಜುಲೈ 5ರವರೆಗೆ ಈ ನಿಯಮಗಳು ಅನ್ವಯವಾಗಲಿದೆ.

ಮದುವೆಗಳಲ್ಲಿ ಕೇವಲ 40 ಜನರಿಗಷ್ಟೇ ಅವಕಾಶವಿರಲಿದ್ದು, ಈಗಾಗಲೇ ನಿಗದಿಯಾದ ಮದುವೆಗಳನ್ನು ಮಾತ್ರ ಮಾಡಬಹುದಾಗಿದೆ. ಅಂತ್ಯಸಂಸ್ಕಾರ, ಅಂತ್ಯಕ್ರಿಯೆ ವೇಳೆ ಐವರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

ಈಜುಕೊಳ, ಸಭೆ-ಸಮಾರಂಭ, ರಾಜಕೀಯ ಕಾರ್ಯಕ್ರಮಗಳನ್ನು ರಾಜ್ಯದ ಯಾವುದೇ ಭಾಗದಲ್ಲಿ ನೆರವೇರಿಸುವಂತಿಲ್ಲ. ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು, ಸಿನಿಮಾ ಮಂದಿರ ಬಂದ್ ಆಗಿರಲಿವೆ. ಶಾಪಿಂಗ್ ಮಾಲ್‌, ಎಸಿ ಶಾಪಿಂಗ್ ಕಾಂಪ್ಲೆಕ್ಸ್‌ಗಳಿಗೂ ನಿರ್ಬಂಧ ವಿಧಿಸಲಾಗಿದೆ. ಅಮ್ಯೂಸ್‌ಮೆಂಟ್ ಪಾರ್ಕ್, ಪಬ್ಸ್‌ಗಳಿಗೆ ರಾಜ್ಯಾದ್ಯಂತ ನಿರ್ಬಂಧ ವಿಧಿಸಲಾಗಿದೆ.

ಇದನ್ನೂ ಓದಿ: ಕೊವಿಡ್ ನಡುವೆಯೇ ಕರ್ನಾಟಕದಲ್ಲಿ 3,272 ಬಾಲ್ಯವಿವಾಹ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆ: ಸಚಿವೆ ಶಶಿಕಲಾ ಜೊಲ್ಲೆ

ಸುದ್ದಿ ವಿಶ್ಲೇಷಣೆ: ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲ, ಕಾಂಗ್ರೆಸ್​ನಲ್ಲಿ ಈಗಲೇ ಹಲವಾರು ಮುಖ್ಯಮಂತ್ರಿಗಳು! 

(Karnataka Unlock weekend and night curfew continues time given for buy essential items in weekend curfew here is the all details)

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?