AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SIR: ಕರ್ನಾಟಕದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಎಂದಿನಿಂದ? ಹೇಗೆಲ್ಲಾ ನಡೆಯುತ್ತೆ? ಇಲ್ಲಿದೆ ವಿವರ

ಕರ್ನಾಟಕ ಮತದಾರರ ಪಟ್ಟಿ ಪರಿಷ್ಕರಣೆ: ಚುನಾವಣಾ ಆಯೋಗವು ಕರ್ನಾಟಕದಲ್ಲಿಯೂ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕಟಿಸಿದೆ. ಜೂ.30 ರಿಂದ ಜು.29 ರವರೆಗೆ ಮನೆ ಮನೆ ಸಮೀಕ್ಷೆ ನಡೆಯಲಿದ್ದು, ಆಗಸ್ಟ್ 5ಕ್ಕೆ ಕರಡು ಪಟ್ಟಿ ಪ್ರಕಟವಾಗಲಿದೆ. ಅರ್ಹ ನಾಗರಿಕರ ಸೇರ್ಪಡೆ, ತಪ್ಪುಗಳ ಸರಿಪಡಿಸುವಿಕೆ, ಹಾಗೂ ನಕಲಿ ಮತದಾರರ ತೆಗೆದುಹಾಕುವುದು ಇದರ ಮುಖ್ಯ ಉದ್ದೇಶ. ಅಕ್ಟೋಬರ್ 7ರಂದು ಅಂತಿಮ ಪಟ್ಟಿ ಪ್ರಕಟವಾಗಲಿದೆ. ಸಂಪೂರ್ಣ ಪ್ರಕ್ರಿಯೆಯ ಮಾಹಿತಿ ಇಲ್ಲಿದೆ.

Karnataka SIR: ಕರ್ನಾಟಕದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಎಂದಿನಿಂದ? ಹೇಗೆಲ್ಲಾ ನಡೆಯುತ್ತೆ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರImage Credit source: AI Image
ಪ್ರಸನ್ನ ಗಾಂವ್ಕರ್​
| Edited By: |

Updated on:May 14, 2026 | 5:34 PM

Share

ಬೆಂಗಳೂರು, ಮೇ 14: ಚುನಾವಣಾ ಆಯೋಗವು ದೇಶದಲ್ಲಿ 3ನೇ ಹಂತದ ಮತದಾರರ ಪಟ್ಟಿ ಪರಿಷ್ಕರಣೆ (SIR) ಘೋಷಿಸಿದ್ದು, ಕರ್ನಾಟಕಕ್ಕೂ ಇದು ಅನ್ವಯವಾಗಲಿದೆ. ಈ ಸಂಬಂಧ ಜೂ.20ರಿಂದ 29ರವರೆಗೆ ಅಧಿಕಾರಿಗಳಿಗೆ ತರಬೇತಿ ಮತ್ತು ಪೂರ್ವ ಸಿದ್ಧತೆ ನಡೆಯಲಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಮನೆ ಮನೆ ಭೇಟಿ ಮತ್ತು ಸಮೀಕ್ಷೆ ನಡೆಯಲಿದೆ. ಆ ಬಳಿಕ ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ ಆಗಲಿದ್ದು, ಆ.5ರಿಂದ ಸೆ.4ರವರೆಗೆ ಆಕ್ಷೇಪಣೆ, ಹೊಸ ಸೇರ್ಪಡೆ, ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಅಂತಿಮ ಮತದಾರರ ಪಟ್ಟಿ ಅಕ್ಟೋಬರ್ 7ರಂದು ಪ್ರಕಟವಾಗಲಿದೆ.

ಯಾಕಾಗಿ ಮತದಾರರ ಪಟ್ಟಿ ಪರಿಷ್ಕರಣೆ?

  • ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳುವುದನ್ನು ಖಚಿತಪಡಿಸಿಕೊಳ್ಳುವುದು.
  • ಮತದಾರರ ಪಟ್ಟಿಯಲ್ಲಿನ ಹೆಸರು, ವಯಸ್ಸು, ವಿಳಾಸ ಮುಂತಾದ ತಪ್ಪುಗಳನ್ನು ಸರಿಪಡಿಸುವುದು.
  • ಮೃತಪಟ್ಟವರು, ಬೇರೆ ಸ್ಥಳಕ್ಕೆ ಸ್ಥಳಾಂತರಗೊಂಡವರು ಅಥವಾ ನಕಲಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವುದು.
  • ಮುಂಬರುವ ಚುನಾವಣೆಗಳಿಗಾಗಿ ಅತ್ಯಂತ ನಿಖರವಾದ ಮತ್ತು ನವೀಕೃತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು.
  • ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಲು ಮತ್ತು ಅಗತ್ಯವಿದ್ದರೆ ಬದಲಾವಣೆ ಮಾಡಲು ಅವಕಾಶ ನೀಡುವುದು

