AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್ ಆಸ್ತಿ ವಿವಾದ: ವಿಜಯಪುರ ಜಿಲ್ಲೆಯ ರೈತರ ಹೋರಾಟಕ್ಕೆ ಮೊದಲ ಜಯ

ಕರ್ನಾಟಕದಲ್ಲಿ ವಕ್ಫ್ ಬೋರ್ಡ್ ಭೂಮಿ ವಿವಾದ ಜೋರಾಗಿದ್ದು, ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪಹಣಿಯಲ್ಲಿ ವಕ್ಫ್ ಬೋರ್ಡ್ ಎಂದು ನಮೂದಿಸಿದ್ದನ್ನು ತೆರವು ಮಾಡಿದೆ. ಆ ಮೂಲಕ ವಿಜಯಪುರ ಜಿಲ್ಲೆಯ ರೈತರ ಹೋರಾಟಕ್ಕೆ ಮೊದಲ ಜಯ ಸಿಕ್ಕಂತ್ತಾಗಿದೆ. ಇತರೆ ರೈತರ ಪಹಣಿಯಲ್ಲಿಯೂ ಇದೇ ರೀತಿ ವಕ್ಪ್ ಬೋರ್ಡ್ ಎಂಬುದನ್ನು ತೆಗೆಯಲು ಮನವಿ ಮಾಡಿದ್ದಾರೆ.

ವಕ್ಫ್ ಆಸ್ತಿ ವಿವಾದ: ವಿಜಯಪುರ ಜಿಲ್ಲೆಯ ರೈತರ ಹೋರಾಟಕ್ಕೆ ಮೊದಲ ಜಯ
ವಕ್ಫ್ ಆಸ್ತಿ ವಿವಾದ: ವಿಜಯಪುರ ಜಿಲ್ಲೆಯ ರೈತರ ಹೋರಾಟಕ್ಕೆ ಮೊದಲ ಜಯ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Oct 30, 2024 | 12:02 PM

Share

ವಿಜಯಪುರ, ಅಕ್ಟೋಬರ್​ 30: ಕರ್ನಾಟಕದಲ್ಲಿ ವಕ್ಫ್ (Waqf) ಬೋರ್ಡ್ ಆಸ್ತಿ ವಿವಾದ ಭುಗಿಲೆದ್ದಿದೆ. ಇಂದು ಸಾಕಷ್ಟು ರೈತರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಇದೆಲ್ಲದರ ಮಧ್ಯೆ ಪಹಣಿಯಲ್ಲಿ ನಮೂದಾಗಿದ್ದ ಕರ್ನಾಟಕ ವಕ್ಫ್​​ ಬೋರ್ಡ್​ ಪದವನ್ನು ರಾತ್ರೋ ರಾತ್ರಿ ಕಂದಾಯ‌ ಇಲಾಖೆಯ ಅಧಿಕಾರಿಗಳು ತೆರವು ಮಾಡಿದ್ದಾರೆ. ಆ ಮೂಲಕ ಜಿಲ್ಲೆಯ ರೈತರ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ.

ರೈತರ ಪಹಣಿಯ ಕಾಲಂ ನಂಬರ್ 11ರಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿದ್ದ ಪದವನ್ನು ಕಂದಾಯ ಅಧಿಕಾರಿಗಳು‌ ಬದಲಾವಣೆ ಮಾಡಿದ್ದಾರೆ. ಅಕ್ಟೋಬರ್​ 9ರಂದು ತೆನೆಹಳ್ಳಿ ಗ್ರಾಮದ ರೈತ ಯಮನಪ್ಪ ಕೆಂಗನಾಳ ಅವರ ಜಮೀನಿನ ಪಹಣಿಯಲ್ಲಿ ನೋಟೀಸ್ ನೀಡದೇ ಪಹಣಿಯ ಕಾಲಂ ನಂಬರ್ 11ರಲ್ಲಿ ಕರ್ನಾಟಕ ವಕ್ಫ್ ಬೋರ್ಡ್ ಎಂದು ನಮೂದಿಸಿದ್ದರು. ಇದೀಗ ಯಮನಪ್ಪ ಕೆಂಗನಾಳ ಜಮೀನಿನಲ್ಲಿದ್ದ ಕರ್ನಾಟಕ ವಕ್ಫ್ ಬೋರ್ಡ್ ಎಂಬ ಪದವನ್ನು ಅಧಿಕಾರಿಗಳು ಕೈಬಿಟ್ಟಿದ್ದಾರೆ. ಹೀಗಾಗಿ ರೈತರಲ್ಲಿ ಸಂತಸ ಮೂಡಿದೆ.

