AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಚುನಾವಣಾಧಿಕಾರಿ ಅನ್ಬುಕುಮಾರ್

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಹಿನ್ನೆಲೆ ಬೆಂಗಳೂರಿನಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್​​ ಸುದ್ದಿಗೋಷ್ಠಿ ಮಾಡಿದರು. ಜೂ.30ರಿಂದ ಜು.29ರವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಮಾಡಲಾಗುವುದು. ಅಕ್ಟೋಬರ್ 7ರಂದು ಅಂತಿಮ ಪಟ್ಟಿ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಚುನಾವಣಾಧಿಕಾರಿ ಅನ್ಬುಕುಮಾರ್
ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್Image Credit source: tv9 kannada
ಪ್ರಸನ್ನ ಗಾಂವ್ಕರ್​
| Edited By: |

Updated on: May 15, 2026 | 4:15 PM

Share

ಬೆಂಗಳೂರು, ಮೇ 15: ರಾಜ್ಯದಲ್ಲಿ (Karnataka) ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ (Voter List Revision) ಚುನಾವಣಾ ಆಯೋಗ ಈಗಾಗಲೇ ದಿನಾಂಕ ಘೋಷಿಸಿದೆ. ಜೂನ್​​ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30ರಿಂದ ಜು.29ರವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಮಾಡಲಾಗುವುದು. ಮತದಾರರ ಪಟ್ಟಿಯಲ್ಲಿ ಸೇರಲು 18 ವರ್ಷ ಪೂರ್ಣವಾಗಿರಬೇಕು. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವುದಾಗಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ (anbukumar)​ ಮಾಹಿತಿ ನೀಡಿದರು.

ಮುಖ್ಯಾಂಶಗಳು

  • ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ
  • ಮನೆ ಮನೆಗೆ BLO ಭೇಟಿ: ಗಣತಿ ನಮೂನೆ ಮತ್ತು QR ಕೋಡ್ ವೈಶಿಷ್ಟ್ಯಗಳು
  • ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್​ ಮಾಹಿತಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್, ಕರ್ನಾಟಕದಲ್ಲಿ ಮತದಾರರ ಮ್ಯಾಪಿಂಗ್ ಕೆಲಸವು ವೇಗವಾಗಿ ನಡೆಯುತ್ತಿದ್ದು, ಈಗಾಗಲೇ ಶೇಕಡಾ 86 ರಷ್ಟು ಪ್ರಗತಿ ಸಾಧಿಸಿದೆ ಎಂದರು. ಇನ್ನು ಜಿಲ್ಲಾವಾರು ಮತ್ತು ಕ್ಷೇತ್ರವಾರು ಪ್ರಗತಿಯನ್ನು ಹಂಚಿಕೊಂಡ ಅವರು, ಕೊಡಗು ಜಿಲ್ಲೆಯಲ್ಲಿ ಶೇ. 96 ರಷ್ಟು ಹಾಗೂ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆಯ ಶೇ. 99 ರಷ್ಟು ಮ್ಯಾಪಿಂಗ್ ಕೆಲಸ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ, ಮ್ಯಾಪಿಂಗ್ ಕೆಲಸದ ಪ್ರಗತಿಯನ್ನು ಪರಿಶೀಲಿಸಲು ಮತ್ತು ಮುಂದಿನ ಹಂತದ ಕುರಿತು ಚರ್ಚಿಸಲು ಇಂದು ಸಂಜೆ ಎಲ್ಲಾ ಜಿಲ್ಲಾಧಿಕಾರಿಗಳ (ಡಿಸಿ) ಜೊತೆ ಮಹತ್ವದ ವಿಡಿಯೋ ಕಾನ್ಫರೆನ್ಸ್ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಮತದಾರರ ಗಣತಿ ಪ್ರಕ್ರಿಯೆ ಮತ್ತು ಕ್ಯೂಆರ್ ಕೋಡ್ ವೈಶಿಷ್ಟ್ಯ