ಇದನ್ನೂ ಓದಿ: ಮೇ 30ರಿಂದ 3ನೇ ಹಂತದ SIR; ಕರ್ನಾಟಕ ಸೇರಿ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ

2025ರ ಅಪಡೇಟ್ ಪ್ರಕಾರ ರಾಜ್ಯದಲ್ಲಿ ಒಟ್ಟು 5 ಕೋಟಿ 57ಲಕ್ಷದ 36 ಸಾವಿರದ 561 ಮತದಾರರಿದ್ದಾರೆ ಎನ್ನಲಾಗಿದೆ. ಈ ಪೈಕಿ ಮೃತರು, ನಕಲಿ ಮತದಾರರು ಸೇರಿದಂತೆ ಸ್ಥಳಾಂತರಗೊಂಡಿರುವವ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯುವ ಮತ್ತು ಪಟ್ಟಿಯಲ್ಲಿ ಸೇರ್ಪಡೆ ಆಗದವರ ಹೆಸರನ್ನು ಸೇರಿಸುವ ಕಾರ್ಯ ಮತದಾರರ ಪಟ್ಟಿ ಪರಿಷ್ಕರಣೆ (SIR) ವೇಳೆ ನಡೆಯಲಿದೆ,

ಪರಿಷ್ಕರಣೆ ಪ್ರಕ್ರಿಯೆ ಹೇಗೆ?

