ವಿಧಾನ ಪರಿಷತ್​ ಸಭಾಪತಿ ಸ್ಥಾನಕ್ಕೆ ಮಂಗಳವಾರ ಚುನಾವಣೆ

ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯುತ್ತಿದೆ. ಸೋಮವಾರ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. 

ವಿಧಾನ ಪರಿಷತ್​ ಸಭಾಪತಿ ಸ್ಥಾನಕ್ಕೆ ಮಂಗಳವಾರ ಚುನಾವಣೆ
ವಿಧಾನ ಪರಿಷತ್
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 05, 2021 | 8:10 PM

ಬೆಂಗಳೂರು: ವಿಧಾನ ಪರಿಷತ್​ ಸಭಾಪತಿ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ಪ್ರಕಟವಾಗಿದೆ. ಮಂಗಳವಾರ (ಫೆ.9) ಚುನಾವಣೆ ನಡೆಯಲಿದೆ. 2018ರ ಡಿ.12ರಿಂದ ಪ್ರತಾಪಚಂದ್ರ ಶೆಟ್ಟಿ ಸಭಾಪತಿಯಾಗಿದ್ದರು. ಪ್ರತಾಪಚಂದ್ರಶೆಟ್ಟಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಬಿಜೆಪಿಯ ಅವಿಶ್ವಾಸ ನಿರ್ಣಯವನ್ನು ಜೆಡಿಎಸ್ ಬೆಂಬಲಿಸಿತ್ತು. ಹೀಗಾಗಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಗುರುವಾರ ರಾಜೀನಾಮೆ ನೀಡಿದ್ದರು.

ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯುತ್ತಿದೆ. ಸೋಮವಾರ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ.

ರಾಜೀನಾಮೆಗೂ ಮೊದಲು ಮಾತನಾಡಿದ್ದ ಪ್ರತಾಪಚಂದ್ರ ಶೆಟ್ಟಿ, 113 ವರ್ಷಗಳ ರಾಜ್ಯದ ಮೇಲ್ಮನೆಗೆ ಭವ್ಯ ಇತಿಹಾಸವಿದೆ. ಈ ಸದನದ ಘನತೆ ಎತ್ತಿಹಿಡಿಯುವುದು ನಮ್ಮೆಲ್ಲರ ಕರ್ತವ್ಯ. ಕಳೆದ 37 ವರ್ಷಗಳಿಂದ ನಾನು ಸಾರ್ವಜನಿಕ ಬದುಕಿನಲ್ಲಿದ್ದೇನೆ. ಆದರೆ ಈಗ ಮೌಲ್ಯಗಳು ಕಡಿಮೆಯಾಗುತ್ತಿದೆ. ವಿಧಾನಪರಿಷತ್​ ಸಭಾಪತಿ ಪೀಠ ಸಿಕ್ಕಿದ್ದು ನನ್ನ ಸೌಭಾಗ್ಯ. 2 ವರ್ಷಗಳಿಂದ ಸಭಾಪತಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಜವಾಬ್ದಾರಿಯಿಂದ ನಡೆದುಕೊಂಡಿದ್ದೇನೆ ಎಂಬ ತೃಪ್ತಿ ಇದೆ ಎಂದಿದ್ದರು.

ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ ನೀಡಿದ ನಂತರ ವಿಧಾನಸೌಧದ ತಮ್ಮ ಕೊಠಡಿಗೆ ತೆರಳಿದ್ದಾರು. ಸಭಾಪತಿ ಅವರನ್ನುಮೂರೂ ಪಕ್ಷಗಳ ನಾಯಕರು ಭೇಟಿ ಆಗಿದ್ದರು. ಸಚಿವರಾದ ಬಸವರಾಜ ಬೊಮ್ಮಾಯಿ, ಶ್ರೀನಿವಾಸ ಪೂಜಾರಿ, ಲಕ್ಷ್ಮಣ ಸವದಿ, ಎಸ್.ಆರ್.ಪಾಟೀಲ್, ಹೆಚ್.ವಿಶ್ವನಾಥ್​, ಬಸವರಾಜ ಹೊರಟ್ಟಿ ಸೇರಿ ಹಲವು ನಾಯರು ಪ್ರತಾಪಚಂದ್ರ ಶೆಟ್ಟಿ ಭೇಟಿ ಮಾಡಿ ಶುಭಕೋರಿದ್ದರು.

ಪರಿಷತ್​ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ

Published On - 8:09 pm, Fri, 5 February 21