AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮ ಹಗರಣ: ಮತ್ತೆ ಬಂಧನದ ಭೀತಿಯಲ್ಲಿದ್ದ ಕಾಂಗ್ರೆಸ್ ಶಾಸಕ ನಾಗೇಂದ್ರಗೆ ಬಿಗ್ ರಿಲೀಫ್

ಕಾಂಗ್ರೆಸ್ ಶಾಸಕ ನಾಗೇಂದ್ರ ವಿರುದ್ಧದ ಮಹರ್ಷಿ ವಾಲ್ಮೀಕಿ ನಿಗಮದ ಕೋಟ್ಯಂತರ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​​ ಮಹತ್ವದ ಆದೇಶ ಹೊರಡಿಸಿದೆ. ಹೀಗಾಗಿ ಬಂಧನದ ಭೀತಿಯಲ್ಲಿದ್ದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರಗೆ ಬಿಗ್ ರಿಲೀಫ್ ಸಿಕ್ಕಿದೆ. ಈಗಾಗಲೇ ಇಡಿಯಿಂದ ಬಂಧನಕ್ಕೊಳಗಾಗಿದ್ದ ನಾಗೇಂದ್ರ ಈಗ ಸಿಬಿಐ ಕುಣಿಕೆಯಿಂದ ಬಚಾವ್ ಆಗಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ಮತ್ತೆ ಬಂಧನದ ಭೀತಿಯಲ್ಲಿದ್ದ ಕಾಂಗ್ರೆಸ್ ಶಾಸಕ ನಾಗೇಂದ್ರಗೆ ಬಿಗ್ ರಿಲೀಫ್
Mla Nagendra
Ramesha M
| Edited By: |

Updated on: Jan 14, 2026 | 7:11 PM

Share

ಬೆಂಗಳೂರು, (ಜನವರಿ 14): ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Karnataka Valmiki Corporation scam) ಮಾಜಿ ಸಚಿವ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ (B Nagendra) ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಸಿಬಿಐ ನೋಟಿಸ್ ಹಿನ್ನೆಲೆಯಲ್ಲಿ ಜಾಮೀನಿಗೆ ಕೋರ್ಟ್​ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜೋರ್ಟ್​, ಕೆಲ ಷರತ್ತುಗಳನ್ನು ವಿಧಿಸಿ ನಿರೀಕ್ಷಣಾ ಜಾಮೀನು ನೀಡಿದೆ. 2 ಲಕ್ಷ ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಸೂಚಿಸಿದೆ. ಅಲ್ಲದೇ ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ನಾಗೇಂದ್ರಗೆ ಕೋರ್ಟ್​ ಷರತ್ತು ಹಾಕಿದೆ.

ಮಹರ್ಷಿ ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಸಿಬಿಐ (CBI) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ ಬಳಿಕ ಬಂಧನ ಭೀತಿಯಲ್ಲಿದ್ದ ನಾಗೇಂದ್ರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮಂಗಳವಾರ (ಜನವರಿ 13) ವಿಚಾರಣೆ ನಡೆಸಿದ್ದ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಬುಧವಾರಕ್ಕೆ (ಜ.14) ಆದೇಶ ಕಾಯ್ದಿರಿಸಿತ್ತು. ಅದರಂತೆ ಇದೀಗ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಸಿಬಿಐ ಕುಣಿಕೆಯಿಂದ ಬಚಾವ್ ಆಗಿದ್ದಾರೆ.

ಇದನ್ನೂ ಓದಿ:  ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ಇಡಿ ಬಿಗ್ ಶಾಕ್

ವಾದ-ಪ್ರತಿವಾದ ಹೇಗಿತ್ತು?