  • 2025ರ ಮತದಾರರ ಪಟ್ಟಿಯಲ್ಲಿರುವಂತೆ ಮತದಾರರ ವಿವರ, ಗಣತಿ ನಮೂನೆಗಳನ್ನು ದ್ವಿಪ್ರತಿಯಲ್ಲಿ ಮುದ್ರಿಸಿ BLOಗಳಿಗೆ ಹಂಚಿಕೆ
  • BLOಗಳ ಮೂಲಕ ಪ್ರತಿಯೊಂದು ಮತದಾರರ ಮನೆಗೆ ಭೇಟಿ ನೀಡಿ ಮತದಾರರಿಗೆ ವಿತರಿಸಿ ಸ್ವೀಕೃತಿ ಪಡೆಯುವುದು
  • ಮತದಾರರು ತಾವು ಸ್ವೀಕರಿಸಿದ ಗಣತಿ ನಮೂನೆಯಲ್ಲಿನ ತಮ್ಮ ವಿವರಗಳನ್ನು ಪರಿಶೀಲಿಸಿ ಸರಿಯೆಂದು ದೃಢಪಡಿಸಬೇಕು
  • ನಂತರ ಸಹಿ ಮಾಡಿ ಗಣತಿ ನಮೂನೆಗಳನ್ನು BLOರವರಿಗೆ ಮರಳಿಸಬೇಕು, ಈ ಹಂತದಲ್ಲಿ ಮತದಾರರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸಲಾಗುವುದಿಲ್ಲ.
  • ಗಣತಿ ನಮೂನೆಗಳನ್ನು ಭರ್ತಿ ಮಾಡಿ ಸಹಿ ಮಾಡಿ BLOರವರಿಗೆ ಹಿಂತಿರುಗಿಸಿದ ಎಲ್ಲಾ ಮತದಾರರು ಕರಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳುತ್ತಾರೆ.
  • ಗಣತಿ ನಮೂನೆ ಹಿಂದಿರುಗಿಸದೇ ಇರುವ ಮತದಾರರ ಕುರಿತು ಆಯೋಗ ಮುಂದಿನ ಕ್ರಮ ಜರುಗಿಸುತ್ತದೆ
  • 2025ರ ಮತದಾರರ ಪಟ್ಟಿಯಲ್ಲಿರುವ ಮತದಾರರು ಗಣತಿ ನಮೂನೆಗಳನ್ನು ಹಿಂದಿರುಗಿಸದೇ ಇರುವವರನ್ನು ಪ್ರತ್ಯೇಕವಾಗಿ ಸಂಭವನೀಯ ಗೈರುಹಾಜರಿದಾರರು , ಸಂಭವನೀಯ ಮೃತರು , ಸಂಭವನೀಯ ನಕಲಿ, ಸಂಭವನೀಯ ಸ್ಥಳಾಂತರಗೊಂಡವರು ಎಂದು ವಿಂಗಡಿಸಲಾಗುತ್ತದೆ. ಅಂತಹವರ ಪಟ್ಟಿಯನ್ನು BLOರವರು ತಯಾರಿಸಿ EROರ ವರಿಗೆ ಮುಂದಿನ ಕ್ರಮಕ್ಕೆ ಸಲ್ಲಿಸುತ್ತಾರೆ
  • ಸಂಭವನೀಯ ಗೈರುಹಾಜರಿದಾರರು / ಸಂಭವನೀಯ ಮೃತರು / ಸಂಭವನೀಯ ನಕಲಿ / ಸಂಭವನೀಯ ಸ್ಥಳಾಂತರಗೊಂಡ ಮತದಾರರ ಮತಗಟ್ಟೆವಾರು ಪಟ್ಟಿಗಳನ್ನು, ಸಂಬಂಧಿತ ಮತಗಟ್ಟೆ/ ಗ್ರಾಮ ಪಂಚಾಯತ್ /ನಗರ ಸ್ಥಳೀಯ ಸಂಸ್ಥೆ ಕಚೇರಿಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲಾಗುತ್ತದೆ
  • ಇದರಿಂದ ಸಾರ್ವಜನಿಕರಿಗೆ ಹೆಸರು ಸೇರಿಸದಿರುವ ಕಾರಣಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗುತ್ತದೆ
  • ಈ ಪಟ್ಟಿಗಳನ್ನು ಕ್ರೋಢೀಕರಿಸಿ ಮುಖ್ಯ ಚುನಾವಣಾಧಿಕಾರಿಗಳ (CEO) ವೆಬ್‌ಸೈಟ್‌ನಲ್ಲಿ ಸಹ ಪ್ರಕಟಿಸಲಾಗುತ್ತದೆ
  • ಸದರಿ ಪಟ್ಟಿಗಳನ್ನು ಮಾನ್ಯತೆ ಪಡೆದ ಮತ್ತು ನೋಂದಾಯಿತ ರಾಜಕೀಯ ಪಕ್ಷಗಳಿಗೆ ಒದಗಿಸಲಾಗುತ್ತದೆ.
  • ನಂತರ EROರವರು ಅಂತಹ ಮತದಾರರಿಗೆ ನಿಯಮಾನುಸಾರ ನೋಟೀಸ್ ನೀಡಿ ಭಾರತ ಚುನಾವಣಾ ಆಯೋಗವು ನಿರ್ಧಿಷ್ಟ ಪಡಿಸಿರುವ 12 ದಾಖಲೆಗಳ ಪೈಕಿ ಯಾವುದಾದರೂ ಒಂದನ್ನು ಸಲ್ಲಿಸಲು ಸೂಚಿಸುತ್ತಾರೆ.
  • ERO ವಿಚಾರಣೆ ನಡೆಸಿ ಅರ್ಹರಿದ್ದಲ್ಲಿ ಅಂತಹ ಮತದಾರರನ್ನು ಅಂತಿಮ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಕುರಿತು ನಿರ್ಧರಿಸಿ, ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
  • ನೋಂದಣಾಧಿಕಾರಿಗಳ ಆದೇಶದಿಂದ ಬಾಧಿತರಾದವರು ಸಂಬಂಧಪಟ್ಟ ಜಿಲ್ಲಾ ಚುನಾವಣಾಧಿಕಾರಿಗಳಿಗೆ 15 ದಿನಗಳ ಒಳಗಾಗಿ ಪ್ರಥಮ ಮೇಲ್ಮನವಿಯನ್ನು ಸಲ್ಲಿಸಬಹುದು.
  • ಪ್ರಥಮ ಮೇಲ್ಮನವಿಯ ಆದೇಶದಿಂದ ಬಾಧಿತರಾದವರು ರಾಜ್ಯದ ಮುಖ್ಯ ಚುನಾವಣಾಧಿಕಾರಿಯವರಿಗೆ ದ್ವಿತೀಯ ಮೇಲ್ಮನವಿಯನ್ನು 30 ದಿನಗಳೊಳಗಾಗಿ ಸಲ್ಲಿಸಬಹುದು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:31 pm, Thu, 14 May 26

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!