AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Govt Jobs Karnataka: ಕರ್ನಾಟಕ ಕಂದಾಯ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 572 ಹುದ್ದೆಗಳಿಗೆ ನೇರ ನೇಮಕಾತಿ

ಕರ್ನಾಟಕದ ಕಂದಾಯ ಇಲಾಖೆಯು 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದಿದೆ. ಜಿಲ್ಲಾವಾರು ಹುದ್ದೆಗಳ ಹಂಚಿಕೆಯ ಪಟ್ಟಿ ಬಿಡುಗಡೆಯಾಗಿದ್ದು, ತುಮಕೂರು ಮತ್ತು ಮಂಡ್ಯಕ್ಕೆ ತಲಾ 50 ಹುದ್ದೆಗಳಿವೆ. ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆ ಹೊರಬೀಳಲಿದೆ ಎಂದು ವರದಿಯಾಗಿದೆ.

Govt Jobs Karnataka: ಕರ್ನಾಟಕ ಕಂದಾಯ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 572 ಹುದ್ದೆಗಳಿಗೆ ನೇರ ನೇಮಕಾತಿ
ಕರ್ನಾಟಕ ಕಂದಾಯ ಇಲಾಖೆಯಲ್ಲಿ ಉದ್ಯೋಗಾವಕಾಶ Image Credit source: Getty Images
ಅಕ್ಷತಾ ವರ್ಕಾಡಿ
|

Updated on: Jun 22, 2026 | 4:42 PM

Share

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಕರ್ನಾಟಕದ ಯುವಜನತೆಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇಲಾಖೆಯಲ್ಲಿ ಖಾಲಿ ಇರುವ 572 ಗ್ರಾಮ ಆಡಳಿತ ಅಧಿಕಾರಿ (Village Administrative Officer – VAO) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆಯು ಹಸಿರು ನಿಶಾನೆ ತೋರಿದೆ. ಈ ಕುರಿತು ಜಿಲ್ಲಾವಾರು ಭರ್ತಿ ಮಾಡಬೇಕಾದ ಹುದ್ದೆಗಳ ಅಧಿಕೃತ ಪಟ್ಟಿಯನ್ನು ಕಂದಾಯ ಇಲಾಖೆಯು ಈಗಾಗಲೇ ಬಿಡುಗಡೆ ಮಾಡಿದೆ. ವಿವಿಧ ಜಿಲ್ಲೆಗಳಿಗೆ ಮಂಜೂರಾದ ಹುದ್ದೆಗಳು ಹಾಗೂ ಪ್ರಸ್ತುತ ಖಾಲಿ ಇರುವ ಹುದ್ದೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ, ರೋಸ್ಟರ್ ಬಿಂದು ಹಾಗೂ ಮೀಸಲಾತಿ ನಿಯಮಾವಳಿಗಳಿಗೆ ಅನುಗುಣವಾಗಿ ಒಟ್ಟು 572 ಹುದ್ದೆಗಳನ್ನು ಈ ನೇಮಕಾತಿ ಪ್ರಕ್ರಿಯೆಗೆ ಪರಿಗಣಿಸಲಾಗಿದೆ.

ಜಿಲ್ಲಾವಾರು ಹುದ್ದೆಗಳ ಹಂಚಿಕೆ ವಿವರಗಳು:

ಈ ನೇಮಕಾತಿಯಲ್ಲಿ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಿಗೆ ಅತಿ ಹೆಚ್ಚು ಹುದ್ದೆಗಳನ್ನು ನೀಡಲಾಗಿದ್ದರೆ, ರಾಯಚೂರು ಜಿಲ್ಲೆಗೆ ಅತ್ಯಂತ ಕಡಿಮೆ ಹುದ್ದೆಗಳನ್ನು ನಿಗದಿಪಡಿಸಲಾಗಿದೆ. ಪ್ರಕಟಿತ ಪಟ್ಟಿಯ ಪ್ರಕಾರ ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಿಗೆ ತಲಾ 50 ಹುದ್ದೆಗಳನ್ನು ನಿಗದಿಪಡಿಸಲಾಗಿದೆ. ಉಳಿದಂತೆ ಬೆಳಗಾವಿಗೆ 48, ಮೈಸೂರಿಗೆ 45, ದಕ್ಷಿಣ ಕನ್ನಡಕ್ಕೆ 37, ಹಾಸನ ಮತ್ತು ಕಲಬುರಗಿಗೆ ತಲಾ 35, ಚಾಮರಾಜನಗರಕ್ಕೆ 31, ಬೆಂಗಳೂರು ದಕ್ಷಿಣ (ರಾಮನಗರಲ್ಲಿ) 30 ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 29 ಹುದ್ದೆಗಳನ್ನು ನೇಮಕಾತಿಗಾಗಿ ಗುರುತಿಸಲಾಗಿದೆ.

