ರೈತರಿಗೆ ನೀಡಿರುವ ವಕ್ಫ್ ನೋಟೀಸ್ ತಕ್ಷಣ ವಾಪಸ್ ಪಡೆಯಿರಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ರೈತರ ಪಹಣಿಯಲ್ಲಿ ವಕ್ಫ್ ಹೆಸರು, ರೈತರಿಗೆ ವಕ್ಫ್ ನೋಟಿಸ್ ವಿಚಾರ ಕರ್ನಾಟಕದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶಿಸಿದ್ದು ಕಂದಾಯ ಇಲಾಖೆ ಸಚಿವ ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಜೊತೆಗೆ, ರೈತರಿಗೆ ನೀಡಿರುವ ವಕ್ಫ್ ನೋಟಿಸ್​ಗಳನ್ನು ತಕ್ಷಣವೇ ಹಿಂಪಡೆಯುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಿಎಂ ಸಭೆಯಲ್ಲಿ ಏನೇನು ಚರ್ಚೆ ಆಯಿತು ಎಂಬ ವಿವರ ಇಲ್ಲಿದೆ.

ರೈತರಿಗೆ ನೀಡಿರುವ ವಕ್ಫ್ ನೋಟೀಸ್ ತಕ್ಷಣ ವಾಪಸ್ ಪಡೆಯಿರಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ಅಧಿಕಾರಿಗಳು, ಸಚಿವರ ಜತೆ ಸಿಎಂ ಸಿದ್ದರಾಮಯ್ಯ ಸಭೆ
Follow us
| Updated By: ಗಣಪತಿ ಶರ್ಮ

Updated on: Nov 02, 2024 | 2:12 PM

ಬೆಂಗಳೂರು, ನವೆಂಬರ್ 2: ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಶನಿವಾರ ಖಡಕ್‌ ಸೂಚನೆ ನೀಡಿದ್ದಾರೆ. ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದ ಅವರು, ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೇಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ನೋಟಿಸ್‌ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಗರಂ ಆದರು.

ಬೆಳವಣಿಗೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು, ವಕ್ಫ್‌ ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಆ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ ಎಂದು ಆರೋಪಿಸಿದರು.

ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಮುಖ್ಯಮಂತ್ರಿಯವರು ವಿನಂತಿ ಮಾಡಿದರು. ಜೊತೆಗೆ ಅಪ ಪ್ರಚಾರಗಳಿಗೆ ಕಿವಿಗೊಡದಂತೆ ಕೋರಿದರು. ಅಧಿಕಾರಿಗಳೂ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ಸಿಎಂ ನಿರ್ದೇಶನ ನೀಡಿದರು.

ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳೇನು?

ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು. ರೈತರು ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು.‌ ಕಾನೂನು ಬಾಹಿರವಾಗಿ ಹಾಗೂ ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು.

ಇದನ್ನೂ ಓದಿ: ವಕ್ಫ್ ವಿವಾದ: ರೈತರಿಗೆ ನೀಡಿದ್ದ ನೋಟಿಸ್​ ಹಿಂಪಡೆಯಲು ಡಿಸಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ ಎಂದ ಪರಮೇಶ್ವರ್​

