ವಕ್ಫ್ ವಿವಾದ: ಸತ್ಯಾಸತ್ಯತೆ ಪರಿಶೀಲಿಸಿ ಕ್ರಮ, ಹುಬ್ಬಳ್ಳಿಯಲ್ಲಿ ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭರವಸೆ

ಕರ್ನಾಟಕದಲ್ಲಿ ವಕ್ಫ್ ಭೂಮಿ ವಿವಾದದ ಹಿನ್ನೆಲೆಯಲ್ಲಿ, ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಹುಬ್ಬಳ್ಳಿಗೆ ಭೇಟಿ ನೀಡಿ ರೈತರ ಅಹವಾಲುಗಳನ್ನು ಆಲಿಸುತ್ತಿದ್ದಾರೆ. ವಕ್ಫ್ ಬೋರ್ಡ್‌ನಿಂದ ರೈತರ ಭೂಮಿ ಕಬಳಿಕೆಯ ಆರೋಪಗಳ ಬಗ್ಗೆ ತನಿಖೆ ನಡೆಸಲು ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಜಗದಾಂಬಿಕಾ ಪಾಲ್ ಏನಂದರು ಎಂಬ ವಿವರ ಇಲ್ಲಿದೆ.

ವಕ್ಫ್ ವಿವಾದ: ಸತ್ಯಾಸತ್ಯತೆ ಪರಿಶೀಲಿಸಿ ಕ್ರಮ, ಹುಬ್ಬಳ್ಳಿಯಲ್ಲಿ ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭರವಸೆ
ಜಗದಾಂಬಿಕಾ ಪಾಲ್ (ಸಂಗ್ರಹ ಚಿತ್ರ)
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: Ganapathi Sharma

Updated on:Nov 07, 2024 | 10:20 AM

ಹುಬ್ಬಳ್ಳಿ, ನವೆಂಬರ್ 7: ಕರ್ನಾಟಕದಲ್ಲಿ ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ಪರಿಶೀಲನೆಗಾಗಿ ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಗುರುವಾರ ಹುಬ್ಬಳ್ಳಿಗೆ ಭೇಟಿ ನೀಡಿದರು. ಜಿಲ್ಲೆಯ ರೈತರ ಅಹವಾಲುಗಳನ್ನು ಸ್ವೀಕರಿಸುವ ಮುನ್ನ ಮಾತನಾಡಿದ ಅವರು, ಕೇಂದ್ರ ಸರ್ಕಾರವು ‘ವಕ್ಫ್ ಕಾಯ್ದೆಗೆ-2024’ಕ್ಕೆ ತಿದ್ದುಪಡಿ ತರಲು ಹೊರಟಿದೆ. ಕರ್ನಾಟಕದಲ್ಲಿನ ಸಮಸ್ಯೆಗಳ ಬಗ್ಗೆ ಸಂಸದ ತೇಜಸ್ವಿ ಸೂರ್ಯ ನನ್ನ ಗಮನ ಸೇಳೆದಿದ್ದರು. ದೆಹಲಿ ರೀತಿಯಲ್ಲಿ ರಾಜ್ಯದಲ್ಲಿ ಕೂಡ ರೈತರು ವಕ್ಫ್ ಬೋರ್ಡ್​ನಿಂದ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು.

ರಾಜ್ಯದ ರೈತರ ಸಮಸ್ಯೆಗಳನ್ನು ಆಲಿಸುವುದಕ್ಕೆಂದೇ ಕರ್ನಾಟಕಕ್ಕೆ ಬಂದಿದ್ದೇನೆ. ಇಲ್ಲಿನ ರೈತರು ದಶಕಗಳ ಕಾಲ ಉಳಿಮೆ ಮಾಡಿದ ಜಮೀನುಗಳನ್ನು ವಕ್ಫ್ ಬೋರ್ಡ್ ಏಕಾಏಕಿ ತನ್ನದೆಂದು ಹೇಳುತ್ತಿದೆ. ರೈತರು ತಮ್ಮ ಆಸ್ತಿ ಪತ್ರದ ವಿವರಗಳನ್ನು ತಂದಿದ್ದಾರೆ. ರೈತರ ಹೆಸರಲ್ಲಿರು ಭೂ ದಾಖಲೆ ವಿವರ ನೀಡುತ್ತಿದ್ದಾರೆ. ಇನ್ನೂ ರೈತರ ಅಹವಾಲು ಸ್ವೀಕರಿಸುತ್ತೇನೆ ಎಂದರು.

