AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಕ್ಕೆ ಸಿದ್ದರಾಮಯ್ಯ ಮಾದರಿಯಾಗಿದ್ದಾರೆ: ಸಭಾಪತಿ ಬಸವರಾಜ್​ ಹೊರಟ್ಟಿ

ಕಳೆದ ತಿಂಗಳು ರಾಜ್ಯ ಸರ್ಕಾರ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಎಂದು ಅಧಿಕೃತವಾಗಿ ಘೋಷಣೆ ಮಾಡಿತ್ತು. ಇದೀಗ ವಿಶ್ವಗುರು ಬಸವಣ್ಣ ಹಾಗೂ ಸಾಂಸ್ಕೃತಿಕ ನಾಯಕ ಎಂದು ನಮೂದಿಸಿರುವ ಬಸವೇಶ್ವರರ ಭಾವಚಿತ್ರವನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ರಾಜ್ಯಕ್ಕೆ ಸಿದ್ದರಾಮಯ್ಯ ಮಾದರಿಯಾಗಿದ್ದಾರೆ: ಸಭಾಪತಿ ಬಸವರಾಜ್​ ಹೊರಟ್ಟಿ
ಸಭಾಪತಿ ಬಸವರಾಜ ಹೊರಟ್ಟಿ
Anil Kalkere
| Updated By: ವಿವೇಕ ಬಿರಾದಾರ|

Updated on:Feb 13, 2024 | 12:30 PM

Share

ಬೆಂಗಳೂರು, ಫೆಬ್ರವರಿ 13: ರಾಜ್ಯದಲ್ಲಿ ಅನೇಕ ಸರ್ಕಾರಗಳು ಬಂದು ಹೋಗಿವೆ. ಮೊಟ್ಟ ಮೊದಲಿಗೆ ಸಿದ್ದರಾಮಯ್ಯ ಅವರು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣವರ (Basavanna) ಫೋಟೋ ಹಾಕುವಂತೆ ಮಾಡಿದ್ದಾರೆ. ಇಡೀ ರಾಜ್ಯಕ್ಕೆ ಸಿದ್ದರಾಮಯ್ಯ ಮಾದರಿಯಾಗಿದ್ದಾರೆ. ಸರ್ಕಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಸಿದ್ದರಾಮಯ್ಯ (Siddaramaiah) ಅವರನ್ನ ಎಷ್ಟು ಹೊಗಳಿದರು ಕಡಿಮೆ ಎಂದು ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ಇಂದು (ಫೆ.13) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಗುರು ಬಸವಣ್ಣ ಅವರ ಪುತ್ಥಳಿಯನ್ನು ಅನಾವರಣಗೊಳಿಸಿದರು.

