Karnataka Weather: ಮುಂದಿನ 7 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Weather Forecast: ಅಕ್ಟೋಬರ್ 16 ರಿಂದ 22 ರವರೆಗೆ ಕರ್ನಾಟಕದಾದ್ಯಂತ ಮಳೆ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆಯಿದೆ.

Karnataka Weather: ಮುಂದಿನ 7 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಮಳೆ

Updated on: Oct 16, 2025 | 8:41 AM

ಬೆಂಗಳೂರು, ಅಕ್ಟೋಬರ್​ 16: ಕರ್ನಾಟಕದಾದ್ಯಂತ ಮಳೆ (rain) ಆರ್ಭಟ ಮುಂದುವರೆಯಲಿದೆ. ಇಂದಿನಿಂದ ಮುಂದಿನ 7 ದಿನ ಅಂದರೆ ಅ. 22ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (Weather Forecast) ಮುಸ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಕುಡಿದ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಚಾಮರಾಜನಗರ, ಕೋಲಾರ, ಹಾಸನ, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚ್ಚಕಕಬಳಾುಪುರ, ಚಿಕ್ಕಮಗಳೂರು, ಸಿ.ಬಿ.ಪುರ, ಮಂಡ್ಯ, ತುಮಕೂರು, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಮತ್ತು ಹಾವೇರಿ ಮತ್ತು ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ಟ್ವೀಟ್​

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಚದುರದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ ಆಗಲಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಅದೇ ರೀತಿಯಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Weather Forecast: ರಾಜ್ಯದಲ್ಲಿ 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​, ಬೆಂಗಳೂರಿನಲ್ಲಿ ತುಂತುರು ಮಳೆಯಾಗುವ ಸಾಧ್ಯತೆ

ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್​, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:40 am, Thu, 16 October 25