ಜಗದಾಂಬಿಕಾ ಪಾಲ್ ಹೇಳಿದ್ದೇನು?

ಕಳೆದ 60-70 ವರ್ಷಗಳಿಂದ ಕೃಷಿ ಮಾಡುತ್ತಿರುವ ಭೂಮಿ ಮೇಲೆ ವಕ್ಫ್ ಬೋರ್ಡ ಹಕ್ಕು ಸಾಧಿಸಲು ಹೊರಟಿದೆ. ಹೀಗಾಗಿ ರೈತರು ಪ್ರತಿಭಟಿಸುತ್ತಿದ್ದಾರೆ. ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ್ದು, ವಿಜಯಪುರ ಜಿಲ್ಲೆಗೂ ಭೇಟಿ ನೀಡುತ್ತಿದ್ದೇನೆ. ಕೇವಲ ರೈತರ ಕೃಷಿ ಭೂಮಿ ಮಾತ್ರವಲ್ಲ, ಪ್ರಾಚ್ಯವಸ್ತು ಇಲಾಖೆಯ ಪಾರಂಪರಿಕ ತಾಣಗಳನ್ನು ಸಹ ವಕ್ಫ್ ತನ್ನದೆಂದು ಪ್ರತಿಪಾದಿಸುತ್ತಿದೆ. ಈ ಬಗ್ಗೆ ಸಹ ಮಾಹಿತಿ ಪಡೆಯಲಿದ್ದೇನೆ. ಈ ಎಲ್ಲ ಬೆಳವಣಿಗೆಗಳ ಬಗ್ಗೆ ಸತ್ಯಾಸತ್ಯತೆ ತಿಳಿದು ವರದಿ ನೀಡುತ್ತೇನೆ ಎಂದು ಜಗದಾಂಬಿಕಾ ಪಾಲ್ ಹೇಳಿದರು.

ಹುಬ್ಬಳ್ಳಿಯ ಖಾಸಗಿ ಹೊಟೆಲ್​​ನಲ್ಲಿ ಅಹವಾಲು ಸ್ವೀಕಾರ ನಡೆಯಲಿದೆ. ಮನವಿ ಸ್ವೀಕಾರ ಮಾಡಿ ರೈತರ ಜೊತೆ ಸಭೆ ನಡೆಸುವ ನಿರೀಕ್ಷೆ ಇದೆ. ಸಭೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಕೂಡ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ವಕ್ಫ್ ಮಂಡಳಿ ನೋಟಿಸ್: ಕರ್ನಾಟಕ ರೈತರ ಅಹವಾಲು ಆಲಿಸಲು ಜಂಟಿ ಸಂಸದೀಯ ಸಮಿತಿಗೆ ತೇಜಸ್ವಿ ಸೂರ್ಯ ಪತ್ರ

ಕರ್ನಾಟಕದಲ್ಲಿ ವಕ್ಫ್ ವಿವಾದ ತಿವ್ರಗೊಳ್ಳುತ್ತಿದ್ದಂತೆಯೇ ಸಂಸದ ತೇಜಸ್ವಿ ಸೂರ್ಯ ಕೆಲವು ದಿನಗಳ ಹಿಂದೆ ಆ ಬಗ್ಗೆ ಜಗದಾಂಬಿಕಾ ಪಾಲ್​​ಗೆ ಪತ್ರ ಬರೆದಿದ್ದರು. ಸಮಿತಿಯ ಮುಂದೆ ಸಾಕ್ಷಿಗಳಾಗಿ ಕರ್ನಾಟಕದ ರೈತರ ನಿಯೋಗವನ್ನು ಆಹ್ವಾನಿಸಬೇಕೆಂದು ಮನವಿ ಮಾಡಿದ್ದರು. ಇದೀಗ ಅವರ ಮನವಿಯನ್ನು ಪುರಸ್ಕರಿಸಿರುವ ಸಂಸದೀಯ ಸಮಿತಿಯ ಅಧ್ಯಕ್ಷರೇ ಸ್ವತಃ ರಾಜ್ಯಕ್ಕೆ ಆಗಮಿಸಿ ರೈತರ ಅಹವಾಲು ಆಲಿಸುತ್ತಿದ್ದಾರೆ.

ಕರ್ನಾಟಕ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:20 am, Thu, 7 November 24

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