ಸರ್ಕಾರಿ ಕಚೇರಿಗಳಲ್ಲಿ ವಿಶ್ವಗುರು ಬಸವಣ್ಣರ ಭಾವಚಿತ್ರ ಕಡ್ಡಾಯ

ವಿಶ್ವಗುರು ಬಸವಣ್ಣ ಹಾಗೂ ಸಾಂಸ್ಕೃತಿಕ ನಾಯಕ ಎಂದು ನಮೂದಿಸಿರುವ ಬಸವೇಶ್ವರರ  ಭಾವಚಿತ್ರವನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ (Government Offices) ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಸೂಚನೆ ನೀಡಿದರು. ಬಸವಣ್ಣವರ ಕಾರ್ಯಕ್ರಮಕ್ಕೆ ದುಡ್ಡು ಇಲ್ಲ ಅಂತ ಹೇಳುವುದಿಲ್ಲ. ಬುದ್ಧ, ಬಸವ, ಅಂಬೇಡ್ಕರ್, ಗಾಂಧಿಜಿಯವರನ್ನು ಯಾರು ಮರೆಯಲು ಆಗಲ್ಲ. ಈ ನಾಲ್ಕು ಜನರ ಹೆಸರು ದೇಶ ಮರೆಯುವುದಕ್ಕೆ ಆಗುವುದಿಲ್ಲ.  ಇವರೆಲ್ಲರು ಸಮಾಜದಲ್ಲಿರುವ ಅಂಕ ಡೊಂಕು ತಿದ್ದಿದವರು. ಸಮಾಜದ ಬದಲಾವಣೆಗಾಗಿ ಅಸಮಾನತೆ ಹೋಗಬೇಕು. ಬ್ರಿಟಿಷ್​ನವರು ಹೇಳುತ್ತಾರೆ, ಸಂಸದೀಯ ವ್ಯವಸ್ಥೆ ನಮ್ಮಿಂದ ಬಂತು ಅಂತ, ಆದರೆ ಸಂಸದೀಯ ವ್ಯವಸ್ಥೆ ಬಸವಣ್ಣವರ ಕಾಲದಲ್ಲೆ ಬಂದಿದೆ. ಅನುಭವ ಮಂಟಪದ ಮೂಲಕ ಸಂಸದೀಯ ವ್ಯವಸ್ಥೆ ತಂದಿದ್ದಾರೆ. ಮಹಿಳೆಯರಿಗೆ ಸ್ವಾತಂತ್ರ್ಯ ಇರಲಿಲ್ಲ. ಮನವಾದಿಗಳು ಕೆಲವು ಕೆಟ್ಟ ಸಂಪ್ರದಾಯಗಳನ್ನ ಮಾಡಿಬಿಟ್ಟಿದ್ದರು. ಇದರಿಂದ ಅಸಮಾನತೆ ಹುಟ್ಟು ಹಾಕಿದರು. ಬಸವಣ್ಣನವರು ಈ ಕಂದಚಾರವನ್ನು ಹೊಗಲಾಡಿಸಲು ಶ್ರಮಿಸಿದರು ಎಂದು ತಿಳಿಸಿದರು.

ಇದನ್ನೂ ಓದಿ: ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ: ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಚನಾನಂದ ಸ್ವಾಮೀಜಿ ಮೆಚ್ಚುಗೆ

ಶಾಲೆ-ಕಾಲೇಜುಗಳ ಪಠ್ಯದಲ್ಲಿ ಬಸವಣ್ಣವನವರ ಪಠ್ಯವನ್ನು ಸೇರಿಸಿ: ಗೂ.ರು ಚನ್ನಬಸಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೌಲ್ಯವಿಕ ನಿರ್ಧಾರ ತಗೆದುಕೊಂಡಿದ್ದಾರೆ. ವಿಶ್ವಗುರು ಬಸವಣ್ಣನವರನ್ನು ಸಂಸ್ಕೃತಿಕ ನಾಯಕ ಎಂದು ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಬಸವಣ್ಣನವ ಹೆಸರಲ್ಲಿ ಅಧ್ಯಯನ ಪೀಠ ತಗೆಯಬೇಕು. ಹಾಗೂ ಶಾಲೆ-ಕಾಲೇಜುಗಳ ಪಠ್ಯದಲ್ಲಿ ಬಸವಣ್ಣವನವರ ಪಠ್ಯವನ್ನು ಸೇರಿಸಿ, ಸಮಾಜಕ್ಕೆ ಅವರ ಸಂದೇಶ ತಿಳಿಸಬೇಕು ಎಂದು ಹಿರಿಯ ಸಾಹಿತಿ ಗೂ.ರು ಚನ್ನಬಸಪ್ಪ ಅವರು ಮನವಿ ಸಲ್ಲಿಸಿದರು.

ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ

ಕಳೆದ ತಿಂಗಳು ರಾಜ್ಯ ಸರ್ಕಾರ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಎಂದು ಅಧಿಕೃತವಾಗಿ ಘೋಷಣೆ ಮಾಡಿತ್ತು. ಈ ಬೆನ್ನಲ್ಲೇ ಇದೀಗ ಸರ್ಕಾರ ಕಚೇರಿಗಳಲ್ಲಿ ಬಸವಣ್ಣ ಅವರ ಭಾವಚಿತ್ರ ಹಾಕುವುದು ಕಡ್ಡಾಯಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:12 pm, Tue, 13 February 24

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?