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ,  ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ವಕ್ಫ್‌ ಮಂಡಳಿಯ ಸಿಇಒ ಜಿಲಾನಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌‌ ಮುಂತಾದವರು ಸಭೆಯಲ್ಲಿ ಹಾಜರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕುಮಾರಸ್ವಾಮಿ ಚುನಾವಣೆ ಸಮಯುದಲ್ಲಿ ಮಾತ್ರ ಕಣ್ಣೀರು ಸುರಿಸೋದು: ಶಿವಕುಮಾರ್
ಕುಮಾರಸ್ವಾಮಿ ಚುನಾವಣೆ ಸಮಯುದಲ್ಲಿ ಮಾತ್ರ ಕಣ್ಣೀರು ಸುರಿಸೋದು: ಶಿವಕುಮಾರ್
ಜನರ ಸಮಸ್ಯೆ ನೋಡಿ ನೋವಿನಿಂದ ಹಲವಾರು ಬಾರಿ ಅತ್ತಿದ್ದೇನೆ: ಕುಮಾರಸ್ವಾಮಿ
ಜನರ ಸಮಸ್ಯೆ ನೋಡಿ ನೋವಿನಿಂದ ಹಲವಾರು ಬಾರಿ ಅತ್ತಿದ್ದೇನೆ: ಕುಮಾರಸ್ವಾಮಿ
ಸಿಎಂ ಸೂಚನೆಯಂತೆ ನೋಟೀಸ್, ಜಮೀರ್ ಹೇಳಿದ ವಿಡಿಯೋ ತೋರಿಸಿದ ಬಿಜೆಪಿ ನಾಯಕ
ಸಿಎಂ ಸೂಚನೆಯಂತೆ ನೋಟೀಸ್, ಜಮೀರ್ ಹೇಳಿದ ವಿಡಿಯೋ ತೋರಿಸಿದ ಬಿಜೆಪಿ ನಾಯಕ
Hasanamba Darshan Live: ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನ​
Hasanamba Darshan Live: ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನ​
ತೀರ್ಥಕ್ಷೇತ್ರಗಳಲ್ಲಿ ಕಲ್ಲುಗಳನ್ನು ಜೋಡಿಸುವುದರ ಹಿಂದಿನ ರಹಸ್ಯ ತಿಳಿಯಿರಿ
ತೀರ್ಥಕ್ಷೇತ್ರಗಳಲ್ಲಿ ಕಲ್ಲುಗಳನ್ನು ಜೋಡಿಸುವುದರ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಇಂದು ಏಳು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಇಂದು ಏಳು ಗ್ರಹಗಳ ಶುಭ ಫಲವಿದೆ
ತಾತನನ್ನು ಪಿಎಂ, ಅಪ್ಪನನ್ನು ಸಿಎಂ ಮಾಡಿದ್ದು ಷಡ್ಯಂತ್ರ ಅನಿಸಿರಬಹುದು: ಸಚಿವ
ತಾತನನ್ನು ಪಿಎಂ, ಅಪ್ಪನನ್ನು ಸಿಎಂ ಮಾಡಿದ್ದು ಷಡ್ಯಂತ್ರ ಅನಿಸಿರಬಹುದು: ಸಚಿವ
ಶಿವರಾಜ್​ಕುಮಾರ್ ಮನೆಯಲ್ಲಿ ಭೈರತಿ ರಣಗಲ್ ಸುದ್ದಿಗೋಷ್ಠಿ; ಇಲ್ಲಿದೆ ಲೈವ್
ಶಿವರಾಜ್​ಕುಮಾರ್ ಮನೆಯಲ್ಲಿ ಭೈರತಿ ರಣಗಲ್ ಸುದ್ದಿಗೋಷ್ಠಿ; ಇಲ್ಲಿದೆ ಲೈವ್
ಸಿದ್ದರಾಮಯ್ಯ ಕೆಳಗಿಳಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನ್ಯಾಯ: ವಾಟಾಳ್
ಸಿದ್ದರಾಮಯ್ಯ ಕೆಳಗಿಳಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನ್ಯಾಯ: ವಾಟಾಳ್
ತಂದೆ-ತಾಯಿ ಇಲ್ಲದ ಐಶ್ವರ್ಯಾಗೆ ಬಿಗ್​ಬಾಸ್​ನಿಂದ ಭರವಸೆಯ ಪತ್ರ
ತಂದೆ-ತಾಯಿ ಇಲ್ಲದ ಐಶ್ವರ್ಯಾಗೆ ಬಿಗ್​ಬಾಸ್​ನಿಂದ ಭರವಸೆಯ ಪತ್ರ