ಮಂಗಳವಾರ(ಜನವರಿ 13) ವಿಚಾರಣೆ ವೇಳೆ ಪ್ರಕರಣದ ತನಿಖಾಧಿಕಾರಿಯೇ ಕೋರ್ಟ್‌ನಲ್ಲಿ ವಾದಮಂಡನೆ ಮಾಡಿದ್ದರು. ವಾಲ್ಮೀಕಿ ಹಗರಣದಲ್ಲಿ ಹಣ ಪಡೆದವರನ್ನು ಸಿಐಡಿ, ಇಡಿ ತನಿಖೆ ಮಾಡಿದೆ. ಅದಕ್ಕಿಂತ ಮುಂದುವರೆದು ಇದರಿಂದ ಫಲಾನುಭವಿಗಳು ಯಾರು ಅನ್ನೋದನ್ನ ಪತ್ತೆ ಹಚ್ಚಬೇಕಿದೆ. ಇಲ್ಲಿಯವರೆಗೂ ನಡೆದ ತನಿಖೆಯ ಕೆಲ ಮಾಹಿತಿಗಳನ್ನ ತೆರೆದ ನ್ಯಾಯಾಲಯದಲ್ಲಿ ಹೇಳಲು ಸಾಧ್ಯವಿಲ್ಲ. ಮುಂಬೈನಲ್ಲಿ ಕೂಡ ದಾಳಿ ಮಾಡಿ ಮಾಹಿತಿ ಕಲೆಹಾಕಲಾಗಿದೆ. ಹಗರಣದ ಹಣ ಚಿನ್ನ, ಬುಲಿಯನ್ ಆಗಿ ಕನ್ವರ್ಟ್ ಆಗಿದೆ. ಇದರ ಹಿಂದೆ ನಾಗೇಂದ್ರ, ಅವರ ಸಹಚರರು ಭಾಗಿಯಾಗಿದ್ದಾರೆ. ಇದರ ಹಿಂದೆ ಕೆಲ ಬೋಗಸ್ ಕಂಪನಿಗಳು ಭಾಗಿಯಾಗಿವೆ. ಈ ಪ್ರಕರಣದ ಬಗ್ಗೆ ಸಾಕಷ್ಟು ಸಾಕ್ಷ್ಯಗಳನ್ನ ಕಲೆ ಹಾಕಲಾಗಿದೆ ಎಂದು ಹೇಳಿ ಕೋರ್ಟ್‌ಗೆ ತಂದಿದ್ದ ಎರಡು ಸೂಟ್‌ಕೇಸ್ ದಾಖಲೆಗಳನ್ನ ತನಿಖಾಧಿಕಾರಿ ತೋರಿಸಿದ್ದರು.

ಇದಕ್ಕೆ ಪ್ರತಿಯಾಗಿ ನಾಗೇಂದ್ರ ಪರ ವಕೀಲರು ಪ್ರತಿವಾದ ಮಂಡಿಸಿದ್ದು, ನಾಗೇಂದ್ರ ಮತ್ತು ನೆಕ್ಕಂಟಿ ನಾಗರಾಜ್ ನಡುವಿನ ವ್ಯವಹಾರ ಅವರ ವೈಯಕ್ತಿಕವಾಗಿದೆ. ಸಿಬಿಐ ಹೇಳುತ್ತಿರುವ ಟೆಂಡರ್‌ಗೂ ಈ ವ್ಯವಹಾರಗಳಿಗೂ ಯಾವುದೇ ಸಂಬಂಧವಿಲ್ಲ ಅಂತಾ ವಾದಿಸಿದ್ದರು. ಈ ವಾದ ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಅಂತಿಮವಾಗಿ ನಾಗೇಂದ್ರಗೆ ಜಮೀನು ಮಂಜೂರು ಮಾಡಿದೆ.

8.07 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಇದೇ ವಾಲ್ಮೀಕಿ ಅಭಿೃದ್ಧಿ ನಿಗಮ ಹಗರಣದಲ್ಲಿ ಈ ಹಿಂದೆ ಜೈಲು ಪಾಲಾಗಿದ್ದ ಬಿ ನಾಗೇಂದ್ರ ನಂತರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದರು. ಇನ್ನು ಈ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಸೇರಿದ 8.07 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಏನಿದು ಪ್ರಕರಣ?

ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಗಳಿಂದ ಕೋಟ್ಯಂತರ ರೂಪಾಯಿಗಳನ್ನು ಅಕ್ರಮವಾಗಿ ನಕಲಿ ಖಾತೆಗಳಿಗೆ ವರ್ಗಾಯಿಸಲಾಗಿತ್ತು. ನಂತರ ಈ ಹಣವನ್ನು ಶೆಲ್ ಕಂಪನಿಗಳ ಮೂಲಕ ಲೂಟಿ ಮಾಡಲಾಗಿತ್ತು ಎಂಬ ಆರೋಪದ ಮೇಲೆ ಕರ್ನಾಟಕ ಪೊಲೀಸರು ಮತ್ತು ಸಿಬಿಐ ಎಫ್‌ಐಆರ್ ದಾಖಲಿಸಿದ್ದವು. ಇದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಈ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬಿ. ನಾಗೇಂದ್ರ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೈ ಮುಖಂಡನಿಗೆ ಶಾಕ್​​ ಕೊಟ್ಟ ಡಿಕೆ ಶಿವಕುಮಾರ್​​​
ಕೈ ಮುಖಂಡನಿಗೆ ಶಾಕ್​​ ಕೊಟ್ಟ ಡಿಕೆ ಶಿವಕುಮಾರ್​​​
ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಇರುಮುಡಿ ಹೊತ್ತು ಸಾಗಿದ ಶಿವಣ್ಣ ದಂಪತಿ
ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಇರುಮುಡಿ ಹೊತ್ತು ಸಾಗಿದ ಶಿವಣ್ಣ ದಂಪತಿ
ಬಿಗ್​​ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್: ಯಾರು ಹೊರಕ್ಕೆ?
ಬಿಗ್​​ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್: ಯಾರು ಹೊರಕ್ಕೆ?
ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ಕೈ ಮುಖಂಡ, ಕಣ್ಣೀರಿಟ್ಟ ಕಮಿಷನರ್
ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ಕೈ ಮುಖಂಡ, ಕಣ್ಣೀರಿಟ್ಟ ಕಮಿಷನರ್
ಸಂಕ್ರಾಂತಿ ಸಂಭ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಸೌಮ್ಯ ರೆಡ್ಡಿ!
ಸಂಕ್ರಾಂತಿ ಸಂಭ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಸೌಮ್ಯ ರೆಡ್ಡಿ!
ರಾಹುಲ್​​ ಜೊತೆ ಪ್ರತ್ಯೇಕವಾಗಿ ಏನೇನು ಚರ್ಚೆ? ಡಿಕೆ ಹೇಳಿದ್ದೇನು ನೋಡಿ
ರಾಹುಲ್​​ ಜೊತೆ ಪ್ರತ್ಯೇಕವಾಗಿ ಏನೇನು ಚರ್ಚೆ? ಡಿಕೆ ಹೇಳಿದ್ದೇನು ನೋಡಿ
ಒಂದೇ ಬಸ್​​ಗೆ 2 ರಾಜ್ಯಗಳ ನಂಬರ್​​ ಪ್ಲೇಟ್​​ ಕಂಡು ಅಧಿಕಾರಿಗಳೇ ದಂಗು
ಒಂದೇ ಬಸ್​​ಗೆ 2 ರಾಜ್ಯಗಳ ನಂಬರ್​​ ಪ್ಲೇಟ್​​ ಕಂಡು ಅಧಿಕಾರಿಗಳೇ ದಂಗು
KSRTC ಬಸ್ಸಿನಡಿ ಸಿಲುಕಿದರೂ ಪ್ರಯಾಣಿಕ ಪವಾಡಸದೃಶ ಪಾರು!
KSRTC ಬಸ್ಸಿನಡಿ ಸಿಲುಕಿದರೂ ಪ್ರಯಾಣಿಕ ಪವಾಡಸದೃಶ ಪಾರು!
ವಿಡಿಯೋ: ಪುಂಡರಂತೆ ಹೊಡೆದಾಡಿಕೊಂಡ ಅತಿಥಿ ಶಿಕ್ಷಕ, ಎಸ್‌ಡಿಎಂಸಿ ಅಧ್ಯಕ್ಷ
ವಿಡಿಯೋ: ಪುಂಡರಂತೆ ಹೊಡೆದಾಡಿಕೊಂಡ ಅತಿಥಿ ಶಿಕ್ಷಕ, ಎಸ್‌ಡಿಎಂಸಿ ಅಧ್ಯಕ್ಷ
ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ ಪೊಂಗಲ್ ಆಚರಿಸಿದ ಪ್ರಧಾನಿ ಮೋದಿ
ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ ಪೊಂಗಲ್ ಆಚರಿಸಿದ ಪ್ರಧಾನಿ ಮೋದಿ