ಇದನ್ನೂ ಓದಿ: ವಕ್ಫ್​ ಆಸ್ತಿ ವಿವಾದ: ರೈತರಿಗೆ ನೀಡಿದ ನೋಟಿಸ್​ ಸಮರ್ಥಿಸಿಕೊಂಡ ಸಚಿವ ಜಮೀರ್

ಇಂಡಿ ತಾಲ್ಲೂಕಿನ 41 ರೈತರ ಜಮೀನಿಗಳ ನೋಟಿಸ್ ನೀಡದೇ ಪಹಣಿಯಲ್ಲಿ ವಕ್ಫ್ ಬೋರ್ಡ್ ಎಂದು ತಹಶೀಲ್ದಾರ್ ನಮೂದಿಸಿದ್ದಾರೆ. ಇತರೆ ರೈತರ ಪಹಣಿಯಲ್ಲಿಯೂ ಇದೇ ರೀತಿ ವಕ್ಪ್ ಬೋರ್ಡ್ ಎಂಬುದನ್ನು ತೆಗೆಯಲು ಮನವಿ ಮಾಡಿದ್ದಾರೆ.

ಇನ್ನು ನಿನ್ನೆ ಸಾಯಂಕಾಲದಿಂದಲೇ ಡಿಸಿ ಕಚೇರಿ ಆವರಣದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್​ ಒದಗಿಸಲಾಗಿದೆ. ಓರ್ವ ಎಸ್​ಪಿ, ಇಬ್ಬರು ಅಡಿಷನಲ್ ಎಸ್​ಪಿ, ಇಬ್ಬರು ಡಿವೈಎಸ್ಪಿ, ನಾಲ್ವರು ಪೊಲೀಸ್ ಇನ್ಸ್‌ಪೆಕ್ಟರ್, ಆರು ಜನ ಸಬ್‌ಇನ್ಸ್‌ಪೆಕ್ಟರ್‌ ಎಚ್ಪಿಸಿ ಹಾಗೂ 50 ಪಿಸಿ ಸಿಬ್ಬಂದಿ ಮತ್ತು ಎರಡು ಡಿಆರ್​ ತುಕಡಿಗಳನ್ನು ಬದ್ಧತೆಗಾಗಿ ನಿಯೋಜನೆ ಮಾಡಲಾಗಿದೆ.

ಬಿಜೆಪಿ ಸತ್ಯಶೋಧನ ತಂಡ ಭೇಟಿ: ಪರಿಶೀಲನೆ 

ಬಿಜೆಪಿ ಸಂಸದ ಗೋವಿಂದ ಕಾರಜೋಳ ನೇತೃತ್ವದ ನಿಯೋಗ ನಿನ್ನೆ ವಿಜಯಪುರಕ್ಕೆ ಭೇಟಿ ಕೊಟ್ಟಿದೆ. ಸಿಂದಗಿ ವಿರಕ್ತ ಮಠದಲ್ಲಿ ರೈತರ ಅಹವಾಲು ಸ್ವೀಕರಿಸಿದೆ. ಬಿಜೆಪಿ ಶಾಸಕ ಹರೀಶ್ ಪೂಂಜಾ, ಮಹೇಶ್ ಟೆಂಗಿನಕಾಯಿ, ಮಾಜಿ ಎಂಎಲ್​ಸಿ ಅರುಣ್ ಶಹಾಪುರ ರೈತರ ದಾಖಲೆಗಳನ್ನ ಪರಿಶೀಲಿಸಿದ್ದಾರೆ. ಬಳಿಕ ಡಿಸಿಯೊಂದಿಗೆ ಚರ್ಚೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:24 am, Wed, 30 October 24

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More