ವಕ್ಫ್ ಮಂಡಳಿ ನೋಟಿಸ್: ಕರ್ನಾಟಕ ರೈತರ ಅಹವಾಲು ಆಲಿಸಲು ಜಂಟಿ ಸಂಸದೀಯ ಸಮಿತಿಗೆ ತೇಜಸ್ವಿ ಸೂರ್ಯ ಪತ್ರ

ಕರ್ನಾಟಕದಲ್ಲಿ ವಕ್ಫ್ ಮಂಡಳಿ ರೈತರಿಗೆ ನೀಡಿರುವ ನೋಟಿಸ್‌ಗಳು ತೀವ್ರ ಪ್ರತಿಭಟನೆಗೆ ಕಾರಣವಾಗಿವೆ. ಈ ವಿಚಾರದಲ್ಲಿ ತೇಜಸ್ವಿ ಸೂರ್ಯ ಅವರು ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷರಿಗೆ ಪತ್ರ ಬರೆದು ರೈತರನ್ನು ಸಾಕ್ಷಿಗಳಾಗಿ ಆಹ್ವಾನಿಸುವಂತೆ ಮನವಿ ಮಾಡಿದ್ದಾರೆ. ಪೀಡಿತ ರೈತರ ನಿಯೋಗವನ್ನು ಸಮಿತಿಯ ಮುಂದೆ ಹಾಜರುಪಡಿಸುವ ಮೂಲಕ ಸಮಸ್ಯೆಯನ್ನು ಪರಿಹರಿಸಲು ಅವರು ಒತ್ತಾಯಿಸಿದ್ದಾರೆ.

ವಕ್ಫ್ ಮಂಡಳಿ ನೋಟಿಸ್: ಕರ್ನಾಟಕ ರೈತರ ಅಹವಾಲು ಆಲಿಸಲು ಜಂಟಿ ಸಂಸದೀಯ ಸಮಿತಿಗೆ ತೇಜಸ್ವಿ ಸೂರ್ಯ ಪತ್ರ
ತೇಜಸ್ವಿ ಸೂರ್ಯ
Follow us
|

Updated on: Oct 30, 2024 | 11:55 AM

ಬೆಂಗಳೂರು, ಅಕ್ಟೋಬರ್ 30: ಕರ್ನಾಟಕದಲ್ಲಿ ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್ ನೀಡಿರುವ ವಿಚಾರ ತೀವ್ರ ಚರ್ಚೆಗೆ ಮತ್ತು ಪ್ರತಿಭಟನೆಗೆ ಗ್ರಾಸವಾದ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆ ಬಗ್ಗೆ ಮಧ್ಯ ಪ್ರವೇಶಿಸಿದ್ದಾರೆ. ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್​​ಗೆ ಪತ್ರ ಬರೆದಿರುವ ತೇಜಸ್ವಿ ಸೂರ್ಯ, ಸಮಿತಿಯ ಮುಂದೆ ಸಾಕ್ಷಿಗಳಾಗಿ ರೈತರ ನಿಯೋಗವನ್ನು ಆಹ್ವಾನಿಸಬೇಕೆಂದು ಮನವಿ ಮಾಡಿದ್ದಾರೆ.

ಈ ವಿಚಾರವಾಗಿ ತಾವು ಬರೆದಿರುವ ಪತ್ರ ಮತ್ತು ಅದಕ್ಕೆ ಸಂಬಂಧಿಸಿದ ವಿವರನ್ನು ತೇಜಸ್ವಿ ಸೂರ್ಯ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಜಿ ಅವರಿಗೆ ಪತ್ರ ಬರೆದು, ವಿಜಯಪುರ ಜಿಲ್ಲೆ ಮತ್ತು ಕರ್ನಾಟಕದ ಸುತ್ತಮುತ್ತಲಿನ ಇತರ ಪ್ರದೇಶಗಳ ರೈತರಿಗೆ ಅವರ ಭೂಮಿಯನ್ನು ವಕ್ಫ್ ಆಸ್ತಿ ಎಂದು ತಪ್ಪಾಗಿ ನೋಟಿಸ್ ನೀಡಿರುವುದರ ಬಗ್ಗೆ ಗಮನ ಸೆಳೆಯಲಾಗಿದೆ ಎಂದು ಎಕ್ಸ್​ ಸಂದೇಶದಲ್ಲಿ ತೇಜಸ್ವಿ ಸೂರ್ಯ ಉಲ್ಲೇಖಿಸಿದ್ದಾರೆ.

ತೇಜಸ್ವಿ ಸೂರ್ಯ ಎಕ್ಸ್ ಸಂದೇಶ

ರೈತರಿಗೆ ನೋಟಿಸ್‌ಗಳನ್ನು ನೀಡಿದ್ದರ ಹೊರತಾಗಿ, ಕಾನೂನು ಪ್ರಕ್ರಿಯೆಗಳನ್ನು ಅನುಸರಿಸದೆ ಕೆಲವು ಜಮೀನುಗಳ ಆರ್‌ಟಿಸಿ, ಪಹಣಿ ಮತ್ತು ಮ್ಯುಟೇಶನ್ ರಿಜಿಸ್ಟರ್‌ಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಸಮಿತಿಯ ಮುಂದೆ ಸಾಕ್ಷಿಗಳಾಗಿ ಈ ರೈತರ ನಿಯೋಗವನ್ನು ಆಹ್ವಾನಿಸಲು ಮತ್ತು ಈ ಸಮಸ್ಯೆಯ ಪ್ರಮಾಣವನ್ನು ನೇರವಾಗಿ ಅರ್ಥಮಾಡಿಕೊಳ್ಳಲು ಮನವಿ ಮಾಡಲಾಗಿದೆ. ಅಷ್ಟೇ ಅಲ್ಲದೆ, ಸಾರ್ವಜನಿಕ ವಿಚಾರಣೆಗಾಗಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಮನವಿ ಮಾಡಲಾಗಿದೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಇದನ್ನೂ ಓದಿ: ವಕ್ಫ್ ಆಸ್ತಿ ವಿವಾದ: ವಿಜಯಪುರ ಜಿಲ್ಲೆಯ ರೈತರ ಹೋರಾಟಕ್ಕೆ ಮೊದಲ ಜಯ