ಚುನಾವಣಾ ಪ್ರಕ್ರಿಯೆಯ ಮುಂದಿನ ಹಂತಗಳ ಕುರಿತು ಮಾತನಾಡಿದ ಅನ್ಬುಕುಮಾರ್, ಎಸ್ಐಆರ್ ಫಾರಂನಲ್ಲಿ ಗಣತಿ ನಮೂನೆಯೇ ಅತ್ಯಂತ ಮುಖ್ಯ. ಬೂತ್ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡಿ 2 ಸೆಟ್ ಗಣತಿ ನಮೂನೆಗಳನ್ನು ತಲುಪಿಸಲಿದ್ದಾರೆ. ವಿಶೇಷವೆಂದರೆ, ಗಣತಿ ನಮೂನೆಯಲ್ಲಿರುವ ಪ್ರತಿ ಮತದಾರರಿಗೂ ಪ್ರತ್ಯೇಕ ಕ್ಯೂಆರ್ ಕೋಡ್ ಇರಲಿದೆ ಎಂದು ವಿವರಿಸಿದರು.

ಮತದಾರರ ಗಮನಕ್ಕೆ

ಬೂತ್ ಮಟ್ಟದ ಅಧಿಕಾರಿಗಳು ಗಣತಿ ನಮೂನೆಯನ್ನು ಮನೆಗೆ ತಂದಾಗ ಸಾರ್ವಜನಿಕರು ಅದರಲ್ಲಿ 1 ಸೆಟ್ ಅನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಅಧಿಕಾರಿಗಳಿಗೆ ಮರಳಿ ನೀಡಬೇಕು. ಮತ್ತೊಂದು ಸೆಟ್ ಗಣತಿ ನಮೂನೆಯನ್ನು ಭವಿಷ್ಯದ ಸಾಕ್ಷಿಗಾಗಿ ಮತದಾರರೇ ತಮ್ಮ ಬಳಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. ಇನ್ನು 2002ರ ಮತದಾರರ ಪಟ್ಟಿಯಲ್ಲಿ ಯಾರ ಹೆಸರು ದಾಖಲಾಗಿದೆಯೋ, ಅಂತಹವರ ಹೆಸರುಗಳನ್ನು ಕಡ್ಡಾಯವಾಗಿ ಪರಿಶೀಲನೆಗೆ ಒಳಪಡಿಸಲಾಗುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Karnataka SIR: ಕರ್ನಾಟಕದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಎಂದಿನಿಂದ? ಹೇಗೆಲ್ಲಾ ನಡೆಯುತ್ತೆ? ಇಲ್ಲಿದೆ ವಿವರ

ರಾಜ್ಯದ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿ ಸಭೆ ನಡೆಸಲಾಗಿದೆ. ರಾಜಕೀಯ ಪಕ್ಷಗಳು ಬಿಎಲ್​ಎಗಳನ್ನು ನೇಮಕ ಮಾಡಬಹುದು. ಮಾಧ್ಯಮಗಳಿಗೂ ಸಹ ತರಬೇತಿ ಕಾರ್ಯಾಗಾರ ನಡೆಸಲಾಗುವುದು. ಗ್ರಾ.ಪಂ. ಮಟ್ಟದಲ್ಲಿ ವೋಟರ್ ಫೆಸಿಲಿಟೇಷನ್ ಸೆಂಟರ್​ಗಳ ಓಪನ್​​ ಮಾಡಲಾಗುತ್ತದೆ. ಎಸ್​ಐಆರ್​ ಪ್ರಕ್ರಿಯೆಗೆ 25,284 ಬಿಎಲ್​ಎಗಳ ನೇಮಕ ಮಾಡಲಾಗಿದೆ ಎಂದು ಅನ್ಬುಕುಮಾರ್​ ಮಾಹಿತಿ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆ ಶಿ​ವಕುಮಾರ್
ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆ ಶಿ​ವಕುಮಾರ್