Karnataka Rain: ಇಂದು ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವೆಡೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದ ಬಳಿಕ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಮಲೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದ ಬಳಿಕ ಮಳೆ ಶುರುವಾಗಲಿದೆ.ಮೇ 13ರವರೆಗೂ ಮಳೆ ಮುಂದುವರೆಯಲಿದೆ.

Karnataka Rain: ಇಂದು ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವೆಡೆ ಭಾರಿ ಮಳೆ ಮುನ್ಸೂಚನೆ
ಮಳೆ
Image Credit source: Arif(Twitter)
Edited By:

Updated on: May 07, 2024 | 3:23 PM

ಬಿಸಿಲಿಗೆ  ಕಾದು ಕೆಂಡದಂತಾಗಿದ್ದ ಬೆಂಗಳೂರಿಗೆ ಮಳೆ(Rain)ಯ ಸಿಂಚನವಾಗಿದೆ, ಸೋಮವಾರ ಗಂಟೆಗಟ್ಟಲೆ ಮಳೆ ಸುರಿದಿದೆ. ಇಂದು ಕೂಡ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದ ಬಳಿಕ ಮಳೆ ಶುರುವಾಗಲಿದೆ.ಮೇ 13ರವರೆಗೂ ಮಳೆ ಮುಂದುವರೆಯಲಿದೆ. ಕಲಬುರಗಿಯಲ್ಲಿ 44.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇಂದು ಮತ್ತು ನಾಳೆ ಚಾಮರಾಜನಗರ ಹಾಗೂ ರಾಮನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಒಮದೆರಡು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಕೆಲವು ಪ್ರದೇಶಗಳಲ್ಲಿ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ 07ರಿಂದ 12ರವರೆಗೆ ಮಳೆ

ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 41.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 42.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹಾವೇರಿಯಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 38.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 am, Tue, 7 May 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us