ಕರ್ನಾಟಕದಲ್ಲಿ ವಕ್ಫ್ ಮಂಡಳಿ ರೈತರಿಗೆ ನೋಟಿಸ್ ನೀಡುತ್ತಿರುವ ವಿಚಾರ ಇದೀಗ ಬಹಳಷ್ಟು ಚರ್ಚೆಯಲ್ಲಿದೆ. ಈ ವಿದ್ಯಮಾನವು ರಾಜಕೀಯವಾಗಿಯೂ ಬಹಳಷ್ಟು ಚರ್ಚೆಗೆ ಗ್ರಾಸವಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಸಿಡಿದೆದ್ದಿದೆ. ಈವರೆಗೆ ವಿಜಯಪುರ, ಕಲಬುರಗಿ, ಧಾರವಾಡ ಜಿಲ್ಲೆಗಳ ರೈತರಿಗೆ ವಕ್ಫ್ ಮಂಡಳಿಯಿಂದ ನೋಟಿಸ್​ಗಳು ಬಂದಿವೆ. ಈ ಮಧ್ಯೆ, ಮಂಡ್ಯದಲ್ಲಿಯೂ ಎಕರೆಗಟ್ಟಲೆ ಗೋಮಾಳ ಜಮೀನನ್ನು ಮಸೀದಿಗೆ ಪಹಣಿ ಮಾಡುವಂತೆ ಮುಸ್ಲಿಮರು ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ಜಾಮೀನು ಅರ್ಜಿ ತೀರ್ಪು; ಲೈವ್ ನೋಡಿ
ದರ್ಶನ್ ಜಾಮೀನು ಅರ್ಜಿ ತೀರ್ಪು; ಲೈವ್ ನೋಡಿ
ಹೇಗಿತ್ತು ನೋಡಿ ‘ಟಾಕ್ಸಿಕ್’ ಸೆಟ್​ ಹಾಕಿದ ಪ್ರದೇಶ; ಇಲ್ಲಿದೆ ವಿಡಿಯೋ
ಹೇಗಿತ್ತು ನೋಡಿ ‘ಟಾಕ್ಸಿಕ್’ ಸೆಟ್​ ಹಾಕಿದ ಪ್ರದೇಶ; ಇಲ್ಲಿದೆ ವಿಡಿಯೋ
ಕೆಎಸ್​ಆರ್​ಟಿಸಿ ಐರಾವತ ಕ್ಲಬ್ ಕ್ಲಾಸ್ 2.0: ಹೊಸ ವೋಲ್ವೋ ವಿಶೇಷಗಳೇನು?
ಕೆಎಸ್​ಆರ್​ಟಿಸಿ ಐರಾವತ ಕ್ಲಬ್ ಕ್ಲಾಸ್ 2.0: ಹೊಸ ವೋಲ್ವೋ ವಿಶೇಷಗಳೇನು?
ಪಕ್ಕಾ ಪ್ಲ್ಯಾನ್ ಮಾಡಿ ಎಲ್ಲರನ್ನೂ ಹೊಡೆದ ಹನುಮಂತ; ತಂತ್ರಕ್ಕೆ ಎಲ್ಲರೂ ಶಾಕ್
ಪಕ್ಕಾ ಪ್ಲ್ಯಾನ್ ಮಾಡಿ ಎಲ್ಲರನ್ನೂ ಹೊಡೆದ ಹನುಮಂತ; ತಂತ್ರಕ್ಕೆ ಎಲ್ಲರೂ ಶಾಕ್
ಸಾಲಿಗ್ರಾಮ ಮನೆಯಲ್ಲಿದ್ದರೆ ಪೂಜಿಸುವುದು ಹೇಗೆಂದು ತಿಳಿಯಿರಿ
ಸಾಲಿಗ್ರಾಮ ಮನೆಯಲ್ಲಿದ್ದರೆ ಪೂಜಿಸುವುದು ಹೇಗೆಂದು ತಿಳಿಯಿರಿ
Nithya Bhavishya: ಜಲಪೂರ್ಣ ದಿನದಂದು ಯಾವ ರಾಶಿಗೆಲ್ಲಾ ಶುಭ, ಅಶುಭ
Nithya Bhavishya: ಜಲಪೂರ್ಣ ದಿನದಂದು ಯಾವ ರಾಶಿಗೆಲ್ಲಾ ಶುಭ, ಅಶುಭ
ವಿಡಿಯೋ: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ
ವಿಡಿಯೋ: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ
ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ
ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ
ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಕಾರು ಚಲಾಯಿಸಿದ ಬಾಲಕ
ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಕಾರು ಚಲಾಯಿಸಿದ ಬಾಲಕ