ಇತರ ಜಿಲ್ಲೆಗಳ ಹುದ್ದೆಗಳ ಮಾಹಿತಿ:

ಇನ್ನುಳಿದ ಜಿಲ್ಲೆಗಳ ವಿವರಗಳನ್ನು ನೋಡುವುದಾದರೆ, ಕೋಲಾರಕ್ಕೆ 22, ಚಿಕ್ಕಬಳ್ಳಾಪುರಕ್ಕೆ 21, ಬೆಂಗಳೂರು ನಗರಕ್ಕೆ 20, ಶಿವಮೊಗ್ಗಕ್ಕೆ 18, ಬಾಗಲಕೋಟೆ ಹಾಗೂ ಬೀದರ್ ಜಿಲ್ಲೆಗಳಿಗೆ ತಲಾ 16 ಹುದ್ದೆಗಳನ್ನು ನೀಡಲಾಗಿದೆ. ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳಿಗೆ ತಲಾ 15, ಗದಗಕ್ಕೆ 14 ಹಾಗೂ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ತಲಾ 10 ಹುದ್ದೆಗಳನ್ನು ಪ್ರಸ್ತುತ ನೇಮಕಾತಿ ಪ್ರಕ್ರಿಯೆಗೆ ಪರಿಗಣಿಸಲಾಗುತ್ತಿದೆ. ಈ ಪಟ್ಟಿಯಲ್ಲಿ ಅತಿ ಕಡಿಮೆ ಎಂದರೆ ರಾಯಚೂರು ಜಿಲ್ಲೆಗೆ ಕೇವಲ 5 ಹುದ್ದೆಗಳನ್ನು ಮಾತ್ರ ನೀಡಲಾಗಿದೆ.

ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ?

ನೇಮಕಾತಿ ಪ್ರಕ್ರಿಯೆ ಚುರುಕುಗೊಳಿಸಲು ಸರ್ಕಾರದ ಸೂಚನೆ:

ನೇರ ನೇಮಕಾತಿ ಕೋಟಾದಡಿ ಖಾಲಿ ಇರುವ ಈ ಹುದ್ದೆಗಳನ್ನು ಆದಷ್ಟು ಶೀಘ್ರವಾಗಿ ಭರ್ತಿ ಮಾಡುವ ಸಂಬಂಧ, ನಿಗದಿಪಡಿಸಲಾದ ಪರಿಷ್ಕೃತ ರೋಸ್ಟರ್ ಬಿಂದು ಹಾಗೂ ಮೀಸಲಾತಿ ವಿವರಗಳನ್ನು ಒಳಗೊಂಡ ಪ್ರಸ್ತಾವನೆಯನ್ನು ನಿಗದಿತ ‘ನಮೂನೆ-6’ ರಲ್ಲಿ ಭರ್ತಿ ಮಾಡಿ ತಕ್ಷಣವೇ ಸರ್ಕಾರಕ್ಕೆ ಸಲ್ಲಿಸುವಂತೆ ಕಂದಾಯ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಯವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳಿಂದ ಈ ಮಾಹಿತಿ ಸಲ್ಲಿಕೆಯಾದ ತಕ್ಷಣವೇ, ಮುಂಬರುವ ದಿನಗಳಲ್ಲಿ ಈ 572 ವಿಎಒ (VAO) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಸಂಪೂರ್ಣ ಅಧಿಸೂಚನೆ ಹೊರಬೀಳಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